Thursday 28th, March 2024
canara news

ಸಮುದ್ರತೀರ ವಾಸಿಗಳಿಗೆ ಮನೆ ನಿರ್ಮಾಣ ಅವಕಾಶ:ಸಭೆ

Published On : 02 Dec 2016

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ, ಉಡುಪಿ ಜಿಲ್ಲೆ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಸಮುದ್ರದ ಅಂಚಿನಲ್ಲಿ ವಾಸವಾಗಿರುವ ಕುಟುಂಬಗಳಿಗೆ ಮನೆ ನಿರ್ಮಾಣ ಮಾಡಿ ವಾಸಿಸಲು ಹಾಗೂ ಇತರ ಉದ್ದೇಶಗಳಿಗೆ ಕಟ್ಟಡ ನಿರ್ಮಾಣ ಮಾಡುವ ಬಗ್ಗೆ ರಾಜ್ಯ ಅರಣ್ಯ ಮತ್ತು ಪರಿಸರ ಖಾತೆ ಸಚಿವ ಬಿ. ರಮಾನಾಥ ರೈ ಅಧ್ಯಕ್ಷತೆಯಲ್ಲಿ ಬೆಳಗಾವಿಯ ಸುವರ್ಣಸೌಧದಲ್ಲಿ ಸಭೆ ನಡೆಸಲಾಯಿತು.

ಸಮುದ್ರದ ಅಂಚಿನಲ್ಲಿ ವಾಸಿಸುತ್ತಿರುವ ಕುಟುಂಬಗಳಿಗೆ ಮನೆ ನಿರ್ಮಾಣ ಮಾಡಿಕೊಳ್ಳಲು ಸಿ.ಆರ್.ಝಡ್. ನಿಯಮಗಳ ಬಗ್ಗೆ ಚರ್ಚಿಸಲಾಯಿತು. ಪ್ರಸ್ತುತ ಕೆಲವು ಸಮಸ್ಯೆಗಳಿವೆ. ಕಂದಾಯ ಸಚಿವ ಕಾಗೋಡು ತಿಮ್ಮಪ್ಪ, ಬೃಹತ್ ಕೈಗಾರಿಕಾ ಸಚಿವ ಆರ್.ವಿ. ದೇಶಪಾಂಡೆ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ. ಖಾದರ್, ಮೀನುಗಾರಿಕಾ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಮಾನ್ಯ ವಿಧಾನಸಭೆ ಮತ್ತು ವಿಧಾನ ಪರಿಷತ್ ಸದಸ್ಯರು ಉಪಸ್ಥಿತರಿದ್ದರು.

More News

ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
 ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ
ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ

Comment Here