Friday 26th, July 2024
canara news

ಯುವಕನಿಗೆ ಹಲ್ಲೆ ಖಂಡಿಸಿ ಪ್ರತಿಭಟನೆ; ಪೊಲೀಸರೊಂದಿಗೆ ಘರ್ಷಣೆ, ಲಾಠಿ ಚಾರ್ಚ್

Published On : 05 Apr 2017   |  Reported By : Canaranews Network   |  Pic On: Photo credit : DHNS


ಮಂಗಳೂರು: ಯುವಕನೊಬ್ಬನನ್ನು ಪೊಲೀಸರು ಅಕ್ರಮವಾಗಿ ಬಂಧಿಸಿ ದೈಹಿಕ ಹಲ್ಲೆ ನಡೆಸಿರುವುದಾಗಿ ಆರೋಪಿಸಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆ ಕಾರ್ಯಕರ್ತರು ಮಂಗಳವಾರ ದಿಢೀರ್ ಆಗಿ ಮಂಗಳೂರು ಪೊಲೀಸ್ ಆಯುಕ್ತರ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿ ಸಂದರ್ಭ ಘರ್ಷಣೆ ಉಂಟಾದ ಘಟನೆ ನಡೆದಿದೆ. ಘರ್ಷಣೆ ಸಂದರ್ಭ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿಚಾರ್ಚ್ ನಡೆಸಿದ್ದು, ಘಟನೆಯಲ್ಲಿ ೧೧ ಮಂದಿ ಪೊಲೀಸರು ಹಾಗೂ ೬೫ ಮಂದಿ ಗಾಯಗೊಂಡಿದ್ದಾರೆ. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡ ಐವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆ ಸಂಬಂಧ ನಗರ ಪೊಲೀಸರು ಈಗಾಗಲೇ ಒಟ್ಟು ೯೮ ಮಂದಿಯನ್ನು ಬಂಧಿಸಿದ್ದು, ಅವರ ವಿರುದ್ಧ ಕರ್ತವ್ಯಕ್ಕೆ ಅಡ್ಡಿ, ಪೊಲೀಸರ ಮೇಲೆ ಹಲ್ಲೆ ಸಹಿತ ಐಪಿಸಿ ಕಾಯ್ದೆಯ ವಿವಿಧ ಸೆಕ್ಷನ್ ಗಳಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಬಂಧಿತರನ್ನು ಮಂಗಳೂರಿನ ಪಾಂಡೇಶ್ವರ ಹಾಗೂ ಉರ್ವಾ ಪೊಲೀಸ್ ಠಾಣೆಗಳಲ್ಲಿ ಇರಿಸಲಾಗಿದೆ.

ಘಟನೆಗೆ ಕಾರಣ:
ಪಿಎಫ್ ಐ ಸಂಘಟನೆ ಕಾರ್ಯಕರ್ತರು ಮಂಗಳವಾರ ಪ್ರತಿಭಟನೆಯೊಂದರ ಸಂಬಂಧ ಪೊಲೀಸರಿಂದ ಪೂರ್ವಾನುಮತಿ ಪಡೆಯದೆ ಸುಮಾರು ೪೦೦ ಮಂದಿ ನೆಹರೂ ಮೈದಾನದ ಬಳಿ ಜಮಾವಣೆಗೊಂಡಿದ್ದರು. ಬಳಿಕ ಅಲ್ಲಿಂದ ಹ್ಯಾಮಿಲ್ಟನ್ ಸರ್ಕಲ್ ಹಾಗೂ ಎ.ಬಿ. ಶೆಟ್ಟಿ ವೃತ್ತದ ಕಡೆಯಿಂದ ಪೊಲೀಸರ ವಿರುದ್ಧ ಘೊಷಣೆ ಕೂಗುತ್ತಾ ಕಮಿಷನರ್ ಕಚೇರಿಗೆ ಮುತ್ತಿಗೆ ಹಾಕಲು ಮುಂದಾದಾಗ ಈ ಸಂದರ್ಭ ಡಿಸಿಪಿ ಶಾಂತರಾಜು ಹಾಗೂ ಡಾ. ಸಂಜೀವ ಪಾಟೀಲ್ ಅವರು ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿ ಅವರ ಮನವೊಲಿಸಲು ಪ್ರಯತ್ನಿಸಿದರು.ಆದರೆ, ಮನವಿಗೆ ಪ್ರತಿಭಟನಾಕಾರರು ಕಿವಿಗೊಡದಾಗ ಪೊಲೀಸರು ಹಾಗೂ ಪಿಎಫ್ಐ ಕಾರ್ಯಕರ್ತರ ನಡುವೆ ಘರ್ಷಣೆ ಉಂಟಾಗಿ ಮಾತಿನ ಚಕಮಕಿ ನಡೆದಿದೆ.




More News

ಪ್ರೊ| ಪಿ.ಎಲ್ ಧರ್ಮ ಅವರಿಗೆ ೨೦೨೪ ವರ್ಷದ ಅತ್ಯುತ್ತಮ ಪಬ್ಲಿಕ್ ರಿಲೇಶನ್ ವ್ಯಕ್ತಿ ಗೌರವ
ಪ್ರೊ| ಪಿ.ಎಲ್ ಧರ್ಮ ಅವರಿಗೆ ೨೦೨೪ ವರ್ಷದ ಅತ್ಯುತ್ತಮ ಪಬ್ಲಿಕ್ ರಿಲೇಶನ್ ವ್ಯಕ್ತಿ ಗೌರವ
ಗೋಪಾಲಕೃಷ್ಣ ಪಬ್ಲಿಕ್ ಟ್ರಸ್ಟ್, ಗೋಕುಲ ಆಷಾಢ ಏಕಾದಶಿ ಪರ್ವ ದಿನ ಆಚರಣೆ
ಗೋಪಾಲಕೃಷ್ಣ ಪಬ್ಲಿಕ್ ಟ್ರಸ್ಟ್, ಗೋಕುಲ ಆಷಾಢ ಏಕಾದಶಿ ಪರ್ವ ದಿನ ಆಚರಣೆ
ಐಲೇಸಾ ದಿ ವಾಯ್ಸ್ ಆಫ್ ಓಷನ್(ರಿ) ಸಂಸ್ಥೆಯಿ0ದ ನಂದಾದೀಪ ಸಂದೀಪ ಕಾರ್ಯಕ್ರಮ
ಐಲೇಸಾ ದಿ ವಾಯ್ಸ್ ಆಫ್ ಓಷನ್(ರಿ) ಸಂಸ್ಥೆಯಿ0ದ ನಂದಾದೀಪ ಸಂದೀಪ ಕಾರ್ಯಕ್ರಮ

Comment Here