Thursday 8th, May 2025
canara news

ಪಿಎಫ್ಐ ಈಗ ನನ್ನನ್ನು ಟಾರ್ಗೆಟ್ ಮಾಡಿದೆ: ಸಚಿವ ಖಾದರ್

Published On : 11 Apr 2017   |  Reported By : Canaranews Network


ಮಂಗಳೂರು: ನಾನು ಮಾನವೀಯತೆ ದೃಷ್ಟಿಯಿಂದ ಖುರೇಶಿಯನ್ನು ನೋಡಲು ಕೆಎಂಸಿ ಆಸ್ಪತ್ರೆಗೆ ಭೇಟಿ ನೀಡಿದ್ದೆ. ಈ ಸಂದರ್ಭದಲ್ಲಿ ಖುರೇಶಿ ಸಹೋದರ ಆತ ಯಾವುದೇ ಸಂಘಟನೆ, ಅಪರಾಧ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ ಎಂದು ಹೇಳಿದ್ದಾರೆ.

ಆದರೆ, ಪಿಎಫ್ಐ ಸಂಘಟನೆ ಮಾತ್ರ ನನ್ನನ್ನು ಟಾರ್ಗೆಟ್ ಮಾಡಿದೆ ಎಂದು ಯುಟಿ ಖಾದರ್ ಹೇಳಿದ್ದಾರೆ. ಕೊಲೆ ಯತ್ನ ಪ್ರಕರಣವೊಂದರ ಆರೋಪಿ ಅಹ್ಮದ್ ಖುರೇಶಿ ಮೇಲೆ ಪೊಲೀಸ್ ದೌರ್ಜನ್ಯ ನಡೆದಿದೆ ಎನ್ನಲಾಗಿರುವ ಪ್ರಕರಣ ಮತ್ತು ಪೊಲೀಸ್ ಕಮಿಷನರ್ ಕಚೇರಿ ಮುಂದೆ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ನಡೆದ ಲಾಠಿಚಾರ್ಜ್ ಗೆ ಸಂಬಂಧಿಸಿದಂತೆ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಯು.ಟಿ.ಖಾದರ್ ಸೋಮವಾರ ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು.ಅಹ್ಮದ್ ಖುರೇಶಿ ಮೇಲೆ ಪೊಲೀಸ್ ದೌರ್ಜನ್ಯ ನಡೆದಿದೆ ಎನ್ನಲಾಗಿರುವ ಪ್ರಕರಣದ ತನಿಖೆ ನಡೆಸಲು ಶೀಘ್ರವೇ ತನಿಖಾಧಿಕಾರಿಯನ್ನು ನೇಮಿಸಲಾಗುವುದು ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದರು.

ಈ ಘಟನೆಯ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವರಿಗೆ ವರದಿ ನೀಡುವ ಸಲುವಾಗಿ ಗಾಯಾಳುಗಳನ್ನು ಭೇಟಿಯಾಗಿದ್ದೆ. ಈ ಪ್ರಕರಣದ ಬಗ್ಗೆ ಶೀಘ್ರ ವರದಿ ಸಲ್ಲಿಸಲಿದ್ದೇನೆ ಎಂದು ಖಾದರ್ ಹೇಳಿದರು.

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here