Saturday 20th, April 2024
canara news

13ನೇ ವಿಶ್ವ ಕನ್ನಡ ಸಂಸ್ಕೃತಿ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಚಲನಚಿತ್ರ ಸಾಹಿತಿ ಡಾ. ಹಂಸಲೇಖ ಆಯ್ಕೆ

Published On : 15 Dec 2016   |  Reported By : Rons Bantwal


ಬೆಂಗಳೂರು: ಡಿ.14, ಆಸ್ಟ್ರೇಲಿಯಾದಲ್ಲಿ ಮಾರ್ಚ್ 11 ಮತ್ತು 12, 2017 ರಂದು ಜರುಗಲಿರುವ 13ನೇ ವಿಶ್ವ ಕನ್ನಡ ಸಂಸ್ಕೃತಿ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ಖ್ಯಾತ ಚಲನಚಿತ್ರ ಸಾಹಿತಿ ಹಾಗೂ ಜನಪದ ತಜ್ಞ ಡಾ. ಹಂಸಲೇಖ ಅವರಿಗೆ ಅವರ ಬೆಂಗಳೂರಿನ ನಿವಾಸದಲ್ಲಿ ಅಧಿಕೃತ ಆಮಂತ್ರಣ ನೀಡಲಾಯಿತು.

ಈ ಸಂದರ್ಭದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ. ಎಸ್. ಜಿ. ಸಿದ್ದರಾಮಯ್ಯ, ವಿಶ್ವಕನ್ನಡ ಸಂಸ್ಕೃತಿ ಸಮ್ಮೇಳನ ಅಧ್ಯಕ್ಷ ಕೆ.ಪಿ. ಮಂಜುನಾಥ್ ಸಾಗರ್, ಸಮಾಜ ಸೇವಕ ಡಾ. ರಾಮರೆಡ್ಡಿ, ಆಸ್ಟ್ರೇಲಿಯಾ ಯುನೈಟೆಡ್ ಕನ್ನಡ ಸಂಘದ ಕೋಶಾಧಿಕಾರಿ ಸುರೇಶ್ ಗೌಡ, ಮಾಲ್ಡಿವ್ಸ್ ಕನ್ನಡ ಸಂಘದ ಕಾರ್ಯದರ್ಶಿ ಎಂ. ಬಸವರಾಜ್, ಜನಪದ ಗಾಯಕ ಗೊ.ನಾ. ಸ್ವಾಮಿ ಉಪಸ್ಥಿತರಿದ್ದರು.




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here