Tuesday 16th, April 2024
canara news

ದ.ಕ. ಜಿಲ್ಲೆಯಲ್ಲಿ ಗ್ರಾಹಕ ಅರಿವು ಉನ್ನತ ಮಟ್ಟದಲ್ಲಿದೆ.

Published On : 26 Nov 2016


ಬಂಟ್ವಾಳ : ದ.ಕ.ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರ, ಒಕ್ಕೂಟಗಳು ಬಹಳ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿವೆ.ಜಿಲ್ಲೆಯ ಜನರು ಹಾಗೂ ವಿದ್ಯಾರ್ಥಿಗಳ ಗ್ರಾಹಕತನದ ಅರಿವು ಬಹಳ ಉತ್ತಮ ಮಟ್ಟದಲ್ಲಿದೆ. ಇಂತಹ ಅರಿವಿನಿಂದಾಗಿ ಶೋಷಣೆಗೆ ತಡೆಯಾಗಿದೆ-ಎಂದು ದ.ಕ.ಜಿಲ್ಲಾ ಆಹಾರ , ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರಾದ ಎ.ಟಿ.ಜಯಪ್ಪರವರು ನುಡಿದರು.ಅವರು ನವೆಂಬರ್ 25 ರಂದು ಬಂಟ್ವಾಳ ತಾಲ್ಲೂಕಿನ ಪಾಣೆಮಂಗಳೂರಿನ ಶಾರದಾ ಪ್ರೌಢ ಶಾಲೆಯಲ್ಲಿ ಜಿಲ್ಲಾ ಗ್ರಾಹಕ ಸಂಘಟನೆಗಳ ಒಕ್ಕೂಟ ಮತ್ತು ಜಿಲ್ಲಾ ಮಾಹಿತಿ ಕೇಂದ್ರದ ಆಶ್ರಯದಲ್ಲಿ ನಡೆದ ವಿದ್ಯಾರ್ಥಿ ಗ್ರಾಹಕ ಶಿಕ್ಷಣ ಶಿಬಿರವನ್ನು ದೀಪ ಬೆಳಗಿ ಉದ್ಘಾಟಿಸಿ ಮಾತನಾಡುತ್ತಿದ್ದರು.

ಪಾಣೆಮಂಗಳೂರು ಶಾರದಾ ಪ್ರೌಢ ಶಾಲೆಯ ಸಂಚಾಲಕರು ವೇದಮೂರ್ತಿ ಎಂ.ಜನಾರ್ಧನ ಭಟ್ ರವರು ಅಧ್ಯಕ್ಷತೆ ವಹಿಸಿ ಮಾತಾನಾಡುತ್ತ ಶೋಷಣೆಯ ವಿರುದ್ದ ಹೋರಾಟ ಮಾಡಬೇಕಾದರೆ ಮಕ್ಕಳಿಗೆ ಗ್ರಾಹಕ ಹಕ್ಕುಗಳ ಬಗ್ಗೆ ತಿಳುವಳಿಕೆಯಿರಬೇಕೆಂದರು. ಜಿಲ್ಲಾ ಗ್ರಾಹಕ ಸಂಘಟನೆ ಒಕ್ಕೂಟದ ಉಪಾಧ್ಯಕ್ಷ ಎಡ್ವಿನ್ ಡಿ’ಮೊಲ್ಲೊ ರವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಲಾ ಮುಖ್ಯೋಪಾಧ್ಯಾಯ ಪರಮೇಶ್ವರ ಹೆಗಡೆ ಅವರು ಸ್ವಾಗಸಿದರು. ಜಿಲ್ಲಾ ಸಂಘಟನೆ ಒಕ್ಕೂಟದ ಜತೆ ಕಾರ್ಯದರ್ಶಿ ರಾಯೀ ರಾಜಕುಮಾರ್ ಕಾರ್ಯಕ್ರಮ ನಿರೂಪಿಸಿದರು ಕಾರ್ಯದರ್ಶಿ ವಿಷ್ಣು.ಪಿ.ನಾಯಕ್ ವಂದಿಸಿದರು.

ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಒಕ್ಕೂಟದ ಉಪಾಧ್ಯಕ್ಷರು ಎಡ್ವಿನ್ ಡಿ’ಮೊಲ್ಲೊ ವಹಿಸಿದ್ದರು.ಮುಖ್ಯ ಅಥಿತಿಗಳಾಗಿ ಶಾಲಾ ಮುಖ್ಯೋಪಾಧ್ಯಾಯ ಪರಮೇಶ್ವರ ಹೆಗಡೆ ಭಾಗವಹಿಸಿದ್ದರು.

ಶಿಬಿರದಲ್ಲಿ ನಡೆಸಿದ ಸ್ಪರ್ದೆಗಳಲ್ಲಿ ಗೆದ್ದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಮಾತಾನಾಡಿದ ಮುಖ್ಯ ಅತಿಥಿಗಳು, ಇದೊಂದು ವಿಶಿಷ್ಟ ಪೂರ್ಣ ಕಾರ್ಯಕ್ರಮವಾಗಿದ್ದು ಮಕ್ಕಳಿಗೆ ಗ್ರಾಹಕರಾಗಿ ಕಾರ್ಯನಿರ್ವಹಿಸುವ ಮಾರ್ಗ ವಿಧಾನಗಳನ್ನು ತಿಳಿಸಿಕೋಡುವಲ್ಲಿ ಯಶ್ವಸಿಯಾಗಿದೆ ಇದು ಇವತ್ತಿನ ಸನ್ನಿವೇಶದಲ್ಲಿ ಅತ್ಯಗತ್ಯವಾಗಿದೆ ಎಂದರು. ಜತೆ ಕಾರ್ಯದರ್ಶಿ ರಾಯೀ ರಾಜ್ ಕುಮಾರ ವಂದನಾರ್ಪಣೆಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.

 




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here