Friday 8th, December 2023
canara news

ಉಳ್ಳಾಲ ಸೆಂಟ್ರಲ್ ಕಮಿಟಿ ಟ್ರಸ್ಟ್ ವತಿಯಿಂದ ಭಾನುವಾರ ಬೃಹತ್ ರಕ್ತದಾನ ಶಿಬಿರ ಉಳ್ಳಾಲ ಮಾಸ್ತಿಕಟ್ಟೆಯಲ್ಲಿ ಜರಗಿತು.

Published On : 18 Apr 2017   |  Reported By : Rons Bantwal


ಉಳ್ಳಾಲ: ಸಮಾಜದಲ್ಲಿ ಹಿಂದುಳಿದವರ ಸೇವೆಯಲ್ಲಿ ನಿರಂತರವಾಗಿ ತೊಡಗಿಸಿಕೊಂಡು, ಸಮಾಜಮುಖಿ ಕಾರ್ಯಕ್ರಮಗಳೊಂದಿಗೆ ಬೃಹತ್ ಸಂಸ್ಥೆಯಾಗಿ ಬೆಳೆಯುವ ಮೂಲಕ ಸೆಂಟ್ರಲ್ ಕಮಿಟಿ ಉಳ್ಳಾಲಕ್ಕೆ ಆಶ್ರಯವಾಗಿರಲಿ ಎಂದು ಸೈಯ್ಯದ್ ಮದನಿ ದರ್ಗಾ ಮತ್ತು ಸಮೂಹ ಸಂಸ್ಥೆಗಳ ಅಧ್ಯಕ್ಷ ಅಬ್ದುಲ್ ರಶೀದ್ ಅಭಿಪ್ರಾಯಪಟ್ಟರು.

ಅವರು ಉಳ್ಳಾಲ ಸೆಂಟ್ರಲ್ ಕಮಿಟಿ ಟ್ರಸ್ಟ್ ಮತ್ತು ಫಿದಾಗೈಸ್ ಹಾಗೂ ಇಂಡಿಯನ್ ರೆಡ್‍ಕ್ರಾಸ್ ಸೊಸೈಟಿ ಆಶ್ರಯದಲ್ಲಿ ಉಳ್ಳಾಲ ಮಾಸ್ತಿಕಟ್ಟೆಯ ಉಳ್ಳಾಲ ಸೆಂಟ್ರಲ್ ಕಮಿಟಿ ಕಚೇರಿಯಲ್ಲಿ ಭಾನುವಾರ ಜರಗಿದ ಸಾರ್ವಜನಿಕ ಬೃಹತ್ ರಕ್ತದಾನ ಶಿಬಿರಕ್ಕೆ ಗಿಡವೊಂದಕ್ಕೆ ನೀರು ಹಾಯಿಸುವ ಮೂಲಕ ಚಾಲನೆ ನೀಡಿದರು.

ದುಶ್ಚಟಗಳು, ಮಧ್ಯವ್ಯಸನಿಗಳಿಂದ ಶಾಂತಿ, ಸೌಹಾರ್ದಯುತ ಉಳ್ಳಾಲದಲ್ಲಿ ಅಶಾಂತಿಯ ವಾತಾವರಣ ನಿರ್ಮಾಣವಾಗುತ್ತಿದೆ. ಇಂತಹ ಯುವಸಮುದಾಯಕ್ಕೆ ಉತ್ತಮ ಮಾರ್ಗದರ್ಶನದ ಅಗತ್ಯತೆ ಇದ್ದು, ಈ ನಿಟ್ಟಿನಲ್ಲಿ ಸೆಂಟ್ರಲ್ ಕಮಿಟಿ ಉತ್ತಮವಾದ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸಮಾಜಕ್ಕೆ ಮಾದರಿಯಾಗಿದೆ. ಸಂಸ್ಥೆ, ಸಂಘಟನೆಗಳು ಹುಟ್ಟಿ ಸಾಯುತ್ತಲೇ ಇದೆ. ಈ ನಡುವೆ ಐದು ವರ್ಷಗಳಿಂದ ಸಮಾಜಮುಖಿ ಕಾರ್ಯಗಳಲ್ಲಿ ಉಳ್ಳಾಲ ಸೆಂಟ್ರಲ್ ಕಮಿಟಿ ತೊಡಗಿಸಿಕೊಂಡು ಯಶಸ್ವಿಯಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಳ್ಳಾಲ ಸೆಂಟ್ರಲ್ ಕಮಿಟಿ ಅಧ್ಯಕ್ಷ ಅನ್ವರ್ ಹುಸೈನ್ ವಹಿಸಿ ಮಾತನಾಡಿ ಸೆಂಟ್ರಲ್ ಕಮಿಟಿ ನಿರಂತರವಾಗಿ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡು ಬೆಳೆಯುತ್ತಿದ್ದು, ಇದೀಗ ರಕ್ತದಾನದ ಮೂಲಕ ತುರ್ತು ಅವಶ್ಯಕತೆಯಲ್ಲಿರುವ ಜನರಿಗೆ ಸಹಕರಿಸಲು ಮುಂದಾಗಿದೆ. ಮುಂದಿನ ದಿನಗಳಲ್ಲಿ ಬೃಹತ್ ಆಗಿ ಹಲವು ಯುನಿಟ್ ಗಳ ರಕ್ತ ಸಂಗ್ರಹಿಸಿ ಜನರಿಗೆ ಅನುಕೂಲವಾಗುವ ಸೇವೆಯನ್ನು ಕಮಿಟಿ ಯೋಜನೆ ರೂಪಿಸಿದೆ ಎಂದರು.

ಉಳ್ಳಾಲ ನಗರಸಭೆ ಅಧ್ಯಕ್ಷ ಕೆ.ಹುಸೈನ್ ಕುಂಞÂಮೋನು, ಉಳ್ಳಾಲ ನಗರಸಭೆ ಮಾಜಿ ಉಪಾಧ್ಯಕ್ಷೆ ರಝಿಯಾ ಇಬ್ರಾಹಿಂ, ಫಿದಾಗೈಸ್ ಮಂಚಿಲ ಇದರ ಗೌರವಾಧ್ಯಕ್ಷ ಮುಸ್ತಾಫಾ ಇಸ್ಮಾಯಿಲ್, ಅಹಮ್ಮದ್ ಬಾವ ಕುಂಬಳ ಮುಖ್ಯ ಅತಿಥಿಗಳಾಗಿದ್ದರು.

ಉಳ್ಳಾಲ ಸೆಂಟ್ರಲ್ ಕಮಿಟಿ ಜತೆ ಕಾರ್ಯದರ್ಶಿ ಹೆಚ್. ಇಸ್ಮಾಯಿಲ್ ಶಾಫಿ ಬಬ್ಬುಕಟ್ಟೆ ಸ್ವಾಗತಿಸಿದರು. ಉಳ್ಳಾಲ ಸೆಂಟ್ರಲ್ ಕಮಿಟಿಯ ಪ್ರಧಾನ ಕಾರ್ಯದರ್ಶಿ ಯು.ಕೆ.ಮಹಮ್ಮದ್ ಮುಸ್ತಾಫ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಲೆಕ್ಕಪರಿಶೋಧಕ ಅಹ್ಮದ್ ಬಾವಾ ಕೊಟ್ಟಾರ ವಂದಿಸಿದರು.




More News

ಹಳೆ ವಿದ್ಯಾರ್ಥಿಗಳ ಸಂಘ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಡೇರಿ
ಹಳೆ ವಿದ್ಯಾರ್ಥಿಗಳ ಸಂಘ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಡೇರಿ
ಪೆರ್ಮಂಕಿಗುತ್ತು ರಿತೇಶ್ ಪಕ್ಕಳ ಅವರಿಗೆ ಪಿಹೆಚ್‍ಡಿ ಪದವಿ
ಪೆರ್ಮಂಕಿಗುತ್ತು ರಿತೇಶ್ ಪಕ್ಕಳ ಅವರಿಗೆ ಪಿಹೆಚ್‍ಡಿ ಪದವಿ
ಇಪ್ಪತ್ತ್ತರನೇ ವಾರ್ಷಿಕ ಮಹಾಸಭೆ ಪೂರೈಸಿದ ಗಾಣಿಗ ಸಮಾಜ ಮುಂಬಯಿ
ಇಪ್ಪತ್ತ್ತರನೇ ವಾರ್ಷಿಕ ಮಹಾಸಭೆ ಪೂರೈಸಿದ ಗಾಣಿಗ ಸಮಾಜ ಮುಂಬಯಿ

Comment Here