Saturday 20th, April 2024
canara news

ಸೌಜನ್ಯಾ ಕೊಲೆ ಪ್ರಕರಣ: ಮರು ತನಿಖೆಗೆ ಹೈಕೋರ್ಟ್ ತಡೆ

Published On : 13 Apr 2017   |  Reported By : Canaranews Network


ಮಂಗಳೂರು : ದ.ಕ. ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ಎಸ್ ಡಿಎಂ ಕಾಲೇಜು ವಿದ್ಯಾರ್ಥಿನಿ ಸೌಜನ್ಯಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರು ತನಿಖೆಗೆ ಆದೇಶಿಸಿದ್ದ ಸಿಬಿಐ ವಿಶೇಷ ನ್ಯಾಯಾಲಯದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ಮಂಗಳವಾರ ತಡೆ ನೀಡಿದೆ. ಪ್ರಕರಣ ರದ್ದುಕೋರಿ ಸಾಕ್ಷಿಗಳಾದ ಧೀರಜ್ ಜೈನ್, ಉದಯ್ ಜೈನ್ ಹಾಗೂ ಮಲ್ಲಿಕ್ ಜೈನ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಆನಂದ ಬೈರಾರೆಡ್ಡಿ ಅವರಿದ್ದ ಏಕಸದಸ್ಯ ಪೀಠ ವಿಚಾರಣೆ ನಡೆಸಿ ಈ ಆದೇಶ ನೀಡಿದೆ.ಅಲ್ಲದೇ ಸಿಬಿಐ ತನಿಖಾ ಸಂಸ್ಥೆ ಮತ್ತು ದೂರುದಾರರಾದ ಸೌಜನ್ಯಾ ತಂದೆ ಚಂದಪ್ಪಗೌಡಗೆ ತುರ್ತು ನೋಟಿಸ್ ಜಾರಿ ಮಾಡಿ ವಿಚಾರಣೆ ಮುಂದೂಡಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಪಿ.ಪಿ. ಹೆಗ್ಡೆ ವಾದ ಮಂಡಿಸಿದರು. ಅರ್ಜಿದಾರರ ಪರ ವಕೀಲ ಪಿ.ಪಿ.ಹೆಗ್ಡೆ, 'ಪ್ರಕರಣದಲ್ಲಿ ಅರ್ಜಿದಾರರ ಯಾವುದೇ ಪಾತ್ರವಿಲ್ಲ ಎಂಬುದು ತನಿಖೆಯಲ್ಲಿ ಸಾಬೀತಾಗಿದೆ. ದೋಷಾರೋಪ ಪಟ್ಟಿಯಲ್ಲಿ ಅರ್ಜಿದಾರರನ್ನು ಸಾಕ್ಷಿಗಳಾಗಿ ಪರಿಗಣಿಸಲಾಗಿದೆ' ಎಂದರು. 'ಒಂದು ಬಾರಿ ಸಮಗ್ರವಾದ ತನಿಖೆ ನಡೆಸಿ ಕೋರ್ಟ್ಗೆ ದೋಷಾರೋಪ ಪಟ್ಟಿ ಸಲ್ಲಿಸಿದ ನಂತರ ಮರು ತನಿಖೆಗೆ ಆದೇಶಿಸಲು ಕಾನೂನಿನಲ್ಲಿ ಅವಕಾಶವಿಲ್ಲ' ಎಂದು ವಿವರಿಸಿದರು. 'ಸಿಬಿಐ ನ್ಯಾಯಾಲಯ ಸೌಜನ್ಯಾ ಕೊಲೆ ಪ್ರಕರಣದ ತನಿಖೆಗೆ ಆದೇಶಿಸಿದ ಕ್ರಮ ಕಾನೂನು ಬಾಹಿರವಾಗಿದ್ದು, ಆ ಆದೇಶ ರದ್ದುಪಡಿಸಬೇಕು.

ಪ್ರಕರಣದ ಮರು ತನಿಖೆಗೆ ತಡೆಯಾಜ್ಞೆ ನೀಡಬೇಕು' ಎಂದು ಕೋರಿದರು. ಇದನ್ನು ಮಾನ್ಯ ಮಾಡಿದ ನ್ಯಾಯಮೂರ್ತಿಗಳು ವಿಚಾರಣೆಗೆ ತಡೆ ನೀಡಿ, ಪ್ರತಿವಾದಿಗಳಾದ ಸಿಬಿಐ, ದೂರುದಾರರಾದ ಸೌಜನ್ಯಾಳ ತಂದೆ ಚಂದಪ್ಪ ಗೌಡ ಅವರಿಗೆ ತುರ್ತು ನೋಟಿಸ್ ಜಾರಿಗೆ ಆದೇಶಿಸಿದರು. 2012ರ ಅಕ್ಟೋಬರ್ 9ರಂದು ಧರ್ಮಸ್ಥಳ ಮತ್ತು ಉಜಿರೆ ಮಧ್ಯದ ರಸ್ತೆಯಲ್ಲಿ ನೇತ್ರಾವತಿ ನದಿ ಸಮೀಪ ಸೌಜನ್ಯಾ ಶವ ಪತ್ತೆಯಾಗಿತ್ತು.

 




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here