Thursday 25th, April 2024
canara news

ವೈದ್ಯಕೀಯ ವಿದ್ಯಾರ್ಥಿಗೆ ತಂಡದಿಂದ ಹಲ್ಲೆ

Published On : 21 Nov 2016   |  Reported By : Canaranews Network


ಮಂಗಳೂರು: ಉಳ್ಳಾಲ ಕೊಣಾಜೆ ಠಾಣಾ ವ್ಯಾಪ್ತಿಯ ಉಳ್ಳಾಲದ ಕೇಂದ್ರ ಬಸ್ ನಿಲ್ದಾಣದ ಬಳಿ ಇದ್ದ ಭಿನ್ನಕೋಮಿನ ವೈದ್ಯಕೀಯ ವಿದ್ಯಾರ್ಥಿ ಜೋಡಿಗಳನ್ನು ತಡೆದ ತಂಡವೊಂದನ್ನು ಯುವಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಸೋಮವಾರ ಸಂಜೆ ನಡೆದಿದ್ದು,

ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಕೋಟೆಪುರ ಕೋಡಿ ನಿವಾಸಿ ತೌಸೀಫ್ ಹಾಗೂ ಉಳ್ಳಾಲ ಸುಂದರಿಬಾಹ್ ನಿವಾಸಿ ನಿಝಾಮುದ್ದೀನ್ ಎಂದು ಗುರುತಿಸಲಾಗಿದೆ. ದೇರಳಕಟ್ಟೆ ಸಮೀಪದ ವೈದ್ಯಕೀಯ ಕಾಲೇಜೊಂದರ ಪ್ರಥಮವರ್ಷದ ವಿದ್ಯಾರ್ಥಿ ರಾಂಚಿ ಮೂಲದ ವಿದ್ಯಾರ್ಥಿ ರಾಹುಲ್ ಎಂಬಾತನಿಗೆ ಹಲ್ಲೆ ನಡೆಸಲಾಗಿದೆ.

ವಿದ್ಯಾರ್ಥಿ ಹಾಗೂ ಅದೇ ತರಗತಿಯ ಭಿನ್ನಕೋಮಿನ ವಿದ್ಯಾರ್ಥಿನಿ ಸೋಮವಾರ ಮಧ್ಯಾಹ್ನದ ಬಳಿಕ ತರಗತಿ ಮುಗಿಸಿ ಸೋಮೇಶ್ವರ ಮತ್ತು ಉಳ್ಳಾಲ ಬೀಚ್ ಗೆ ತೆರಳಿದ್ದರು. ಬಳಿಕ ಬಸ್ಸಿಗಾಗಿ ಉಳ್ಳಾಲ ಜಂಕ್ಷನ್ ನಲ್ಲಿ ನಿಂತಿದ್ದರು. ಈ ಸಂದರ್ಭ ಮಂದಿಯ ತಂಡ ಸ್ಥಳಕ್ಕೆ ಆಗಮಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಕೈ ಮತ್ತು ಮರದ ಸೋಂಟೆಯಿಂದ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here