Thursday 25th, April 2024
canara news

ಕುಂದಾಪುರ ವಲಯ ದೈಹಿಕ ಶಿಕ್ಷಣ ಶಿಕ್ಷಕರ ಸಮ್ಮೇಳನ

Published On : 23 Feb 2017   |  Reported By : Bernard J Costa


ಕೋಟ:ದೈಹಿಕ ಶಿಕ್ಷಣ ಶಿಕ್ಷಕರು ಶಾಲೆಯಲ್ಲಿನ ವ್ಯವಸ್ಥೆಯ ಮುಂಚೂಣಿಯಲ್ಲಿರುವ ವ್ಯಕ್ತಿಯಾಗಿದ್ದು, ಶಾಲೆಗೆ ಅವರು ಆಧಾರ ಸ್ತಂಭವಿದ್ದಂತೆ ಎಂದು ಕುಂದಾಪುರದ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಸೀತಾರಾಮ ಶೆಟ್ಟಿ ಹೇಳಿದರು. ಅವರು ಶುಕ್ರವಾರ ಕೋಟೇಶ್ವರ ಸರಕಾರಿ ಪದವಿ ಪೂರ್ವ ಕಾಲೇಜಿನ ಸಭಾ ಭವನದಲ್ಲಿ ನಡೆದ ರಾಜ್ಯ ಪ್ರಾಥಮಿಕ ಮತ್ತು ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಕುಂದಾಪುರ ವಲಯದ ವಾರ್ಷಿಕ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು.

ಸಮಾರಂಭದ ಅಧ್ಯಕ್ಷತೆಯನ್ನು ಕೋಟೇಶ್ವರ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಕೃಷ್ಣಾನಂದ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಮಧುಕರ್ ಎಸ್, ಗೋಪಾಡಿ ಗ್ರಾಮ ಪಂಚಾಯಿತಿ ಸದಸ್ಯ ಗಜೇಂದ್ರ ಶೆಟ್ಟಿ,ಕೋಟೇಶ್ವರ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪ ಪ್ರಾಂಶುಪಾಲ ಪ್ರಭಾಕರ ಮಿತ್ಯಾಂತ ಆಗಮಿಸಿ ಶುಭ ಹಾರೈಸಿದರು. ವೇದಿಕೆಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕುಂದಾಪುರ ವಲಯದ ಅಧ್ಯಕ್ಷ ಮಲ್ಯಾಡಿ ಸದಾರಾಮ ಶೆಟ್ಟಿ, ಯುವ ಜನ ಸೇವಾ ಕ್ರೀಡಾಧಿಕಾರಿ ಕುಸುಮಾಕರ ಶೆಟ್ಟಿ, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ದತ್ತಾತೇಯ ಹಮ್ಮು ನಾಯಕ್,ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಉಪಾಧ್ಯಕ್ಷ ಸುಭಾಸ್ ಶೆಟ್ಟಿ, ಹಿರಿಯ ದೈಹಿಕ ಶಿಕ್ಷಣ ಶಿಕ್ಷಕ ಕರುಣಾಕರ ಶೆಟ್ಟಿ ಮೊದಲಾದವರು ವೇದಿಕೆಯಲ್ಲಿದ್ದರು. ಇದೇ ಸಂದರ್ಭದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಪ್ರಾಥಮಿಕ ಪ್ರೌಢಶಾಲಾ ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸಲಾಯಿತು. ಕಾರ್ಯಕ್ರಮ ಯಶಸ್ವಿಗೆ ಕುಂದಾಪುರದ ಸ್ಪೋಟ್ರ್ಸ್ ವಲ್ರ್ಡ್ ಸಹಕರಿಸಿತು. ಕುಂದಾಪುರ ವಲಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಸದಾಶಿವ ಶೆಟ್ಟಿ ಸ್ವಾಗತಿಸಿದರು. ಕಾರ್ಯದರ್ಶಿ ರಾಮ ಕೆ. ವರದಿ ವಾಚಿಸಿದರು. ಕೋಶಾಧಿಕಾರಿ ಜಯಪ್ರಸಾದ ಶೆಟ್ಟಿ ವಂದಿಸಿದರು. ದೈ.ಶಿ.ಶಿ ಗೋಪಾಲ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here