Tuesday 23rd, April 2024
canara news

ಬಿಲ್ಲವರ ಭವನದಲ್ಲಿ ನೆರವೇರಿದ ಓಂ-ಶನಿ-ಓಂ ಶ್ರೀ ಶನೀಶ್ವರ ಗ್ರಂಥ ಪಾರಾಯಣ

Published On : 04 Mar 2017   |  Reported By : Rons Bantwal


(ಚಿತ್ರ / ವರದಿ : ರೋನ್ಸ್ ಬಂಟ್ವಾಳ್)

ಮುಂಬಯಿ, ಮಾ.04: ಬಿಲ್ಲವರ ಅಸೋಸಿಯೇಶನ್ ಮುಂಬಯಿ ಸಾಂಸ್ಕೃತಿಕ ಉಪ ಸಮಿತಿ, ಅಸೋಸಿಯೇಶ ನ್‍ನ ಸಂಚಾಲಕತ್ವದ ಶ್ರೀ ಗುರು ನಾರಾಯಣ ಯಕ್ಷಗಾನ ಮಂಡಳಿ ವಾರ್ಷಿಕವಾಗಿ ನೆರವೇರಿಸುತ್ತಿರುವ ಸಾರ್ವಜನಿಕ ಓಂ-ಶನಿ-ಓಂ ಶ್ರೀ ಶನೀಶ್ವರ ಗ್ರಂಥ ಪಾರಾಯಣ ಕಾರ್ಯಕ್ರಮ ಇಂದಿಲ್ಲಿ ಶನಿವಾರ ಅಪರಾಹ್ನ ಸಾಂತಕ್ರೂಜ್ ಪೂರ್ವದಲ್ಲಿನ ಬಿಲ್ಲವರ ಭವನದÀಲ್ಲಿ ವಿಜೃಂಭನೆಯಿಂಂದ ನೆರವೇರಿಸಿತು.

ರಾಷ್ಟ್ರೀಯ ಬಿಲ್ಲವರ ಮಹಾ ಮಂಡಲದ ಅಧ್ಯಕ್ಷ ಜಯ ಸಿ.ಸುವರ್ಣ ಅವರ ಮಾರ್ಗದರ್ಶನದಲ್ಲಿ ನಡೆಸಲ್ಪಟ್ಟ ಪಾರಾಯಣ ಕಾರ್ಯಕ್ರಮಕ್ಕೆ ಅಸೋಸಿಯೇಶನ್‍ನ ಅಸೋಸಿಯೇಶನ್ ಅಧ್ಯಕ್ಷ ನಿತ್ಯಾನಂದ ಡಿ.ಕೋಟ್ಯಾನ್ ಮತ್ತು ಶಶಿ ನಿತ್ಯಾನಂದ್ ದಂಪತಿ ದೀಪ ಪ್ರಜ್ವಲಿಸಿ ಚಾಲನೆಯನ್ನೀಡಿ ಕಲಶ ಪ್ರತಿಷ್ಠಾಪನೆಗೈದರು.

ಶ್ರೀ ಗುರು ನಾರಾಯಣ ಯಕ್ಷಗಾನ ಮಂಡಳಿಯ ಕಲಾವಿದರು ಶ್ರೀ ಶನೀಶ್ವರ ಗ್ರಂಥ ಪಾರಾಯಣ ಮತ್ತು ಶ್ರೀ ಶನೀಶ್ವರ ಮಹಾಪೂಜೆ ನೆರವೇರಿಸಿದ್ದು, ಬಾಲಕೃಷ್ಣ ಪೂಜಾರಿ ಸಾಮೂಹಿಕ ಶನಿಪೂಜೆ ನೆರವೇರಿಸಿ ಪ್ರಸಾದ ವಿತರಿಸಿ ಅನುಗ್ರಹಿಸಿದರು.

ಈ ಸಂದರ್ಭದಲ್ಲಿ ಹಿರಿಯ ಉದ್ಯಮಿ ವಾಮನ ಡಿ.ಪೂಜಾರಿ, ಅಸೋಸಿಯೇಶನ್‍ನ ಗೌರವ ಪ್ರಧಾನ ಕಾರ್ಯದರ್ಶಿ ಧರ್ಮಪಾಲ ಜಿ.ಅಂಚನ್, ಗೌರವ ಪ್ರಧಾನ ಕೋಶಾಧಿಕಾರಿ ಮಹೇಶ್ ಸಿ.ಕಾರ್ಕಳ, ಸಾಂಸ್ಕೃತಿಕ ಸಮಿತಿ ಕಾರ್ಯಾಧ್ಯಕ್ಷ ದಯಾನಂದ ಆರ್. ಪೂಜಾರಿ, ಉಪಾಧ್ಯಕ್ಷ ಭಾಸ್ಕರ ವಿ.ಬಂಗೇರ, ಅಶೋಕ್ ಕುಕ್ಯಾನ್ ಸಸಿಹಿತ್ಲು, ಶ್ರೀ ಗುರು ನಾರಾಯಣ ಯಕ್ಷಗಾನ ಮಂಡಳಿ ಮುಖ್ಯಸ್ಥ ಸಿ.ಟಿ ಸಾಲ್ಯಾನ್, ಕೃಷ್ಣ ಬಂಗೇರ, ಸಾಮಾಜಿಕ ಮತ್ತು ಧಾರ್ಮಿಕ ಉಪ ಸಮಿತಿ ಗೌರವ ಕಾರ್ಯದರ್ಶಿ ರವೀಂದ್ರ ಎ.ಅವಿೂನ್, ಅಸೋಸಿಯೇಶನ್‍ನ ವ್ಯವಸ್ಥಾಪಕ ಭಾಸ್ಕರ್ ಟಿ.ಪೂಜಾರಿ, ದೇವರಾಜ್ ಪೂಜಾರಿ ಡೊಂಬಿವಿಲಿ, ಶಿವರಾಮ ಕೋಟ್ಯಾನ್ ಕಲೀನ ಸೇರಿದಂತೆ ಅಸೋಸಿಯೇಶನ್‍ನ ಸ್ಥಳೀಯ ಮತ್ತು ಸಮನ್ವಯ ಸಮಿತಿಗಳ ಮುಖ್ಯಸ್ಥರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಸಾಂಸ್ಕೃತಿಕ ಉಪ ಸಮಿತಿಯ ಸದಸ್ಯರುಗಳಾದ ಬೇಬಿ ಎಸ್.ಕುಕ್ಯಾನ್, ಪದ್ಮನಾಭ ಕೆ.ಪೂಜಾರಿ ಹಾಗೂ ಅನೇಕ ಯಕ್ಷಗಾನ ಕಲಾವಿದರು ಉಪಸ್ಥಿತರಿದ್ದು, ಯಶೋಧರ್ ಡಿ.ಪೂಜಾರಿ, ಮೂಲ್ಕಿ ಬಿ.ಎಂ ಸುವರ್ಣ ಗ್ರಂಥ ಪಾರಾಯಣ ನಡೆಸಿದರು. ನೆರೆದ ಸೇವಾಥಿರ್s, ಭಕ್ತಾಧಿಗಳು ಸಾಮೂಹಿಕ ಪೂಜೆಯಲ್ಲಿ ಪಾಲ್ಗೊಂಡು ಪ್ರಕ್ರಿಯೆ ನೆರವೇರಿಸಿ ಶ್ರೀ ಶನೀಶ್ವರ ದೇವರ ಕೃಪೆಗೆ ಪಾತ್ರರಾದರು.

 

 




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here