Tuesday 23rd, April 2024
canara news

ಅಂತರಾಜ್ಯ ಗಾಂಜಾ ಆರೋಪಿಗಳ ಬಂಧನ

Published On : 02 Jan 2017   |  Reported By : Canaranews Network


ಮಂಗಳೂರು: ಕರ್ನಾಟಕ ಹಾಗೂ ಕೇರಳ ರಾಜ್ಯದಲ್ಲಿ ಗಾಂಜಾ ಮಾರಾಟ ಮಾಡುವ ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ಹಲವು ಅಪರಾಧ ಚಟುವಟಿಕೆಗಳಿಗೆ ಕಾರಣ ಕರ್ತರಾಗುತ್ತಿದ್ದ ಆರೋಪಿಗಳಿಗೆ ಗಾಂಜಾ ಸರಬರಾಜು ಮಾಡುತ್ತಿದ್ದ ಅಂತರಾಜ್ಯ ಪ್ರಮುಖ ಇಬ್ಬರು ಗಾಂಜಾ ಆರೋಪಿಗಳನ್ನು ಖಚಿತ ಮಾಹಿತಿ ಮೇರೆಗೆ ಬಂಟ್ವಾಳ ಡಿವೈಎಸ್ಪಿ ನೇತೃತ್ವದಲ್ಲಿ ವಿಟ್ಲ ಪೊಲೀಸರು ಬಂಧಿಸಿ ಸುಮಾರು ೧೩ ಕೆ.ಜಿ ಗಾಂಜಾ ಸಹಿತ ವಾಃಅನವನ್ನು ವಶಕ್ಕೆ ಪಡೆಯುವ ಭರ್ಜರಿ ಕಾರ್ಯಾಚರಣೆ ನಡೆಸಿದ ಘಟನೆ ಉಕ್ಕುಡ ಕನ್ಯಾನ ರಸ್ತೆಯ ಕಾಂತಡ್ಕ ಎಂಬಲ್ಲಿ ಶುಕ್ರವಾರ ನಡೆದಿದ್ದು,

ಜಿಲ್ಲೆಯಲ್ಲಿಯೇ ಅತಿ ಹೆಚ್ಚು ತೂಕದ ಗಾಂಜಾ ಪತ್ತೆಯಾದ ಎರಡನೆ ಘಟನೆ ಇದಾಗಿದೆ. ಕನ್ಯಾನ ಗ್ರಾಮದ ಪೊಯ್ಯಗದ್ದೆ ನಿವಾಸಿ ಶಾಫಿ ಯಾನೆ ಖಲಂದರ್ ಶಾಫಿ(೨೨) , ಉತ್ತರ ಪ್ರದೇಶ ಬಸೊಳ್ಳಿ ಸೆದೆಪುರ ಗ್ರಾಮದ ಕಲ್ಲೂರು ನಿವಾಸಿ ಅರ್ಮಾನ್ ಸಿಂಗರ್ (೨೫) ಬಂಧಿತ ಆರೋಪಿಗಳು.

ಬಂಟ್ವಾಳ ಡಿವೈಎಸ್ಪಿ ರವೀಶ್ ಸಿ ಆರ್ ಅವರಿಗೆ ಬಂದ ಖಚಿತ ಮಾಹಿತಿ ಮೇರೆಗೆ ಗಸ್ತಿನಲ್ಲಿದ್ದ ಸಂದರ್ಭ ಬೈರಿಕಟ್ಟೆ ಉಕ್ಕುಡ ರಸ್ತೆಯಲ್ಲಿ ದ್ವಿಚಕ್ರ ವಾಹನದ ಮೂಲಕ ಅತಿ ವೇಗದಲ್ಲಿ ಬಂದ ದ್ವಿಚಕ್ರ ವಾಹನವನ್ನು ನಿಲ್ಲಿಸಲು ಸೂಚನೆ ನೀಡಿದರೂ ನಿಲ್ಲಿಸದೆ ತಪ್ಪಿಸಿಕೊಳ್ಳಲು ಯತ್ನಿಸಿದ ಸಂದರ್ಭ ಮುಂಭಾಗದಿಂದ ಬಂಟ್ವಾಳ ಪೊಲೀಸ್ ಇನ್ಸ್ ಪೆಕ್ಟರ್ ಹಾಗೂ ವಿಟ್ಲ ಎಸೈ ತಂಡ ಸುತ್ತುವರಿದು ದ್ವಿಚಕ್ರವನ್ನು ಹಿಡಿಯುವಲ್ಲಿ ಯಶಸ್ವಿಯಾಘಿದ್ದರು.




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here