Friday 19th, April 2024
canara news

ಮಂಗಳೂರು-ಬೆಂಗಳೂರು ಕುಡ್ಲ ಎಕ್ಸ್ಪ್ರೆಸ್ ರೈಲಿಗೆ ಚಾಲನೆ

Published On : 10 Apr 2017   |  Reported By : Canaranews Network   |  Pic On: Photo credit : DHNS


ಮಂಗಳೂರು: ಬಹುನಿರೀಕ್ಷಿತ ಮಂಗಳೂರು-ಬೆಂಗಳೂರು ಹಗಲು 'ಕುಡ್ಲ ಎಕ್ಸ್ಪ್ರೆಸ್' ರೈಲು ಓಡಾಟಕ್ಕೆ ಭಾನುವಾರ ಕೇಂದ್ರ ರೈಲ್ವೆ ಸಚಿವ ಸುರೇಶ ಪ್ರಭು ಅವರು ಗೋವಾದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದರು.ಉದ್ಘಾಟನೆಯ ಬಳಿಕ ಬೆಳಗ್ಗೆ 11 ಗಂಟೆಗೆ ಪ್ರಥಮ ರೈಲು ಮಂಗಳೂರು ಜಂಕ್ಷನ್ನಿಂದ ಸಂಚಾರ ಆರಂಭಿಸಿತು ಮಂಗಳೂರು ಜಂಕ್ಷನ್ ರೈಲ್ವೆ ನಿಲ್ದಾಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಕೇಂದ್ರ ಅಂಕಿ-ಅಂಶ ಹಾಗೂ ಕಾರ್ಯಕ್ರಮ ಅನುಷ್ಠಾನ ಸಚಿವ ಡಿ.ವಿ.ಸದಾನಂದ ಗೌಡ, ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ, ಸಂಸದ ನಳಿನ್ ಕುಮಾರ್ ಕಟೀಲು, ಶಾಸಕ ಜೆ.ಆರ್.ಲೋಬೊ, ವಿಪಕ್ಷ ಸಚೇತಕ ಕ್ಯಾ.ಗಣೇಶ್ ಕಾರ್ಣಿಕ್, ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಮೇಯರ್ ಕವಿತಾ ಸನಿಲ್ ಮತ್ತಿತರರು ಉಪಸ್ಥಿತರಿದ್ದರು.

೩ ದಿನ ರೈಲು ಓಡಾಟ: ಮಂಗಳೂರು ಜಂಕ್ಷನ್ನಿಂದ ಬೆಂಗಳೂರಿನ ಯಶವಂತಪುರ ನಡುವೆ ಈ ನೂತನ ರೈಲು ಸಂಚರಿಸಲಿದೆ. ರೈಲುಗಾಡಿ ಸಂಖ್ಯೆ 16576 ಮತ್ತು 16575 ವಾರಕ್ಕೆ ಮೂರು ದಿನ ಓಡಾಟ ನಡೆಸಲಿದೆ.ರೈಲು ಸಂಖ್ಯೆ. 16576 ಸಂಚಾರ ರೈಲು ನಂ. 16576 ಮಂಗಳೂರು ಜಂಕ್ಷನ್ನಿಂದ ಸೋಮವಾರ, ಬುಧವಾರ ಹಾಗೂ ಶುಕ್ರವಾರ ಪೂರ್ವಾಹ್ನ 11:30ಕ್ಕೆ ಹೊರಟು ರಾತ್ರಿ 8:30ಕ್ಕೆ ಯಶವಂತಪುರ ತಲುಪಲಿದೆ.ರೈಲು ಸಂಖ್ಯೆ 16575 ಸಂಚಾರ ರೈಲು ನಂ. 16575 ಯಶವಂತಪುರದಿಂದ ಪ್ರತೀ ಭಾನುವಾರ, ಮಂಗಳವಾರ ಹಾಗೂ ಗುರುವಾರ ಸಂಚರಿಸಲಿದೆ. ಯಶವಂತಪುರದಿಂದ ಬೆಳಗ್ಗೆ 7:50ಕ್ಕೆ ಹೊರಟು ಸಂಜೆ 5:30ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ.

 




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here