Friday 26th, April 2024
canara news

ಮುಖ್ಯಮಂತ್ರಿಗಳೇ ರಾಜೀನಾಮೆ ಕೊಡಿ: ಪೂಜಾರಿ ಆಗ್ರಹ

Published On : 02 Nov 2016   |  Reported By : Canaranews Network


ಮಂಗಳೂರು: ಮುಂದಿನ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ ಎಂದು ಖಾಸಗಿ ಸುದ್ದಿ ವಾಹಿನಿಯೊಂದು ಸಮೀಕ್ಷೆಯಲ್ಲಿ ತಿಳಿಸಿದ್ದರೂ ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಕೆಲವೊಂದು ಸಚಿವರು ನಿದ್ದೆಯಿಂದ ಹೊರಬಂದಂತೆ ಕಾಣುತ್ತಿಲ್ಲ. ಮುಖ್ಯಮಂತ್ರಿಗಳೇ ನಿಮಗೆ ಎಷ್ಟೇ ಸಲಹೆ ನೀಡಿದರೂ ಕೇಳುತ್ತಿಲ್ಲ. ನೀವು ನಿಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಎಂದು ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ ಆಗ್ರಹಿಸಿದ್ದಾರೆ ಸೋಮವಾರ ಮಂಗಳೂರಿನ ಪತ್ರಿಕಾಭವನದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಡಾ| ಜಿ. ಪರಮೇಶ್ವರ್, ಎಸ್.ಎಂ. ಕೃಷ್ಣ, ಡಿ.ಕೆ. ಶಿವಕುಮಾರ್ ಇವರಲ್ಲೊಬ್ಬರನ್ನು ಮುಖ್ಯಮಂತ್ರಿಯಗಿ ಮಾಡಿದರೆ ಕಾಂಗ್ರೆಸ್ಗೆ ನೆರವಾಗಬಹುದು.

ಅದರಲ್ಲೂ ಡಾ| ಜಿ. ಪರಮೇಶ್ವರ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿದರೆ ದಲಿತ ಮುಖಂಡರೊಬ್ಬರನ್ನು ಇದೇ ಮೊದಲ ಬಾರಿಗೆ ಮುಖ್ಯಮಂತ್ರಿ ಮಾಡಿರುವುದು ಕಾಂಗ್ರೆಸ್ಗೆ ಮುಂದೆ ಅಧಿಕಾರಕ್ಕೆ ಬರಲು ನೆರವಾಗಬಹುದು.ಮುಂದೆ ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದು ಸಮೀಕ್ಷೆ ಹೇಳುತ್ತದೆ. ಇದಕ್ಕಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಸರ್ಕಸ್ ಮಾಡುತ್ತಿದ್ದಾರೆ. ಆದರೆ ಸಿದ್ಧರಾಮಯ್ಯನವರು ಮಾತ್ರ ರಾಜ್ಯದಲ್ಲಿ ಕಾಂಗ್ರೆಸ್ಸನ್ನು ನಿರ್ನಾಮ ಮಾಡಲು ಹೊರಟಿದ್ದಾರೆ. ಮುಖ್ಯಮಂತ್ರಿಗಳೇ ನೀವು ಅಧಿಕಾರಕ್ಕೆ ಬರಲು ರಾಜ್ಯದ ಜನತೆ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಕಾರಣ. ಆದರೆ ನೀವು ಕಾರ್ಯಕರ್ತರಿಗೆ ಏನು ಕೊಟ್ಟಿದ್ದೀರಿ ಎಂದು ಪ್ರಶ್ನಿಸಿದರು.

 




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here