Saturday 20th, April 2024
canara news

ಅಭಿನಂದನಾ ಸಭೆ

Published On : 27 Jan 2017   |  Reported By : Rons Bantwal


ಬಂಟ್ವಾಳ: ಎಪಿಎಂ.ಸಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಮಾಣಿ ಕ್ಷೇತ್ರದ ಬಿಜೆಪಿ ಬೆಂಬಲಿತ ಅಭ್ಯರ್ಥಿ ನೇಮಿರಾಜ ರೈ ಯವರ ಅಭಿನಂದನಾ ಸಭೆ ಕಲ್ಲಡ್ಕದ ಪಂಚವಟಿ ಸಭಾಂಗಣದಲ್ಲಿ ನಡೆಯಿತು.

ಈ ಸಂದರ್ಭ ಸಂಸದ ನಳಿನ್ ಕುಮಾರ್ ಕಟೀಲು ಮಾತನಾಡಿ ಈ ಗೆಲುವು ಮುಂದಿನ ದಿನಗಳಲ್ಲಿ ಬಿಜೆಪಿ ಪಕ್ಷವನ್ನು ಸಂಘಟಿತ ಹೋರಾಟ ಮಾಡಲು ಸಹಕಾರಿಯಾಗುತ್ತದೆ. ಪಕ್ಷದ ಎಲ್ಲಾ ಕಾರ್ಯಕರ್ತರ ಹುರುಪಿನ ಕೆಲಸದಿಂದ ಎಪಿಎಂಸಿ ಚುನಾವಣೆಯಲ್ಲಿ ಅಭೂತಪೂರ್ವ ಸಾಧನೆ ಮಾಡಲು ಸಾಧ್ಯವಾಯಿತು. ಕಾರ್ಯಕರ್ತರು ಮುಂದಿನ ದಿನಗಳಲ್ಲಿ ಕೇಂದ್ರ ಸರಕಾರದ ಜನಪರ ಯೋಜನೆಗಳನ್ನು ಗ್ರಾಮ ಮಟ್ಟದಲ್ಲಿ ಜನರಿಗೆ ತಿಳಿಸುವ ಕೆಲಸ ಮಾಡಬೇಕಾಗಿದೆ. ಅ ಮೂಲಕ ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಲು ಒಗ್ಗಟ್ಟಿನಿಂದ ಕೆಲಸ ಮಾಡಬೇಕಾಗಿದೆ ಎಂದರು.

ಬಿಜೆಪಿ ಮುಖಂಡ ರಾಜೇಶ್ ನಾಯಕ್ ಉಳಿಪ್ಪಾಡಿ ಗುತ್ತು ,ಮಾಜಿ ಶಾಸಕರುಗಳಾದ ಪದ್ಮನಾಭ ಕೊಟ್ಟಾರಿ, ರುಕ್ಮಯ ಪೂಜಾರಿ, ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವದಾಸ ಶೆಟ್ಟಿ, ರಾಜ್ಯ ಸಹವಕ್ತಾರೆ ಸುಲೋಚನಾ ಜಿಕೆ ಭಟ್, ಕ್ಷೇತ್ರ ಪ್ರಧಾನ ಕಾರ್ಯದರ್ಶಿ ರಾಮ್‍ದಾಸ ಬಂಟ್ವಾಳ, ತಾ.ಪಂ.ಸದಸ್ಯರಾದ ಮಹಾಬಲ ಆಳ್ವ, ಗೀತಾ ಚಂದ್ರಶೇಖರ್, ಗೋಳ್ತಮಜಲು ಗ್ರಾ.ಪಂ.ಅಧ್ಯಕ್ಷೆ ಜಯಲಕ್ಮೀ ಭಟ್, ಪಕ್ಷದ ಪ್ರಮುಖರಾದ ಚೆನ್ನಪ್ಪ ಆರ್ ಕೋಟ್ಯಾನ್, ದ.ಕ.ಜಿಲ್ಲಾ. ಬಿಜೆಪಿ ಎಸ್.ಸಿ ಮೋರ್ಚಾ ಜಿಲ್ಲಾಧ್ಯಕ್ಷ ದಿನೇಶ್ ಅಮ್ಟೂರು, ಯುವ ಮೋರ್ಚಾದ ಅಧ್ಯಕ್ಷ ವಜ್ರನಾಥ ಕಲ್ಲಡ, ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಜಯಂತಿ ಮತ್ತಿತರರು ಉಪಸಿತರಿದ್ದರು. ಮೋನಪ್ಪ ದೇವಸ್ಯ ಸ್ವಾಗತಿಸಿ, ರಾಜೇಶ್ ಕೊಟ್ಟಾರಿ ವಂದಿಸಿದರು.




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here