Saturday 20th, April 2024
canara news

ಯೇಸು ಕ್ರಿಸ್ತರ ಕೊನೆಯ ಭೋಜನದ ಸ್ಮರಣೆ

Published On : 15 Apr 2017   |  Reported By : Canaranews Network

ಮಂಗಳೂರು: ಯೇಸು ಕ್ರಿಸ್ತರು ತಮ್ಮ ಕೊನೆಯ ಭೋಜನದ ವೇಳೆ 12 ಮಂದಿ ಶಿಷ್ಯರ ಪಾದ ತೊಳೆದು ಸೇವೆಯ ಸಂಸ್ಕಾರ ಪ್ರತಿಪಾದಿಸಿದುದರ ಸಂಕೇತವಾಗಿ ಕ್ರೈಸ್ತ ಚರ್ಚ್ಗಳಲ್ಲಿ ಗುರುವಾರ ಸಂಜೆ ಧರ್ಮಗುರು 12 ಜನ ಕ್ರೈಸ್ತರ ಪಾದಗಳನ್ನು ತೊಳೆದರು. ಮಂಗಳೂರಿನ ರೊಜಾರಿಯೋ ಕೆಥೆಡ್ರಲ್ನಲ್ಲಿ ಬಿಷಪ್ ರೆ| ಡಾ| ಅಲೋಶಿಯಸ್ ಪಾಪ್ಲಾ ಡಿ'ಸೋಜಾ ಪ್ರಕ್ರಿಯೆ ನಡೆಸಿದರು. ಮಂಗಳೂರಿನಲ್ಲಿ 6 ಪುರುಷರು, 6 ಮಹಿಳೆಯರು, ಪಾದ ತೊಳೆಯಲಾಯಿತು. ಮಹಿಳೆಯರಿಗೂ ಸಮಾನ ಸ್ಥಾನಮಾನ ನೀಡಬೇಕು ಎಂದು ಪೋಪ್ ಫ್ರಾನ್ಸಿಸ್ ಅವರ ಆದೇಶದಂತೆ ಕಳೆದ ವರ್ಷದಿಂದ ಈ ಬದಲಾವಣೆ ಮಾಡಲಾಗಿತ್ತು.

ಮಹಿಳೆಯರಿಗೆ ಸ್ಥಾನಮಾನ ಕಲ್ಪಿಸುವಾಗ ಯುವಜನರಿಗೆ, ವಯಸ್ಕರಿಗೆ, ರೋಗಿಗಳಿಗೆ ಹಾಗೂ ಧಾರ್ಮಿಕ ವ್ಯಕ್ತಿಗಳಿಗೂ ಪ್ರಾತಿನಿಧ್ಯ ನೀಡಲಾಗಿದ್ದು, ಅದರಂತೆ ಧರ್ಮ ಭಗಿನಿಯರೂ ಭಾಗವಹಿಸಿದ್ದರು.

More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here