Friday 19th, April 2024
canara news

ಪಾದಚಾರಿಗೆ ಅಪರಿಚಿತ ವಾಹನ ಡಿಕ್ಕಿ; ಶಿಕ್ಷಕ ಸಾವು

Published On : 21 Dec 2016   |  Reported By : Canaranews Network


ಮಂಗಳೂರು: ವಾಕಿಂಗ್ ಹೋಗುತ್ತಿದ್ದ ವ್ಯಕ್ತಿಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಶಿಕ್ಷಕರೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯಲ್ಲಿ ಮಂಗಳವಾರ ನಡೆದಿದೆ. ಮೃತರನ್ನು ಸರ್ಕಾರಿ ಶಾಲಾ ಶಿಕ್ಷಕ ದಿನಕರ ಹೆಗ್ಡೆ ಎಂದು ಗುರುತಿಸಲಾಗಿದೆ. ಮಂಗಳವಾರ ಮುಂಜಾನೆ ವಾಕಿಂಗ್ ಹೋಗುತ್ತಿದ್ದ ವೇಳೆ ವಾಹನವೊಂದು ಡಿಕ್ಕಿ ಹೊಡೆದು ಪರಾರಿಯಾಗಿತ್ತು.

ಪರಿಣಾಮ ಗಂಭೀರ ಗಾಯಗೊಂಡ ದಿನಕರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪರಿಚಿತ ವಾಹನವನ್ನು ಪೊಲೀಸರು ಮಲ್ಪೆಯಲ್ಲಿ ವಶಕ್ಕೆ ಪಡೆದಿದ್ದಾರೆ. ಕೋಲಾರದಿಂದ ಮಕ್ಕಳ ಪ್ರವಾಸಕ್ಕೆಂದು ಬಂದಿದ್ದ ಬಸ್ ಇದಾಗಿದ್ದು ಚಾಲಕನ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎನ್ನಲಾಗಿದೆ. ಬೆಳ್ತಂಗಡಿ ಠಾಣಾ ಪೊಲೀಸರು ವಿಚಾರಣೆ ಮುಂದುವರಿಸಿದ್ದಾರೆ.




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here