Friday 26th, April 2024
canara news

ನ.೧೯ರಂದು ಇಂದಿರಾಗಾಂಧಿಯವರ ೧೦೦ನೇ ಜನ್ಮದಿನಾಚರಣೆ; ಡಾ.ಜಿ.ಪರಮೇಶ್ವರ್

Published On : 08 Nov 2016   |  Reported By : Canaranews Network


ಮಂಗಳೂರು: ನ.೧೯ರಂದು ದಿ.ಇಂದಿರಾ ಗಾಂಧಿಯವರ ೧೦೦ನೇ ಜನ್ಮ ದಿನಾಚರಣೆಯನ್ನು ಮಂಗಳೂರಿನ ನೆಹರೂ ಮೈದಾನದಲ್ಲಿ ರಾಜ್ಯ ಪ್ರದೇಶ ಕಾಂಗ್ರೆಸ್ ಸಮಿತಿಯ ವತಿಯಿಂದ ಹಮ್ಮಿಕೊಳ್ಳಲಾಗುವುದು ಎಂದು ರಾಜ್ಯ ಗೃಹ ಸಚಿವ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂದಿರಾ ಗಾಂಧಿಯವರ ೧೦೦ನೇ ಜನ್ಮ ದಿನಾಚರಣೆಯನ್ನು ದೇಶದಾದ್ಯಂತ ಒಂದು ವರ್ಷಗಳ ಕಾಲ ಆಚರಿಸಲಾಗುವುದು. ಕಾಂಗ್ರೆಸ್ ಹಿರಿಯ ನಾಯಕಿ ದೇಶಕ್ಕೆ ನೀಡಿದ ಕೊಡುಗೆ ಯುವ ಪೀಳಿಗೆಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಶಾಲಾ ಕಾಲೇಜುಗಳಲ್ಲಿ ವಿಚಾರ ಸಂಕಿರಣ, ಕಾರ್ಯಾಗಾರ ಹಾಗೂ ಇತರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು.

ಈ ಕಾರ್ಯಕ್ರಮದಲ್ಲಿ ದ.ಕ., ಉಡುಪಿ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ ಸೇರಿದಂತೆ ರಾಜ್ಯದ ಸುಮಾರು ೧ ಲಕ್ಷ ಪ್ರತಿನಿಧಿಗಳು ಭಾಗವಹಿಸುವ ನಿರೀಕ್ಷೆ ಇದೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಜ್ಯ ಸಚಿವ ಸಂಪುಟದ ಸದಸ್ಯರು, ರಾಜ್ಯದ ಕಾಂಗ್ರೆಸ್ ಉಸ್ತುವಾರಿ , ಎಐಸಿಸಿ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್, ಕಾಂಗ್ರೆಸ್ ಮುಖಂಡರಾದ ಮಲ್ಲಿಕಾರ್ಜುನ ಖರ್ಗೆ, ಆಸ್ಕರ್ ಫೆರ್ನಾಂಡೀಸ್, ವೀರಪ್ಪ ಮೊಯ್ಲಿ, ಜನಾರ್ದನ ಪೂಜಾರಿ ಹಾಗು ಕೆಪಿಸಿಸಿ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಜಿ.ಪರಮೇಶ್ವರ್ ತಿಳಿಸಿದ್ದಾರೆ.

 




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here