Sunday 21st, July 2024
canara news

ಲಾರಿಯನ್ನು ಅಡ್ಡಗಟ್ಟಿ ಚಾಲಕನಿಗೆ ಚೂರಿ ಇರಿತ; ದರೋಡೆ

Published On : 10 Apr 2017   |  Reported By : Canaranews Network

ಮಂಗಳೂರು: ಸಿಮೆಂಟ್ ಸಾಗಾಟ ಮಾಡುತ್ತಿದ್ದ ಲಾರಿಯೊಂದನ್ನು ಅಡ್ಡಗಟ್ಟಿ ಲಾರಿಯಲ್ಲಿದ್ದ ಚಾಲಕನಿಗೆ ಚೂರಿಯಿಂದ ಇರಿದು ಹಲ್ಲೆ ನಡೆಸಿ ಆತನ ಬಳಿಯಿದ್ದ ನಗದನ್ನು ವಶಪಡಿಸಿಕೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ ೪೮ರಲ್ಲಿ ಶಿರಾಡಿ ಸಮೀಪದ ಎಂಜಿರ ಎಂಬಲ್ಲಿ ಶನಿವಾರ ನಡೆದಿದೆ.

ಚಿಕ್ಕಮಗಳೂರಿನ ಅಂಲೆ ಗ್ರಾಮದ ಪಾಂಡುರಂಗ ಎಂಬವರ ಪುತ್ರ ರಾಘವೇಂದ್ರ(೩೨) ಎಂಬಾತ ಹಲ್ಲೆಗೊಳಗಾದ ಸಿಮೆಂಟ್ ಲಾರಿಯ ಚಾಲಕನಾಗಿದ್ದು ಮಂಗಳೂರಿಗೆ ಸಿಮೆಂಟ್ ಸಾಗಿಸುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಹಲ್ಲೆಗೊಳಗಾದ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ೫ ಮಂದಿ ದರೋಡೆಕೋರರ ತಂಡ ಈ ಲಾರಿಯನ್ನು ಹಿಂಬಾಲಿಸಿಕೊಂಡು ಬಂದು ಕೃತ್ಯವೆಸಗಿರಬಹುದು ಎಂದು ಶಂಕಿಸಲಾಗಿದೆ. ಬಂಟ್ವಾಳ ಡಿವೈಎಸ್ಪಿ ರವೀಶ್ ಸಿ.ಆರ್. ನೇತೃತ್ವದಲ್ಲಿ ಬೆಳ್ತಂಗಡಿ ವೃತ್ತ ನಿರೀಕ್ಷಕ ನಾಗೇಶ್ ಕದ್ರಿ, ಧರ್ಮಸ್ಥಳ ಠಾಣಾ ಉಪನಿರೀಕ್ಷಕ ರಾಮ ನಾಯ್ಕ್ ಮತ್ತು ಪೊಲೀಸರು ಸ್ಥಳಕ್ಕಾಗಮಿಸಿ ಮಾಹಿತಿ ಕಲೆ ಹಾಕಿದ್ದಾರೆ.

More News

ಪ್ರೊ| ಪಿ.ಎಲ್ ಧರ್ಮ ಅವರಿಗೆ ೨೦೨೪ ವರ್ಷದ ಅತ್ಯುತ್ತಮ ಪಬ್ಲಿಕ್ ರಿಲೇಶನ್ ವ್ಯಕ್ತಿ ಗೌರವ
ಪ್ರೊ| ಪಿ.ಎಲ್ ಧರ್ಮ ಅವರಿಗೆ ೨೦೨೪ ವರ್ಷದ ಅತ್ಯುತ್ತಮ ಪಬ್ಲಿಕ್ ರಿಲೇಶನ್ ವ್ಯಕ್ತಿ ಗೌರವ
ಗೋಪಾಲಕೃಷ್ಣ ಪಬ್ಲಿಕ್ ಟ್ರಸ್ಟ್, ಗೋಕುಲ ಆಷಾಢ ಏಕಾದಶಿ ಪರ್ವ ದಿನ ಆಚರಣೆ
ಗೋಪಾಲಕೃಷ್ಣ ಪಬ್ಲಿಕ್ ಟ್ರಸ್ಟ್, ಗೋಕುಲ ಆಷಾಢ ಏಕಾದಶಿ ಪರ್ವ ದಿನ ಆಚರಣೆ
ಐಲೇಸಾ ದಿ ವಾಯ್ಸ್ ಆಫ್ ಓಷನ್(ರಿ) ಸಂಸ್ಥೆಯಿ0ದ ನಂದಾದೀಪ ಸಂದೀಪ ಕಾರ್ಯಕ್ರಮ
ಐಲೇಸಾ ದಿ ವಾಯ್ಸ್ ಆಫ್ ಓಷನ್(ರಿ) ಸಂಸ್ಥೆಯಿ0ದ ನಂದಾದೀಪ ಸಂದೀಪ ಕಾರ್ಯಕ್ರಮ

Comment Here