Tuesday 23rd, April 2024
canara news

ಬಿಲ್ಲವರ ಅಸೋಸಿಯೇಶನ್ ಮಾಜಿ ಅಧ್ಯಕ್ಷ ನಾರಾಯಣ ಎಲ್.ಸುವರ್ಣ ನಿಧನ

Published On : 27 Nov 2016   |  Reported By : Canaranews Network


ಮುಂಬಯಿ, ನ.27: ಮುಂಬಯಿ ಮಹಾನಗರದ ಖ್ಯಾತ ಸಮಾಜ ಸೇವಕ, ಬಿಲ್ಲವರ ಅಸೋಸಿಯೇಶನ್ ಮುಂಬಯಿ ಮಾಜಿ ಅಧ್ಯಕ್ಷ, ದಿ ಭಾರತ್ ಕೋ.ಅಪರೇಟಿವ್ ಬ್ಯಾಂಕ್(ಮುಂಬಯಿ)ಲಿಮಿಟೆಡ್‍ನ ಮಾಜಿ ಉಪ ಕಾರ್ಯಾಧ್ಯಕ್ಷ ಹಾಗೂ ಬಿಲ್ಲವರ ಅಸೋಸಿಯೇಶನ್ ಮುಂಬಯಿ ಇದರ ಮುಖವಾಣಿ ಅಕ್ಷಯ ಮಾಸಿಕದ ರೂವಾರಿ ನಾರಾಯಣ ಎಲ್. ಸುವರ್ಣ (ಎನ್.ಎಲ್.ಸುವರ್ಣ)(78.) ಅವರು ಇಂದಿಲ್ಲಿ ಆದಿತ್ಯವಾರ ಮುಂಜಾನೆ ಅಲ್ಪಾವಧಿ ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಮೂಲತಃ ಮೂಲ್ಕಿಯವರಾಗಿದ್ದು, ಮುಂಬಯಿಯ ಬೊರಿವಲಿ ನಿವಾಸಿಯಾದ ಮೃತರು ಜೀವ ವಿಮಾ ನಿಗಮದ (ಎಲ್‍ಐಸಿ) ನಿವೃತ್ತ ಅಧಿಕಾರಿಯಾಗಿದ್ದರು. ಸಮಾಜ ಸೇವಕರಾಗಿ, ಬಿಲ್ಲವರ ಅಸೋಸಿಯೇಶನ್ ಮುಂಬಯಿ ಇದರ ಸಕ್ರೀಯ ಕಾರ್ಯಕರ್ತರಾಗಿ, ಜನಾನುರೆಣಿಸಿ ಮೃತರು ಅನೇಕ ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿ ಎನ್.ಎಲ್ ಎಂದೇ ಗುರುತಿಸಲ್ಪಟ್ಟಿದ್ದರು.

ಮೃತರು ಪತ್ನಿ, ಎರಡು ಹೆಣ್ಣು ಸೇರಿದಂತೆ ಬಂಧು-ಬಳಗ, ಹಿತೈಷಿಗಳನ್ನು ಅಗಲಿದ್ದಾರೆ. ಸುವರ್ಣ ನಿಧನಕ್ಕೆ ರಾಷ್ಟ್ರೀಯ ಬಿಲ್ಲವ ಮಹಾ ಮಂಡಲದ ಅಧ್ಯಕ್ಷರೂ ಮತ್ತು ಭಾರತ್ ಬ್ಯಾಂಕ್‍ನ ಕಾರ್ಯಾಧ್ಯಕ್ಷರಾದ ಜಯ ಸಿ.ಸುವರ್ಣ, ಬಿಲ್ಲವರ ಅಸೋಸಿಯೇಶನ್ ಮುಂಬಯಿ ಅಧ್ಯಕ್ಷ ನಿತ್ಯಾನಂದ ಡಿ.ಕೋಟ್ಯಾನ್, ಭಾರತ್ ಬ್ಯಾಂಕ್‍ನ ಮಾಜಿ ಕಾರ್ಯಾಧ್ಯಕ್ಷ ವಾಸುದೇವ ಆರ್.ಕೋಟ್ಯಾನ್, ಎಲ್ ವಿ ಅಮೀನ್, ಬಿಲ್ಲವ ಜಾಗೃತಿ ಬಳಗದ ಅಧ್ಯಕ್ಷ ಎನ್.ಟಿ ಪೂಜಾರಿ, ಸಂಸ್ಥಾಪಕ ಅಧ್ಯಕ್ಷ ಸೂರು ಸಿ.ಕರ್ಕೇರ, ಗೌ| ಅಧ್ಯಕ್ಷ ಸುರೇಶ್ ಎಸ್.ಪೂಜಾರಿ, ಕೆ.ಬೋಜರಾಜ್, ಪುರುಷೋತ್ತಮ ಎಸ್.ಕೋಟ್ಯಾನ್, ಡಿ.ಕೆ ಅಂಚನ್, ಡಿ.ಬಿ.ಅಮೀನ್, ಹರೀಶ್ ಪೂಜಾರಿ, ಅಕ್ಷಯ ಮಾಸಿಕದ ಗೌ| ಸಂಪಾದಕ ಎಂ.ಬಿ.ಕುಕ್ಯಾನ್, ಸಂಪಾದಕ ಡಾ| ಈಶ್ವರ ಅಲೆವೂರು, ಸಹ ಸಂಪಾದಕ ಹರೀಶ್ ಕೆ.ಹೆಜ್ಮಾಡಿ ಸೇರಿದಂತೆ ಜಾಗೃತಿ ಬಳಗ, ಅಸೋಸಿಯೇಶನ್‍ನ ಹಾಗೂ ಮಹಾನಗರದ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸದಸ್ಯರು, ಗಣ್ಯರನೇಕರು ಸಂತಾಪ ಸೂಚಿಸಿದ್ದಾರೆ.

 




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here