Thursday 18th, April 2024
canara news

ದ.ಕ. ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಸ್ಟ್ಯಾನಿ ಆಲ್ವಾರಿಸ್ ನೇಮಕ

Published On : 12 Nov 2016   |  Reported By : Canaranews Network


ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಯುವ ಮುಖಂಡ ಮತ್ತು ಸಾಮಾಜಿಕ ಕಾರ್ಯಕರ್ತ ಸ್ಟ್ಯಾನಿ ಆಲ್ವಾರಿಸ್ ಇವರನ್ನು ನೇಮಕ ಮಾಡಿ ಜಿಲ್ಲಾ ಉಸ್ತುವಾರಿ ಸಚಿವ ಮತ್ತು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಮಾನಾಥ ರೈ ಆದೇಶ ನೀಡಿದ್ದಾರೆ.

ನಗರದ ಬೊಂದೇಲ್ ವಾಸಿಯಾದ ಸ್ಟ್ಯಾನಿ ಆಲ್ವಾರಿಸ್ ಕಾಂಗ್ರೆಸ್‍ನ ನಿಷ್ಟಾವಂತ ಕಾರ್ಯಕರ್ತರಲ್ಲಿ ಓರ್ವರಾಗಿದ್ದು, ಸ್ಥಳೀಯವಾಗಿ ಪಕ್ಷ ಸಂಘಟನೆಗೆ ನೀಡಿದ ಕೊಡುಗೆ ಪರಿಗಣಿಸಿ ಅವರನ್ನು ಆಯ್ಕೆ ಮಾಡಲಾಗಿದೆ. ಅವರು ಕೊಂಕಣಿಯ ಪ್ರಮುಖ ಸಾಂಸ್ಕøತಿಕ ಸಂಘಟನೆ ಮಾಂಡ್ ಸೊಭಾಣ್ ಇದರ ಉಪಾಧ್ಯಕ್ಷರಾಗಿದ್ದಾರೆ. ಬೊಂದೇಲ್ ಚರ್ಚಿನ ಮುಖಂಡರಲ್ಲೋರ್ವರು. ನಾಟಕ ರಂಗದಲ್ಲಿ ಕೂಡಾ ಪರಿಚಿತರು. ಹಲವು ಕೊಂಕಣಿ ಮತ್ತು ತುಳು ಸಿನಿಮಾಗಳಲ್ಲಿ ಕೂಡಾ ನಟನೆ ಮಾಡಿದ್ದಾರೆ. ವಿವಿಧ ಸಂಘಟನೆಗಳ ಮೂಲಕ ಸಮಾಜ ಸೇವೆಯಲ್ಲಿ ನಿರತರಾಗಿದ್ದಾರೆ.




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here