Friday 19th, April 2024
canara news

ಕೇಂದ್ರ ಸರಕಾರದ ಜನವಿರೋಧಿ ನೀತಿ; ಕಾಂಗ್ರೆಸ್‌ ಪ್ರತಿಭಟನೆ

Published On : 27 Nov 2016   |  Reported By : Canaranews Network


ಮಂಗಳೂರು: ಕೇಂದ್ರ ಸರಕಾರ ಜನವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ದ.ಕ. ಜಿಲ್ಲಾ ಕಾಂಗ್ರೆಸ್‌ ನೇತೃತ್ವದಲ್ಲಿ ಗುರುವಾರ ಮಂಗಳೂರು ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು.

ದ.ಕ.ಜಿಲ್ಲಾ ಕಾಂಗ್ರೆಸ್‌ ಹಂಗಾಮಿ ಅಧ್ಯಕ್ಷ ಕೋಡಿಜಾಲ್‌ ಇಬ್ರಾಹಿಂ ಅವರು ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿ, ಕಪ್ಪು ಹಣ ತಡೆಯುವ ಹೆಸರಿನಲ್ಲಿ ಪ್ರಧಾನಿ ನರೇಂದ್ರ ಮೋದಿಧಿಯವರು 500 ರೂ. ಹಾಗೂ 1,000 ರೂ. ನೋಟುಗಳನ್ನು ರದ್ದುಗೊಳಿಸಿದ್ದು ರೈತರಿಗೆ, ಕಾರ್ಮಿಕರಿಗೆ ಹಾಗೂ ಜನಸಾಮಾನ್ಯರಿಗೆ ತೀವ್ರ ಸಮಸ್ಯೆಯಾಗಿದೆ ಎಂದರು.ಮೋದಿ ಅವರು ಈ ನಡೆಯ ಮೂಲಕ ಪ್ರಜಾಪ್ರಭುತ್ವಕ್ಕೆ ಕಳಂಕ ತರುವ ಕೆಲಸ ಮಾಡಿದ್ದು, ಸರ್ವಾಧಿಕಾರಿ ಧೋರಣೆ ಅನುಸರಿಸಲಾಗಿದೆ.

ಮದುವೆಗೆ ಬ್ಯಾಂಕ್‌ನಿಂದ ಹಣ ಪಡೆದುಕೊಳ್ಳಲಾಗದಂತಹ ಸ್ಥಿತಿ ನಿರ್ಮಾಣವಾಗಿದೆ. ಶೇ. 95ರಷ್ಟು ಜನರು ಈ ನೀತಿಯ ವಿರುದ್ಧವಾಗಿದ್ದಾರೆ. ದೇಶದ ರೈತರಿಗೆ, ಜನರಿಗೆ ಅಚ್ಛೇ ದಿನ್‌ ಬರುವ ಬದಲು ಕೆಟ್ಟ ದಿನ ಬಂದಂತಾಗಿದೆ. ಕೇಂದ್ರ ಸರಕಾರದ ಜನವಿರೋಧಿ ನಡೆಗೆ ಮುಂದಿನ ಚುನಾವಣೆಯಲ್ಲಿ ಜನರೇ ದಂಗೆ ಎದ್ದು ತಕ್ಕ ಉತ್ತರ ನೀಡಲಿದ್ದಾರೆ ಎಂದು ತಿಳಿಸಿದರು.

 




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here