Thursday 25th, April 2024
canara news

ಕುಡಿಯುವ ನೀರಿನ ಸಮಗ್ರ ಅಭಿವೃದ್ಧಿ: ಮೊಯಿದ್ದೀನ್ ಬಾವಾ

Published On : 03 Dec 2016   |  Reported By : Canaranews Network


ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ೨೧೮ ಕೋಟಿ ರೂಪಾಯಿ ವೆಚ್ಚದಲ್ಲಿ ಕುಡಿಯುವ ನೀರಿನ ಸಮಗ್ರ ಅಭಿವೃದ್ಧಿ ಕಾಮಗಾರಿಯನ್ನು ಶೀಘ್ರದಲ್ಲೇ ಕೈಗೆತ್ತಿಕೊಳ್ಳಲಾಗುವುದು ಎಂದು ಉತ್ತರ ವಿಧಾನಸಭಾ ಕ್ಷೇತ್ರ ಶಾಸಕ ಮೊಯಿದ್ದೀನ್ ಬಾವಾ ಹೇಳಿದ್ದಾರೆ.

ಮಂಗಳೂರಿನಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕುಡಿಯುವ ನೀರಿನ ವ್ಯವಸ್ಥೆಗೆ ಎಡಿಬಿಯಿಂದ ನೀಡಲಾಗುತ್ತಿದ್ದ ೧೬೦ ಕೋಟಿ ರೂಪಾಯಿ ಅನುದಾನವನ್ನು ಪರಿಷ್ಕರಿಸಿ ೨೧೮ ಕೋಟಿ ರೂಪಾಯಿ ನೀಡಲು ಆದೇಶವಾಗಿದೆ. ಒಳಚರಂಡಿ ವ್ಯವಸ್ಥೆಗೆ ನೀಡಲಾಗುತ್ತಿದ್ದ ೧೨೦ ಕೋಟಿ ರೂಪಾಯಿ ಅನುದಾನವನ್ನು ೧೯೫ ಕೋಟಿ ರೂಪಾಯಿಗೆ ಪರಿಷ್ಕರಿಸಲಾಗಿದೆ. ಡ್ರೈನೇಜ್ ವ್ಯವಸ್ಥೆಯ ಸಮರ್ಪಕ ನಿರ್ವಹಣೆ ಹಾಗೂ ಡ್ರೈನೇಜ್ ಇನ್ನೂ ಜಾರಿಯಾಗದ ಪ್ರದೇಶಗಳಲ್ಲಿ ಸರ್ವೆ ಕಾರ್ಯ ನಡೆಸಿ ಮಂಜೂರಾಗಿರುವ ೧೯೫ ಕೋಟಿ ರೂಪಾಯಿ ಅನುದಾನವನ್ನು ವಿನಿಯೋಗಿಸಲಾಗುವುದು ಎಂದವರು ಹೇಳಿದ್ರು.

ಸುದ್ದಿಗೋಷ್ಠಿಯಲ್ಲಿ ಮೇಯರ್ ಹರಿನಾಥ್, ಕಾರ್ಪೋರೇಟರ್ ಗಳಾದ ಶಶಿಧರ್ ಹೆಗ್ಡೆ, ಮುಹಮ್ಮದ್ ಕುಂಜತ್ ಬೈಲ್, ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಶಕುಂತಲಾ ಕಾಮತ್ ಮೊದಲಾದವರು ಉಪಸ್ಥಿತರಿದ್ದರು. 




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here