Thursday 25th, April 2024
canara news

ದೀಪಾವಳಿ ಪ್ರಯುಕ್ತ ಭಾವೈಕ್ಯತಾ ಸಂಗಮ

Published On : 30 Oct 2016   |  Reported By : Canaranews Network


ಮಂಗಳೂರು:ವಿಧಾನಪರಿಷತ್ ಮುಖ್ಯ ಸಚೇತಕ ಐವನ್ ಡಿಸೋಜಾ ನೇತೃತ್ವದಲ್ಲಿ ದೀಪವಳಿ ಹಬ್ಬದ ಪ್ರಯುಕ್ತ ಶನಿವಾರ ಮಂಗಳೂರಿನ ಕದ್ರಿಯ ಗೋ ರಕ್ಷನಾಆಥ ಜ್ಞಾನ ಮಂದಿರದಲ್ಲಿ ಭಾವೈಕ್ಯತಾ ಸಂಗಮ ನಡೆಯಿತು.

ಕಾರ್ಯಕ್ರಮದಂಗವಾಗಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಗೂಡುದೀಪ ಸ್ಪರ್ಧೆಯಲ್ಲಿ ಸುಮಾರು ೭೫ ಗೂಡುದೀಪಗಳು ಪಾಲ್ಗೊಂಡಿದ್ದು, ಜನಾಕರ್ಷಣೆಯ ಕೇಂದ್ರವಾಗಿತ್ತು. ವಿದ್ಯಾರ್ಥಿಗಳಿಗೆ ಏರ್ಪಡಿಸಲಾಗಿದ್ದ ಭಾವೈಕತಾ ವೈಶಿಷ್ಟತೆ ಎಂಬ ವಿಷಯದ ಪ್ರಬಂಧ ಸ್ಪರ್ಧೆಯಲ್ಲಿ ಪ್ರೌಢಶಾಲೆಯ ೧೮ ಮಂದಿ ವಿದ್ಯಾರ್ಥಿಗಳು ಮತ್ತು ಪ್ರಥಮ ಹಾಗೂ ದ್ವೀತೀಯ ಪಿಯುಸಿಯ ೧೪ ಮಂದಿ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಮಕ್ಕಳಿಗಾಗಿ ಆಯೋಜಿಸಲಾದ ಚಿತ್ರಕಲಾ ಸ್ಪರ್ಧೆಯಲ್ಲಿ ೩೮ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ಅಕ್ಕಿ ವಿತರಣೆ ಮತ್ತು ಅಗತ್ಯವಿದ್ದವರಿಗೆ ಕನ್ನಡಕಗಳ ವಿತರಣೆ ನಡೆಯಿತು. ಕದ್ರಿ ಮಠದ ಪ್ರತಿನಿಧಿಯಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಂದೀಪ್ ನಾಥ್ ಜೀ ಮತ್ತು ಪಾಲಕ್ ನಾಥ್ ಜೀ ಅವರು ಎಲ್ಲರಿಗೂ ದೀಪಾವಳಿ ಹಬ್ಬದ ಶುಭ ಕೋರಿದರಲ್ಲದೆ, ಎಲ್ಲರ ಮನಸ್ಸುಗಳು ಬೆಳಗಲಿ ಎಂದು ಹಾರೈಸಿದರು. ಕಾರ್ಯಕ್ರಮದಲ್ಲಿ ಧರ್ಮಗುರು ಫಾ. ಸೆಬೆಸ್ಟಿಯನ್, ಇಮಾಮ್ ಕೌನ್ಸಿಲ್ ಕಾರ್ಯದರ್ಶಿ ಜಾಫರ್ ಸಾದಿಕ್ ಫೈಝಿ, ಶಾಸಕ ಜೆ.ಆರ್ ಲೋಬೋ, ಉಸ್ತುವಾರಿ ಸಚಿವ ರಮಾನಾಥ ರೈ ಶಾಸಕಿ ಶಕುಂತಲಾ ಶೆಟ್ಟಿ, ಮೇಯರ್ ಹರಿನಾಥ್ ಮೊದಲಾದವರು ಉಪಸ್ಥಿತರಿದ್ದರು.




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here