Friday 19th, April 2024
canara news

ಮಂಗಳೂರು ದಸರಾ ಸಂಪನ್ನ

Published On : 12 Oct 2016   |  Pic On: Photo credit : The Hindu


ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಮಂಗಳೂರು ದಸರಾ ಶೋಭಾಯಾತ್ರೆ ಭಾರೀ ಭಕ್ತರ ಸಮ್ಮುಖದಲ್ಲಿ ಮಂಗಳವಾರ ಸಂಜೆ ಆರಂಭವಾಗಿ ಬುಧವಾರ ಮುಂಜಾನೆ ಸಂಪನ್ನಗೊಂಡಿದೆ. ಶ್ರೀ ಕ್ಷೇತ್ರದಿಂದ ಶ್ರೀ ಮಹಾಗಣಪತಿ, ಆದಿಸಕ್ತಿ, ನವದುರ್ಗೆಯರು,ಶಾರಾದ ಮಾತೆ, ಬ್ರಹ್ಮಸ್ರೀ ನಾರಾಯಣ ಗುರು ಸ್ವಾಮಿಗಳ ವಿಗ್ರಹಗಳ ಸಹಿತ ವರ್ಣರಂಜಿತ ದಸರಾ ಮೆರವಣಿಗೆ ಕುದ್ರೋಳಿಯಿಂದ ಹೊರಟು ಕಂಬ್ಲಾ ರಸ್ತೆ ಮಣ್ಣಗುಡ್ಡ ಮಾರ್ಗವಾಗಿ ಲೇಡಿಹಿಲ್ ಸರ್ಕಲ್, ಲಾಲಾಬಾಗ್, ಬಲ್ಲಾಳ್ ಬಾಗ್, ಪಿವಿಎಸ್ ಸರ್ಕಲ್, ಕೆ.ಎಸ್ ರಾವ್, ಮಹಾಗಣಪತಿ ಹೈಸ್ಕೂಲ್ ಮಾರ್ಗವಾಗಿ ಶ್ರೀ ವೆಂಕಟರಮಣ ದೇವಸ್ತ್ನಾದ ಮುಂಭಾಗದಿಂದ ಕಾರ್ ಸ್ಟ್ರೀಟ್ ಅಳಕೆಯಾಗಿ ಶ್ರೀ ಕ್ಷೇತ್ರಕ್ಕೆ ತಲುಪಿತು. ಪ್ರಮುಖ ಬೀದಿಗಳಲ್ಲಿ ೯ ಕಿ.ಮಿ ಸಾಗಿ ಬುಧವಾರ ಬೆಳಗ್ಗಿನ ಜಾವ ಕ್ಷೇತ್ರಕ್ಕೆ ಹಿಂದಿರುಗಿ ಎಲ್ಲಾ ಮೂರ್ತಿಗಳನ್ನು ಜಲಸ್ತಂಭನ ಮಾಡಲಾಯಿತು. ಶೋಭಾಯಾತ್ರೆ ಆರಂಭಕ್ಕೂ ಮುನ್ನ ಮೊದಲು ಶ್ರೀ ಶಾರದೆಯ ಸನ್ನಿಧಿಯಲ್ಲಿ ಜನಾರ್ಧನ ಪೂಜಾರಿ ಅವರು ಹಲವು ಸೇವಾಕರ್ತರನ್ನು ಸನ್ಮಾನಿಸಿದರು. ಈ ಸಂದರ್ಭ ಶಾಸಕ ಜೆ.ಆರ್.ಲೋಬೋ, ಕುದ್ರೋಳಿ ಕ್ಷೇತ್ರ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಜಯ ಸಿ ಸುವರ್ಣ, ಕ್ಷೇತ್ರಾಡಳಿತ ಮಂಡಳಿ ಅಧ್ಯಕ್ಷ ಜಯ ಸಿ ಸುವರ್ಣ, ಕ್ಷೇತ್ರಾಡಳಿತ ಮಂಡಳಿ ಅಧ್ಯಕ್ಷ ಎಚ್.ಎಸ್ ಸಾಯುರಾಮ್ , ಉಪಾಧ್ಯಕ್ಷ ರಾಘವೇಂದ್ರ ಕೂಳೂರು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಸಾಂಸ್ಕೃತಿಕ ಲೋಕದ ಅನಾವರಣ:
ಕರಾವಳಿಯ ವಿವಿಧ ಪುಣ್ಯಕ್ಷೇತ್ರಗಳಿಂದ ಪ್ರವರ್ತಿತ ಧಾರ್ಮಿಕ-ಸಾಂಸ್ಕ್ರುತಿಕ ಸ್ತಬ್ದಚಿತ್ರ, ಹುಲಿವೇಷ, ನೃತ್ಯ ರೂಪಕಗಳು ದೇಶದ ಪರಂಪರೆಯ ಡ್ಯಾಬ್ಲೋಗಳು, ತ್ರಿಶ್ಯೂರಿನ ಬಣ್ಣದ ಕೊಡೆ, ಕೇರಳದ ಚೆಂಡೆ, ವಾದ್ಯ, ಕಲ್ಲಡ್ಕ ಶಿಲ್ಪಾಗೊಂಬೆ, ಬೆಂಗಳೂರಿನ ವಾದ್ಯತಂಡ, ಮಹಾರಾಷ್ಟ್ರದ ಡೋಲು ನೃತ್ಯ, ರಾಜ್ಯದ ವಿವಿಧ ಸಾಂಸ್ಕ್ರುತಿಕ ಕಲಾತಂಡಗಳು ವೈವಿದ್ಯಮಯ ಸುಮಾರು ೭೫ಕ್ಕೂ ಅಧಿಕ ಟ್ಯಾಬ್ಲೋಗಳು ಮೆರವಣಿಗೆ ಸೊಬಗು ನೀಡಿದವು. ಈ ವೈಭವವನ್ನು ಕಣ್ತುಂಬಿಕೊಳ್ಳಲು ಜನಸಾಗರವೇ ಹರಿದು ಬಂದಿತ್ತು.

 




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here