Thursday 25th, April 2024
canara news

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನ.16ರ ವರೆಗೆ ನಿಷೇಧಾಜ್ಞೆ

Published On : 14 Nov 2016   |  Reported By : Canaranews Network


ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನ. 13ರಿಂದ ನ. 16ರ ಸಂಜೆ 6 ಗಂಟೆಯ ತನಕ ಸಿಆರ್‌ಪಿಸಿ ಸೆಕ್ಷನ್‌ 144ರನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.ಮಂಗಳೂರು ನಗರ ಮತ್ತು ಜಿಲ್ಲೆಯ ವಿವಿಧ ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ| ಕೆ.ಜಿ. ಜಗದೀಶ್‌ ತಿಳಿಸಿದ್ದಾರೆ.ಮಂಗಳೂರು ಪೊಲೀಸ್‌ ಕಮಿಷನರೆಟ್‌ ವ್ಯಾಪ್ತಿಯಲ್ಲಿ ಆದಿತ್ಯವಾರ ಮಧ್ಯಾಹ್ನ 2 ಗಂಟೆಯಿಂದ ನ. 16ರ ರಾತ್ರಿ 10 ಗಂಟೆಯವರೆಗೆ ಹಾಗೂ ಜಿಲ್ಲಾ ಪೊಲೀಸ್‌ ವ್ಯಾಪ್ತಿಯಲ್ಲಿ ಆದಿತ್ಯವಾರ ಸಂಜೆ 6ರಿಂದ ನ. 16ರ ಸಂಜೆ 6 ಗಂಟೆಯ ವರೆಗೆ ನಿಷೇಧಾಜ್ಞೆ ವಿಧಿಸಲಾಗಿದೆ.

ತನಿಖೆಗೆ ಪ್ರತ್ಯೇಕ ತಂಡ
ಪೊಲೀಸ್‌ ಕಮಿಷನರ್‌ ಚಂದ್ರಶೇಖರ್‌ ಅವರು ಆದಿತ್ಯವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಶನಿವಾರ ಕೊಣಾಜೆ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಇಬ್ಬರ ಕೊಲೆಯತ್ನ ಪ್ರಕರಣ ಹಾಗೂ ನ. 10ರಂದು ರಾತ್ರಿ ಉಳ್ಳಾಲ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬರ ಕೊಲೆ ಯತ್ನ ನಡೆದಿತ್ತು. ಈ ಪ್ರಕರಣಗಳಿಗೆ ಸಂಬಂಧಿಸಿ ಎರಡೆರಡು ತಂಡಗಳನ್ನು ರಚಿಸಲಾಗಿದ್ದು, ತನಿಖೆ ನಡೆಯುತ್ತಿದೆ. ಈ ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ಉಳ್ಳಾಲ ಮತ್ತು ಕೊಣಾಜೆ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಆದರೆ, ಮುಂಜಾಗ್ರತೆಯ ನಿಟ್ಟಿನಲ್ಲಿ ನಿಷೇಧಾಜ್ಞೆಯನ್ನು ಕಮಿಷನರೆಟ್‌ ವ್ಯಾಪ್ತಿಗೂ ವಿಸ್ತರಿಸಲಾಗಿದೆ ಎಂದರು.

 

 




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here