Saturday 20th, April 2024
canara news

ಎತ್ತಿನಹೊಳೆ ಯೋಜನೆ ವಿರೋಧಿಸಿ "ನವದುರ್ಗೆಯರ ನದಿ ರೋದನ' ಜಾಥಾ

Published On : 11 Oct 2016   |  Reported By : Canaranews Network


ಮಂಗಳೂರು: ದ.ಕ.ಜಿಲ್ಲೆಗೆ ಮಾರಕವಾಗುವ ಎತ್ತಿನಹೊಳೆ ಯೋಜನೆಯ ವಿರುದ್ಧ ಹಲವು ಪ್ರತಿಭಟನೆ, ಹೋರಾಟಗಳು ನಡೆದರೂ ಸರಕಾರ ಸ್ಪಂದಿಸದ ಹಿನ್ನೆಲೆಯಲ್ಲಿ ಮಂಗಳೂರಿನ ಸಹ್ಯಾದ್ರಿ ಸಂಚಯನದ ವತಿಯಿಂದ ರವಿವಾರ ಜಿಲ್ಲಾಧಿಕಾರಿ ಕಚೇರಿ ಬಳಿಯಿಂದ ಶ್ರೀ ಮಂಗಳಾದೇವಿ ದೇವಸ್ಥಾನದವರೆಗೆ ನವದುರ್ಗೆಯರ ನದಿ ರೋದನ ಎಂಬ ವಿಶಿಷ್ಟ ಪ್ರತಿಭಟನ ಜಾಥಾ ನಡೆಯಿತು.ನವರಾತ್ರಿಯ 9ನೇ ದಿನವಾದ ರವಿವಾರ ನೇತ್ರಾವತಿಯ 9 ಉಪನದಿಗಳ ಸಂಕೇತವಾಗಿ ಜಾಥಾ ಹಮ್ಮಿಕೊಳ್ಳಲಾಗಿತ್ತು.

ಜಿಲ್ಲಾಧಿಕಾರಿ ಕಚೇರಿ ಬಳಿಯಿಂದ ಜಾಥಾವು ರಾವ್ ಆ್ಯಂಡ್ ರಾವ್ ಸರ್ಕಲ್, ಪುರಭವನದ ಎದುರಿನಿಂದ ಎ.ಬಿ.ಶೆಟ್ಟಿ ಸರ್ಕಲ್, ಪಾಂಡೇಶ್ವರದ ಮೂಲಕ ಸಾಗಿ ಮಂಗಳಾದೇವಿಯಲ್ಲಿ ಸಮಾಪನಗೊಂಡಿತು.ಮಂಗಳೂರಿನ ಪ್ರಮುಖ ಧಾರ್ಮಿಕ ಕೇಂದ್ರಗಳಾದ ಎ.ಬಿ.ಶೆಟ್ಟಿ ವೃತ್ತದ ಬಳಿಯ ಸೈದಾನಿ ಬಿಬಿ ದರ್ಗಾ, ರೊಸಾರಿಯೊ ಕ್ಯಾಥೆಡ್ರಲ್ ಹಾಗೂ ಶ್ರೀ ಮಂಗಳಾದೇವಿ ದೇವಸ್ಥಾನಕ್ಕೆ ತೆರಳಿ ನೇತ್ರಾವತಿಯ ನೀರನ್ನು ಸಮರ್ಪಿಸಿ ಜಿಲ್ಲೆಗೆ ಹಾಗೂ ಪಶ್ಚಿಮ ಘಟ್ಟಕ್ಕೆ ಮಾರಕವಾಗುವ ಎತ್ತಿನಹೊಳೆ ಯೋಜನೆಯಂತೆ ನಿಲ್ಲಿಸುವಂತೆ ಪ್ರಾರ್ಥಿಸಲಾಯಿತು.

 




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here