Saturday 20th, April 2024
canara news

ದ.ಕ.ಜಿಲ್ಲೆಯಲಿ ಟಿಪ್ಪು ಜಯಂತಿಗೆ ಅವಕಾಶ ನೀಡುವುದಿಲ್ಲ: ವಿ.ಹಿಂ.ಪ.

Published On : 06 Nov 2016   |  Pic On: photo credit: DHNS


ಮಂಗಳೂರು: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನ. 10ರಂದು ರಾಜ್ಯ ಸರಕಾರಿ ಪ್ರಾಯೋಜಿತ ಟಿಪ್ಪು ಜಯಂತಿ ಆಚರಿಸಲು ಅವಕಾಶ ನೀಡುವುದಿಲ್ಲ ಎಂದು ವಿಶ್ವ ಹಿಂದೂ ಪರಿಷತ್‌ ಜಿಲ್ಲಾಧ್ಯಕ್ಷ ಜಗದೀಶ್‌ ಶೇಣವ ತಿಳಿಸಿದ್ದಾರೆ.

ಟಿಪ್ಪು ಜಯಂತಿ ಆಚರಣೆ ವಿರೋಧಿಸಿ ಬಿಜೆಪಿ ನ. 7ರಂದು ರಾಜ್ಯಾದ್ಯಂತ ಜಿಲ್ಲಾ ಕೇಂದ್ರಗಳಲ್ಲಿ ನಡೆಸುವ ಪ್ರತಿಭಟನೆಯನ್ನು ವಿಹಿಂಪ ಮತ್ತು ಬಜರಂಗದಳ ಬೆಂಬಲಿಸುತ್ತದೆ ಎಂದು ಅವರು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಕಳೆದ ವರ್ಷ ಟಿಪ್ಪು ಜಯಂತಿ ವಿರುದ್ಧ ನಡೆದ ಅಹಿತಕರ ಘಟನೆಗಳಲ್ಲಿ ಕೆಲವು ಮಂದಿ ಸಾವಿಗೀಡಾಗಿದ್ದಾರೆ. ಈ ಬಾರಿ ಟಿಪ್ಪು ಜಯಂತಿಗೆ ಮುನ್ನವೇ ಮೈಸೂರಿನ ಪಿರಿಯಾಪಟ್ಟಣದಲ್ಲಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಇನ್ನಾದರೂ ರಾಜ್ಯ ಸರಕಾರ ಟಿಪ್ಪು ಜಯಂತಿ ಆಚರಣೆ ಕೈಬಿಡಲು ಮುಂದಾಗಬೇಕು ಎಂದು ಅವರು ಆಗ್ರಹಿಸಿದರು.ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ, ಟಿಪ್ಪು ಜಯಂತಿ ಆಚರಣೆ ವಿರೋಧಿಸಿ ನಡೆಸುವ ಹೋರಾಟದ ಸ್ವರೂಪವನ್ನು ಈಗ ತಿಳಿಸಲಾಗದು ಎಂದು ಅವರು ಹೇಳಿದರು.




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here