Tuesday 23rd, April 2024
canara news

ಬಾವಿಯಲ್ಲಿ ವಿವಾಹಿತೆಯ ಶವ ಪತ್ತೆ, ಆತ್ಮಹತ್ಯೆ ಶಂಕೆ

Published On : 11 Apr 2017   |  Reported By : Canaranews Network


ಮಂಗಳೂರು: ಮೂಡುಬಿದಿರೆಯ ಶಿರ್ತಾಡಿಯಲ್ಲಿ ವಿವಾಹಿತ ಮಹಿಳೆಯೊಬ್ಬರ ಶವ ಸೋಮವಾರ ಬೆಳಿಗ್ಗೆ ಬಾವಿಯೊಂದರಲ್ಲಿ ಪತ್ತೆಯಾಗಿದ್ದು ಆತ್ಮಹತ್ಯೆ ಎಂದು ಶಂಕಿಸಲಾಗಿದೆ.

ಮೃತರನ್ನು ಸಂಧ್ಯಾ ಜೈನ್ (32) ಎಂದು ಗುರುತಿಸಲಾಗಿದೆ. ಸಂಧ್ಯಾ ಮೂಲತಃ ಶಿವಮೊಗ್ಗದವರು. ಕಳೆದ ಆರು ತಿಂಗಳ ಹಿಂದಷ್ಟೇ ಮೂಡುಬಿದಿರೆಯ ವಕೀಲರೊಬ್ಬರನ್ನು ಮದುವೆಯಾಗಿದ್ದರು. ಮದುವೆ ಆಗುವುದಕ್ಕಿಂತ ಮೊದಲು ಸಂಧ್ಯಾ ಎಸ್.ಡಿ.ಎಂ ಪದವಿ ಕಾಲೇಜು ಉಜಿರೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು.

ಸದಾ ನಗುಮುಖದಿಂದ ಕಾಲೇಜಿನಲ್ಲಿ ಚಿರಪರಿಚಿತರಾಗಿದ್ದ ಸಂಧ್ಯಾ ಜೈನ್ ಸಾವು ಅವರ ಪರಿಚಿತರು, ಬಂಧುಗಳು ಹಾಗೂ ಕುಟುಂಬಸ್ಥರಿಗೆ ಅಘಾತ ಉಂಟು ಮಾಡಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಹಿನ್ನಲೆಯಲ್ಲಿ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಮೃತ ಸಂಧ್ಯಾ ಸಹೋದರ ವಜ್ರ ಕುಮಾರ್ ನೀಡಿದ ದೂರಿನ ಮೇರೆಗೆ ಅನುಮಾನಾಸ್ಪದ ಸಾವು ಪ್ರಕರಣ ದಾಖಲಾಗಿದೆ.

 




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here