Saturday 20th, April 2024
canara news

ವೆನ್ಲಾಕ್/ಲೇಡಿಗೋಷನ್ ಆಸ್ಪತ್ರೆ ಮೇಲ್ದರ್ಜೆ ಗುರಿ: ದ.ಕ. ಜಿಲ್ಲಾಧಿಕಾರಿ ಡಾ| ಜಗದೀಶ್

Published On : 05 Nov 2016   |  Reported By : Canaranews Network


ಮಂಗಳೂರು: ವೆನ್ಲಾಕ್ ಆಸ್ಪತ್ರೆಯನ್ನು ಪ್ರಾದೇಶಿಕ ಆಸ್ಪತ್ರೆಯನ್ನಾಗಿ ರೂಪಿಸುವ ಜತೆಗೆ 28 ಕೋ. ರೂ.ಗಳಲ್ಲಿ ಅಭಿವೃದ್ಧಿಪಡಿಸುವ ಹಾಗೂ ಲೇಡಿಗೋಷನ್ ನೂತನ ಕಟ್ಟಡದಲ್ಲಿ ಸೇವೆಯನ್ನು ಫೆಬ್ರವರಿಯಿಂದ ಆರಂಭಿಸುವ ಮೂಲಕ ಪ್ರಸಕ್ತ ಆರೋಗ್ಯ ಸೇವೆಯನ್ನು ಸಮಗ್ರವಾಗಿ ಮೇಲ್ದರ್ಜೆಗೇರಿಸಲಾಗುವುದು ಎಂದು ದ.ಕ. ಜಿಲ್ಲಾಧಿಕಾರಿ ಡಾ| ಕೆ.ಜಿ. ಜಗದೀಶ್ ಹೇಳಿದರು.

ಕೆನರಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಆಶ್ರಯದಲ್ಲಿ ಇತ್ತೀಚೆಗೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಉಡುಪಿ ಸರಕಾರಿ ಆಸ್ಪತ್ರೆ ಮಾದರಿಯಲ್ಲಿ ವೆನ್ಲಾಕ್ ಆಸ್ಪತ್ರೆಯನ್ನು ಖಾಸಗಿಯಾಗಿ ಅಭಿವೃದ್ಧಿಪಡಿಸುವ ಯಾವುದೇ ಪ್ರಸ್ತಾವನೆ ನಮ್ಮ ಮುಂದಿಲ್ಲ.

ವೆನ್ಲಾಕ್ ಗೆ ರಾಜ್ಯದ ಬೇರೆ ಬೇರೆ ಭಾಗಗಳಿಂದ ಜನರು ಆಗಮಿಸುವ ಕಾರಣದಿಂದ ಇದನ್ನು ಪ್ರಾದೇಶಿಕ ಆಸ್ಪತ್ರೆಯನ್ನಾಗಿ ರೂಪಿಸಲು ಸರಕಾರದ ಗಮನ ಸೆಳೆಯಲಾಗಿದೆ. ಆರೋಗ್ಯ ಸಚಿವ ರಮೇಶ್ ಕುಮಾರ್ ಆಸ್ಪತ್ರೆಗೆ ಭೇಟಿ ನೀಡಿ ಈ ಬಗ್ಗೆ ವಿವರ ಪಡೆದು ಪೂರಕವಾಗಿ ಸ್ಪಂದಿಸಿದ್ದಾರೆ. ಹೀಗಾಗಿ ಪ್ರಾದೇಶಿಕ ಸ್ಥಾನಮಾನ ದೊರೆತರೆ ಆಸ್ಪತ್ರೆ ಸಮಗ್ರ ರೀತಿಯಲ್ಲಿ ಮೇಲ್ದರ್ಜೆಗೇರಲಿದೆ. ಲೇಡಿಗೋಶನ್ ಆಸ್ಪತ್ರೆಯ ನೂತನ ಕಟ್ಟಡ ಕಾಮಗಾರಿ ಈ ತಿಂಗಳಿನಲ್ಲಿ ಪೂರ್ಣಗೊಳ್ಳಲಿದ್ದು, ಫೆಬ್ರವರಿಯಿಂದ ಇಲ್ಲಿ ಸೇವೆ ಆರಂಭವಾಗುವ ಸಾಧ್ಯತೆಯಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

 




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here