Friday 29th, March 2024
canara news

ಯೋಗ ಮತ್ತು ನೈತಿಕ ಶಿಕ್ಷಣದ ಯೋಜನೆ: ಪುರಸ್ಕಾರ ಸಮಾರಂಭ ಮೌಲ್ಯಾಧಾರಿತ ಶಿಕ್ಷಣದಿಂದ ಸುಸಂಸ್ಕøತ ಸಮಾಜ ನಿರ್ಮಾಣ

Published On : 30 Dec 2016   |  Reported By : Rons Bantwal


ಉಜಿರೆ: ಮೌಲ್ಯಾಧಾರಿತ ಶಿಕ್ಷಣದಿಂದ ಸಭ್ಯ, ಸುಸಂಸ್ಕøತ ಸಮಾಜ ನಿರ್ಮಾಣವಾಗುತ್ತದೆ ಎಂದು ಮಂಗಳೂರು ವಿಶ್ವ ವಿದ್ಯಾಲಯದ ಕುಲಪತಿ ಡಾ. ಕೆ. ಭೈರಪ್ಪ ಹೇಳಿದರು.

ಅವರು ಶುಕ್ರವಾರ ಧರ್ಮಸ್ಥಳದಲ್ಲಿ ಶಾಂತಿವನ ಟ್ರಸ್ಟ್ ಆಶ್ರಯದಲ್ಲಿ ಆಯೋಜಿಸಲಾದ ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧೆ ಹಾಗೂ ಜಿಲ್ಲಾ ಮಟ್ಟದ ನೈತಿಕ ಮೌಲ್ಯಾಧಾರಿತ ಪುಸ್ತಕಗಳನ್ನಾಧರಿಸಿದ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಿ ಮಾತನಾಡಿದರು.

ಶಿಕ್ಷಣದ ಜೊತೆಗೆ ನೈತಿಕತೆ, ಜೀವನ ಕೌಶಲ ಹಾಗೂ ಮಾನವೀಯ ಮೌಲ್ಯಗಳನ್ನು ಬೋಧಿಸಬೇಕು. ಇಂದಿನ ಮಕ್ಕಳೇ ಮುಂದಿನ ಪ್ರಜೆಗಳಾಗುವುದರಿಂದ ಮೌಲ್ಯಧಾರಿತ ಶಿಕ್ಷಣ ಹಾಗೂ ನೈತಿಕ ಶಿಕ್ಷಣದಿಂದ ಸುಂದರ ಸಮಾಜವನ್ನು ರೂಪಿಸಬಹುದು. ಯೋಗ ಮತ್ತು ಪ್ರಕೃತಿ ಚಿಕಿತ್ಸೆಯಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ಭಾಗ್ಯ ಹೊಂದಬಹುದು. ಈ ದಿಸೆಯಲ್ಲಿ ಧರ್ಮಸ್ಥಳದ ಶಾಂತಿವನ ಟ್ರಸ್ಟ್‍ನ ಕೊಡುಗೆ ಅಮೂಲ್ಯವಾಗಿದೆ ಎಂದು ಅವರು ಶ್ಲಾಘಿಸಿದರು.

ಪತ್ರಕರ್ತ ಕೆ. ಶಿವಕುಮಾರ್ ಶುಭಾಶಂಸನೆ ಮಾಡಿದರು.

ಗುರುವಾಯನಕೆರೆ ಸರ್ಕಾರಿ ಪ್ರೌಢ ಶಾಲೆಯ ಚಿತ್ರಕಲಾ ಶಿಕ್ಷಕ ವಿ.ಕೆ. ವಿಟ್ಲರ ಕುಂಚದ ಕಲೆ ಹಾಗೂ ಪ್ರಕೃತಿ ಚಿಕಿತ್ಸಾ ಕಾಲೇಜಿನ ವಿದ್ಯಾರ್ಥಿನಿಯರ ಗಾಯನ ಕಣ್ಮನ ಸೆಳೆಯಿತು.

ಅಧ್ಯಕ್ಷತೆ ವಹಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ, ನಾವಿರುವ ಪ್ರಪಂಚವನ್ನು ಚೆನ್ನಾಗಿ ರಕ್ಷಣೆ ಮಾಡಿ ಸುಸ್ಥಿತಿಯಲ್ಲಿ ಮುಂದಿನ ಜನಾಂಗಕ್ಕೆ ಬಿಟ್ಟುಕೊಡುವುದು ನಮ್ಮೆಲ್ಲರ ಹೊಣೆಗಾರಿಕೆಯಾಗಿದೆ. ಪ್ರಕೃತಿ-ಪರಿಸರ ಸಂರಕ್ಷಣೆ ಮಾಡಬೇಕು. ಮಕ್ಕಳು ಪುಸ್ತಕ ಓದುವ ಹವ್ಯಾಸ ಬೆಳೆಸಿಕೊಂಡು ತಮ್ಮ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬೇಕು. ಪಾಶ್ಚಾತ್ಯ ಸಂಸ್ಕøತಿಯ ಅಂಧಾನುಕರಣೆ ಮಾಡಬಾರದು ಎಂದು ಹೆಗ್ಗಡೆಯವರು ಸಲಹೆ ನೀಡಿದರು.

ಶಶಿಕಾಂತ ಜೈನ್ ಸ್ವಾಗತಿಸಿದರು. ಅಶೋಕ ಪೂಜಾರಿ ಧನ್ಯವಾದವಿತ್ತರು. ಮಂಜುನಾಥ್ ಎಂ. ಎನ್. ಕಾರ್ಯಕ್ರಮ ನಿರ್ವಹಿಸಿದರು.

 




More News

ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
 ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ
ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ

Comment Here