Sunday 11th, May 2025
canara news

ಕಲ್ಲಡ್ಕ ಶ್ರೀರಾಮ ವಿದ್ಯಾ ಕೇಂದ್ರಕ್ಕೆ ಗೋಲ್ಡನ್ ಸ್ಟಾರ್ ಗಣೇಶ್ ಭೇಟಿ

Published On : 23 Mar 2017   |  Reported By : Ronida Mumbai


ನಮ್ಮತನದ ಶಿಕ್ಷಣ ಸುಸಂಸ್ಕøತ ವ್ಯಕ್ತಿಯನ್ನಾಗಿ ರೂಪಿಸುತ್ತಿದೆ

(ಚಿತ್ರ / ವರದಿ : ರೊನಿಡಾ ಮುಂಬಯಿ)

ಮುಂಬಯಿ, ಮಾ.23: ಮಾನವೀಯ ಮೌಲ್ಯಗಳನ್ನು ಹಾಗೂ ದೇಶೀಯ ಸಂಸ್ಕøತಿಯನ್ನೊಳಗೊಂಡ ಶ್ರೀರಾಮ ವಿದ್ಯಾ ಕೇಂದ್ರದ ಶಿಕ್ಷಣ ಪದ್ಧತಿ ನನಗೆ ಅತೀವ ಸಂತೋಷ ತಂದಿದೆ. ಶಿಸ್ತು, ಆಚಾರ, ವಿಚಾರ, ಸಂಸ್ಕøತಿ, ನಮ್ಮತನ, ಜೀವನ ಪದ್ಧತಿಗೆ ಒತ್ತು ನೀಡುತ್ತಿರುವುದು ಇತರ ವಿದ್ಯಾ ಸಂಸ್ಥೆಗಳಿಗೆ ಮಾದರಿಯಾಗಿದೆ ಎಂದು ಚಲನಚಿತ್ರ ನಟ ಗೋಲ್ಡನ್ ಸ್ಟಾರ್ ಗಣೇಶ್ ಹೇಳಿದರು.

ಇಂದಿಲ್ಲಿ ಗುರುವಾರ ಬಂಟ್ವಾಳ ಅಲ್ಲಿನ ಕಲ್ಲಡ್ಕ ಶ್ರೀರಾಮ ವಿದ್ಯಾ ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿನ ವಿದ್ಯಾಥಿರ್üಗಳೊಂದಿಗೆ ಮಾತನಾಡಿದ ಗಣೇಶ್, ಇಲ್ಲಿನ ವಿದ್ಯಾ ಸಂಸ್ಥೆ ಮನುಷ್ಯನನ್ನು ಕೇವಲ ಆಧುನಿಕ ತಂತ್ರಜ್ಞಾನದಲ್ಲಿ ತಯಾರಿಸದೆ ಜೀವನ ಮೌಲ್ಯವನ್ನು ಮೈಗೂಡಿಸಿಕೊಂಡು ಸುಸಂಸ್ಕøತ ವ್ಯಕ್ತಿಯನ್ನಾಗಿ ರೂಪಿಸುತ್ತಿದೆ.ವಿದ್ಯಾಥಿರ್üಗಳು ಧನಾತ್ಮಕ ಚಿಂತನೆಳೊಂದಿಗೆ ಉತ್ತಮ ವಿಚಾರಗಳನ್ನು ಮುಂದಿಟ್ಟುಕೊಂಡು ವಿದ್ಯಾರ್ಜನೆ ಮಾಡಿದರೆ ಉತ್ತಮ ಜೀವನ ರೂಪಿಸಲು ಸಾಧ್ಯವಾಗಲಿದೆ ಎಂದರು.

ರಾಜ್ಯ ಅಲ್ಪ ಸಂಖ್ಯಾಕ ಮೋರ್ಚದ ಉಪಾಧ್ಯಕ್ಷ ರಹೀಂ ಉಚ್ಚಿಲ್ ಮಾತನಾಡಿ, ಕರಾವಳಿ ಜಿಲ್ಲೆಯಲ್ಲಿ ಶಾಂತಿ ನೆಮ್ಮದಿ, ಸಮಾಧಾನ, ತೃಪ್ತಿ ನೀಡುವ ಏಕೈಕ ವಿದ್ಯಾ ಕೇಂದ್ರವೆಂದರೆ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರವಾಗಿದೆ. ಇದು ವಿಶೇಷ ಶಕ್ತಿಯುಳ್ಳ ಕೇಂದ್ರವಾಗಿದೆ. ಕಲ್ಪಣೆಗೂ ಮೀರಿದ ಸಂಸ್ಕರದ ಶಿಕ್ಷಣ ನೀಡುವ ವಿದ್ಯಾಸಂಸ್ಥೆಗೆ ನಾವು ಧನ್ಯರಾಗಿದ್ದೇವೆ ಎಂದರು.

ವೇದಿಕೆಯಲ್ಲಿ ವಿವೇಕಾನಂದ ವಿದ್ಯಾ ವರ್ಧಕ ಸಂಘದ ಅಧ್ಯಕ್ಷರೂ ಕಲ್ಲಡ್ಕ ಶ್ರೀರಾಮ ವಿದ್ಯಾ ಕೇಂದ್ರದ ಸಂಚಾಲಕ ಡಾ| ಕಲ್ಲಡ್ಕ ಪ್ರಭಾಕರ್ ಭಟ್, ಸಂಚಾಲಕ ವಸಂತ ಮಾಧವ, ಡಾ| ಕಮಲ ಪಿ.ಭಟ್, ಅಶ್ರಫ್ ಉಚ್ಚಿಲ್ ಮತ್ತಿತರರು ಉಪಸ್ಥಿತರಿದ್ದರು. ಪ್ರಾಂಶುಪಾಲ ಕೃಷ್ಣ ಪ್ರಸಾದ್ ಸ್ವಾಗತಿಸಿ ವಂದಿಸಿದರು.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here