Saturday 20th, April 2024
canara news

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಸ್ವ-ಸಹಾಯ ಸಂಘಗಳ ಆ್ಯಪ್ ಬಿಡುಗಡೆ

Published On : 15 Feb 2017   |  Reported By : Rons Bantwal


ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ಧರ್ಮದ ತಳಹದಿಯಲ್ಲಿ ಆಧುನಿಕ ತಂತ್ರಜ್ಞಾನವನ್ನು ಬಳಸಿ ಫಲಾನುಭವಿಗಳ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಪಗ್ರತಿಗಾಗಿ ಮಾಡುತ್ತಿರುವ ಸೇವೆ-ಸಾಧನೆ ಶ್ಲಾಘನೀಯವಾಗಿದೆ. ಎಲ್ಲರೂ ಇದನ್ನು ಅನುಸರಿಸಲು ಮಾದರಿಯಾಗಿದೆ ಎಂದು ನಬಾರ್ಡ್‍ನ ಅಧ್ಯಕ್ಷ ಡಾ. ಹರ್ಷಕುಮಾರ್ ಬನ್ವಾಲಾ ಹೇಳಿದರು.

ಅವರು ಬುಧವಾರ ಧರ್ಮಸ್ಥಳದಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ಸ್ವ-ಸಹಾಯ ಸಂಘಗಳ ಸದಸ್ಯರ ವ್ಯವಹಾರ ನಿರ್ವಹಣೆಗಾಗಿ ರೂಪಿಸಿದ ಆ್ಯಪ್ ಬಿಡುಗಡೆ ಮಾಡಿ ಮಾತನಾಡಿದರು.

ದೇಶದಲ್ಲಿ ಪ್ರಸ್ತುತ ಎಂಬತ್ತು ಲಕ್ಷ ಸ್ವ-ಸಹಾಯ ಸಂಘಗಳಿದ್ದು ನಬಾರ್ಡ್ ಕೂಡಾ ಅದರ ವ್ಯವಹಾರವನ್ನು ಡಿಜಿಟೈಸ್ ಮಾಡಲು ಕಾರ್ಯಪ್ರವೃತ್ತವಾಗಿದೆ. ರಾಷ್ಟ್ರಮಟ್ಟದಲ್ಲಿ ಇಂತಹ ತಾಂತ್ರಿಕ ಕಾರ್ಯಕ್ರಮಗಳನ್ನು ಅಳವಡಿಸಬೇಕು.

ಸಣ್ಣ ರೈತರು ಬೆಳೆದ ಉತ್ಪನ್ನಗಳಿಗೆ ಉತ್ತಮ ಮಾರುಕಟ್ಟೆ ಒದಗಿಸಬೇಕು. ಎಲ್ಲೆಲ್ಲೂ ನೀರಿನ ಅಭಾವ ತಾಂಡವವಾಡುತ್ತಿದ್ದು ಎಲ್ಲರೂ ನೀರಿನ ಮಿತ ಬಳಕೆ ಮಾಡಬೇಕು. ಅಪವ್ಯಯಮಾಡಬಾರದು ಎಂದು ಅವರು ಸಲಹೆ ನೀಡಿದರು. ಕೃಷಿಗೆ ಹನಿನೀರಾವರಿ ಬಳಸಿದರೆ ಉತ್ತಮ ಎಂದು ಅವರು ಹೇಳಿದರು.

ಕಾರ್ಪೊರೇಶನ್ ಬ್ಯಾಂಕಿನ ಆಡಳಿತ ನಿರ್ದೇಶಕ ಜಿ.ಎಂ. ಭಗತ್ ಟ್ಯಾಬ್ಲೆಟ್ ಪೋನ್ ವಿತರಿಸಿ ಶುಭ ಹಾರೈಸಿದರು.

ನಬಾರ್ಡ್‍ನ ಮುಖ್ಯ ಮಹಾಪ್ರಬಂಧಕ ಎಂ.ಐ. ಗಣಗಿ ಮಾತನಾಡಿ ನಮ್ಮ ಸುತ್ತ-ಮುತ್ತ ಇರುವ ನೆಲ, ಜಲ, ಅರಣ್ಯ ಮೊದಲಾದ ಪ್ರಾಕೃತಿಕ ಸಂಪನ್ಮೂಲಗಳ ಸದುಪಯೋಗ ಮಾಡಿದರೆ ಉತ್ತಮ ಪ್ರಗತಿ ಸಾಧಿಸಬಹುದು ಎಂದು ಅಭಿಪ್ರಾಯಪಟ್ಟರು.

ಅಧ್ಯಕ್ಷತೆ ವಹಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ ಗ್ರಾಮಾಭಿವೃದ್ಧಿ ಯೋಜನೆಯ ಫಲಾನುಭವಿಗಳು ಪ್ರಗತಿಯ ಪಾಲುದಾರರಾಗಿದ್ದು, ಬದಲಾವಣೆಯ ಹರಿಕಾರರು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಗ್ರಾಮಾಭಿವೃದ್ಧಿ ಯೋಜನೆಯ ಮೂಲ ಹಾಗೂ ಮಾದರಿ ಬೆಳ್ತಂಗಡಿ ತಾಲ್ಲೂಕು ಆಗಿದ್ದು ಇಂದು ಎಲ್ಲರೂ ಸ್ವಾವಲಂಬಿ ಜೀವನ ನಡೆಸುತ್ತಿದ್ದಾರೆ. ಜೀವನ ಮಟ್ಟ ಸುಧಾರಣೆ ಆದಂತೆ ವೆಚ್ಚವೂ ಹೆಚ್ಚಾಗುತ್ತದೆ.

ದುಂದುವೆಚ್ಚ ಮಾಡದೆ ಭವಿಷ್ಯದ ಬಗ್ಯೆ ಚಿಂತನೆ ಮಾಡಿ ಸರಿಯಾಗಿ ತಮ್ಮ ವ್ಯವಹಾರದ ಲೆಕ್ಕಪತ್ರ ನಿರ್ವಹಣೆ ಮಾಡಬೇಕು. ದುಶ್ಚಟಕ್ಕೆ ಬಲಿಯಾಗಬಾರದು ಎಂದು ಕಿವಿ ಮಾತು ಹೇಳಿದರು.

ಹೇಮಾವತಿ ವಿ. ಹೆಗ್ಗಡೆ ಉಪಸ್ಥಿತರಿದ್ದರು. ಡಾ. ಎಲ್. ಎಚ್. ಮಂಜುನಾಥ್ ಸ್ವಾಗತಿಸಿದರು. ರೂಪಾ ಜೈನ್ ಧನ್ಯವಾದವಿತ್ತರು.

ಧರ್ಮಸ್ಥಳದಲ್ಲಿ ಸ್ವ-ಸಹಾಯ ಸಂಘಗಳ ಒಕ್ಕೂಟದಗಳ ಪದಗ್ರಹಣ ಸಮಾರಂಭ ಮಹಿಳೆಯರು ಜ್ಞಾನ ಮತ್ತು ಕೌಶಲ ಬೆಳೆಸಿಕೊಳ್ಳಬೇಕು

ಮಹಿಳೆಯರು ಶಿಕ್ಷಣದೊಂದಿಗೆ ವ್ಯವಹಾರ ಜ್ಞಾನ ಮತ್ತು ಕೌಶಲವನ್ನು ಬೆಳೆಸಿಕೊಂಡು ಸ್ವಾವಲಂಬಿ ಜೀವನ ನಡೆಸಬೇಕು. ತಂತ್ರಜ್ಞಾನದ ಬಳಕೆಯೊಂದಿಗೆ ಶ್ರಮ ಸಂಸ್ಕøತಿಯನ್ನೂ ಮೈಗೂಡಿಸಿಕೊಳ್ಳಬೇಕು ಎಂದು ಧರ್ಮಸ್ಥಳದ ಹೇಮಾವತಿ ವಿ. ಹೆಗ್ಗಡೆಯವರು ಹೇಳಿದರು.

ಅವರು ಬುಧವಾರ ಧರ್ಮಸ್ಥಳದಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ಧರ್ಮಸ್ಥಳ ವಲಯದ 12 ಒಕ್ಕೂಟಗಳ ಪದಗ್ರಹಣ ಸಮಾರಂಭದಲ್ಲಿ ಶುಭಾಶಂಸನೆ ಮಾಡಿ ಮಾತನಾಡಿದರು.

ಆಧುನಿಕ ತಂತ್ರಜ್ಞಾನದ ಬಳಕೆಯಿಂದ ವ್ಯವಹಾರ ಸುಲಭ ಹಾಗೂ ಪಾರದರ್ಶಕವಾಗಿರುತ್ತದೆ.

ಒಕ್ಕೂಟದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳಿಗೆ ಗ್ರಾಮಾಭಿವೃದ್ಧಿ ಯೋಜನೆಯ ಹೊಸ ಕಾರ್ಯಕ್ರಮಗಳ ಮಾಹಿತಿ ಇರಬೇಕು. ಫಲಾನುಭವಿಗಳಿಗೆ ಈ ಬಗ್ಯೆ ಅರಿವು, ಜಾಗೃತಿ ಮೂಡಿಸಬೇಕು. ಎಲ್ಲರೂ ಜವಾಬ್ದಾರಿಯಿಂದ, ಒಗ್ಗಟ್ಟಿನಿಂದ ತ್ಯಾಗ ಮತ್ತು ಸೇವಾ ಮನೋಭಾವದಿಂದ ಕೆಲಸ ಮಾಡಬೇಕು. ಧಾರ್ಮಿಕ ಶ್ರದ್ಧಾಕೇಂದ್ರಗಳಲ್ಲಿ ಸ್ವಚ್ಛತೆಯನ್ನು ಕಾಪಾಡಬೇಕು ಎಂದು ಅವರು ಸಲಹೆ ನೀಡಿದರು.
ಅದೃಷ್ಟದೊಂದಿಗೆ ಅನುಭವವೂ ಸೇರಿದಾಗ ಜೀವನ ಪಾವನವಾಗುತ್ತದೆ. ಜ್ಞಾನ ವಿಕಾಸ ಕಾರ್ಯಕ್ರಮದಿಂದಾಗಿ ಇಂದು ಮಹಿಳೆಯರು ಉತ್ತಮ ಶಿಕ್ಷಣ, ಸಂಸ್ಕಾರ, ಉದ್ಯೋಗ ಮತ್ತು ಆದಾಯದೊಂದಿಗೆ ಸ್ವಾವಲಂಬಿ ಜೀವನ ನಡೆಸುತ್ತಿದ್ದಾರೆ.

ಕೇವಲ ಅತಿಥಿ ಸತ್ಕಾರ, ಅಡುಗೆ ಮಾಡಲು, ಬಡಿಸಲು, ಅತಿಥಿ ಸತ್ಕಾರಕ್ಕೆ ಮೀಸಲಾಗಿದ್ದ ಮಹಿಳೆಯರು ಇಂದು ಎಲ್ಲಾ ರಂಗಗಳಲ್ಲಿಯೂ ಪುರುಷರಷ್ಟೇ ಹೊಣೆಗಾರಿಕೆಯಿಂದ ಸಮರ್ಪಕವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಅವರು ಮೆಚ್ಚುಗೆ ವ್ಯಕ್ತ ಪಡಿಸಿದರು. ವಿಶೇಷ ಸಾಧನೆ ಮಾಡಿದ ಗ್ರಾಮಾಭಿವೃದ್ಧಿ ಯೋಜನೆಯ ಸಾಧಕರನ್ನು ಗೌರವಿಸಲಾಯಿತು.
ಶಾಸಕ ಕೆ. ವಸಂತ ಬಂಗೇರ ಶುಭಾಶಂಸನೆ ಮಾಡಿದರು.

ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಡಾ. ಎಲ್. ಎಚ್. ಮಂಜುನಾಥ್, ಯೋಜನಾಧಿಕಾರಿ ರೂಪಾ ಜೈನ್ ಉಪಸ್ಥಿತರಿದ್ದರು.

 




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here