Wednesday 24th, April 2024
canara news

ಸೈಂಟ್ ಮೇರಿಸ್ ಪ್ರೌಢಶಾಲೆ ಕುಂದಾಪುರ ಭಾವಿ ಮತದಾರರಿಗೆ ಅರಿವು ಕಾರ್ಯಕ್ರಮ

Published On : 18 Jan 2017   |  Reported By : Bernard J Costa


ಕುಂದಾಪುರ: ಭಾವಿ ಮತದಾರರಾದ ವಿದ್ಯಾರ್ಥಿಗಳಿಗೆ ಮತದಾನದ ಬಗ್ಗೆ ತಿಳುವಳಿಕೆ ಅಗತ್ಯವಾಗಿ ಬೇಕಾಗಿದೆ.ಸುಭದ್ರ ಪ್ರಜಾಪ್ರಭುತ್ವಕ್ಕಾಗಿ ಎಲ್ಲರ ಪಾಲ್ಗೊಳ್ಳುವಿಕೆ ಅಗತ್ಯವಾಗಿದೆ.ಮತದಾನ ಯಾರು,ಯಾವಾಗ ಮಾಡಬೇಕು ಎನ್ನುವ ಅರಿವು ವಿದ್ಯಾರ್ಥಿಗಳಲ್ಲಿ ಮೂಡಿದಾಗ ಸುಭದ್ರ ಪ್ರಜಾಪ್ರಭುತ್ವ ವ್ಯವಸ್ಥೆ ಜಾಗೃತಗೊಳ್ಳಲು ಸಾಧ್ಯ ಎಂದು ಕುಂದಾಪುರದ ಸಹಾಯಕ ಆಯುಕ್ತೆ ಶಿಲ್ಪಾ ನಾಗ್ ಹೇಳಿದರು.

ಅವರು ಮಂಗಳವಾರ ತಾಲೂಕು ಆಡಳಿತದ ಆಶ್ರಯದಲ್ಲಿ ಕುಂದಾಪುರ ಸೈಂಟ್ ಮೇರಿಸ್ ಪ್ರೌಢಶಾಲೆಯಲ್ಲಿ ನಡೆದ ಭಾವಿ ಮತದಾರರ ಅರಿವು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಭಾವಿ ಮತದಾರರಾದ ವಿದ್ಯಾರ್ಥಿಗಳು ಮತದಾನದ ಕುರಿತು ಹಿರಿಯರಿಗೆ ಅರಿವು ಮೂಡಿಸುವ ಕಾರ್ಯ ಮಾಡಬೇಕಾಗಿದೆ ಎಂದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ಕುಂದಾಪುರದ ತಹಶೀಲ್ದಾರ್ ಜಿ.ಎಂ.ಬೋರ್ಕರ್ ವಿದ್ಯಾರ್ಥಿಗಳಿಗೆ ಮತದಾನದ ಅರಿವು ಮೂಡಿಸುವ ಕುರಿತು ಮಾತನಾಡಿದರು.

ಸೈಂಟ್ ಮೇರಿಸ್ ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಚೇತನಾ ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಇದೇ ಸಂದರ್ಭದಲ್ಲಿ ಮಾತದಾನದ ಅರಿವು ಮೂಡಿಸುವ ಕುರಿತು ಪ್ರಾತ್ಯಕ್ಷಿಕೆ ಕಾರ್ಯಕ್ರಮ ಜರಗಿತು.ಈ ಸಂದರ್ಭದಲ್ಲಿ ಕುಂದಾಪುರದ ಸಹಾಯಕ ಆಯುಕ್ತರ ಕಛೇರಿಯ ವ್ಯವಸ್ಥಾಪಕ ರಾಮಚಂದ್ರರಾವ್,ಕಂದಾಯ ನಿರೀಕ್ಷಕ ನರಸಿಂಹ ಕಾಮತ್,ಪ್ರಥಮ ದರ್ಜೆ ಸಹಾಯಕ ರವಿ.ವಿ ಮೊದಲಾದವರು ಉಪಸ್ಥಿತರಿದ್ದರು.ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯ ಸಿಆರ್‍ಪಿ ಸದಾನಂದ ಶೆಟ್ಟಿ ಸ್ವಾಗತಿಸಿದರು.ಶಿಕ್ಷಣ ಸಂಯೋಜಕಿ ದೇವ ಕುಮಾರಿ ವಂದಿಸಿದರು.ಶಿಕ್ಷಕ ಚಂದ್ರಶೇಖರ ಬೀಜಾಡಿ ಕಾರ್ಯಕ್ರಮ ನಿರೂಪಿಸಿದರು.

 




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here