Sunday 11th, May 2025
canara news

ಪಿಂಚಣಿ ವಂಚಿತ ನೌಕರರ ಉಡುಪಿ ಜಿಲ್ಲಾ ಸಮಾವೇಶ ಉದ್ಘಾಟನೆ

Published On : 27 Mar 2017   |  Reported By : Bernard J Costa


ಕೋಟ: ಸರ್ಕಾರದಿಂದ ಶಿಕ್ಷಕರ ಮೇಲೆ ದಬ್ಬಾಳಿಕೆ ಹೆಚ್ಚಾಗುತ್ತಿದೆ. ಯಾವುದೇ ಸೌಲ`್ಯಗಳನ್ನು ನೀಡದೇ ವಂಚಿಸುತ್ತಿದೆ ಎಂದು ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘದ ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷ ಗಣೇಶ ಶೆಟ್ಟಿಗಾರ್ ಹೇಳಿದರು.

ಅವರು ಭಾನುವಾರ ಬ್ರಹ್ಮಾವರ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ಸಭಾ ಭವನದಲ್ಲಿ ಕರ್ನಾಟಕ ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘದ ಆಶ್ರಯದಲ್ಲಿ ನಡೆದ ಪಿಂಚಣಿ ವಂಚಿತ ನೌಕರರ ಉಡುಪಿ ಜಿಲ್ಲಾ ಸಮಾವೇಶದಲ್ಲಿ ಮಾತನಾಡಿದರು.

ಮಕ್ಕಳ ಭವಿಷ್ಯದ ಬಗ್ಗೆ ಯಾವಾಗಲೂ ಚಿಂತಿಸುವ ಅಧ್ಯಾಪಕರು ತಮ್ಮ ಭವಿಷ್ಯದ ಭದ್ರತೆಯನ್ನು ಕಳೆದುಕೊಂಡಿದ್ದಾರೆ. ಸರಕಾರ 2006ರ ಜೂನ್ ನಂತರ ಅನುದಾನಿತ ಶಿಕ್ಷಣ ಸಂಸ್ಥೆಯಲ್ಲಿ ದುಡಿಯುತ್ತಿರುವ ಅಧ್ಯಾಪಕರಿಗೆ ಪಿಂಚಣಿಯನ್ನು ನೀಡುತ್ತಿಲ್ಲ. ಕಾರ್ಮಿಕರಿಗೆ ಸಿಗುವ ಪಿಎಫ್, ಇಎಸ್‍ಐ ಸೌಲಭ್ಯ ಕೂಡಾ ದೊರಕುತ್ತಿಲ್ಲ. ನಿವೃತ್ತಿಯ ಸಮಯದಲ್ಲಿಯೂ ಆ ತಿಂಗಳ ವೇತನದೊಂದಿಗೆ ಮನೆಗೆ ಹೋಗಬೇಕಾದ ಪರಿಸ್ಥಿತಿ ತಂದೊಡ್ಡಿದೆ. ಭವಿಷ್ಯಕ್ಕೆ ಯಾವುದೇ ಭದ್ರತೆಯನ್ನು ನೀಡದ ಸರಕಾರದ ಈ ಕ್ರಮಕ್ಕೆ ಎಲ್ಲರೂ ಒಂದಾಗಿ ಹೋರಾಟ ನಡೆಸಿ ಈ ಸೌಲಭ್ಯಗಳನ್ನು ಪಡೆದುಕೊಳ್ಳಬೇಕಾಗಿದೆ ಎಂದರು.

ಸಮಾವೇಶ ಉದ್ಘಾಟಿಸಿದ ಸಂಘದ ರಾಜ್ಯಾಧ್ಯಕ್ಷ ಜಿ.ಹನುಮಂತಪ್ಪ ಮಾತನಾಡಿ ಸರಕಾರ ಅನುದಾನಿತ ಶಿಕ್ಷಣ ಸಂಸ್ಥೆಗಳ ಅಧ್ಯಾಪಕರಿಗೆ ಯಾವುದೇ ಸೇವಾ ಭದ್ರತೆ ನೀಡದೇ ನಿಕೃಷ್ಟವಾಗಿ ನೋಡಿಕೊಳ್ಳುತ್ತಿದೆ. ಅಧ್ಯಾಪಕರ ಇಡೀ ಕುಟುಂಬವನ್ನೇ ಅಂಧಕಾರದಲ್ಲಿ ಮುಳುಗಿಸಿದ ಸರ್ಕಾರ ಈ ಕ್ರಮ ಖಂಡನೀಯ. ಎಲ್ಲರೂ ಒಟ್ಟಾಗಿ ಹೋರಾಟ ನಡೆಸಿ ತಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕಾಗಿದೆ ಎಂದರು.

ಸಮಾವೇಶದಲ್ಲಿ ಸಹಶಿಕ್ಷಕ ಸಂಘದ ಅಧ್ಯಕ್ಷ ಕಿರಣ್ ಕುಮಾರ್ ಹೆಗ್ಡೆ, ಸರಕಾರಿ ನೌಕರರ ಸಂಘದ ಜಿಲ್ಲಾ ಸಂಚಾಲಕ ರವಿ ಎಸ್, ಕಾರ್ಯದರ್ಶಿ ರಾಮಚಂದ್ರ ಮೊದಲಾದವರು ಉಪಸ್ಥಿತರಿದ್ದರು. ಶಿಕ್ಷಕರಾದ ಸಚಿನ್ ಕುಮಾರ್ ಶೆಟ್ಟಿ ಸ್ವಾಗತಿಸಿದರು. ಪ್ರಸನ್ನ ಕುಮಾರ್ ಶೆಟ್ಟಿ ವಂದಿಸಿದರು. ಪ್ರಕಾಶ್ ಮಾಕೋಡಿ ಕಾರ್ಯಕ್ರಮ ನಿರೂಪಿಸಿದರು.

 

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here