Thursday 26th, April 2018
canara news

ಎತ್ತಿನಹೊಳೆ ಎ.೧೮ರಂದು ವಾಸ್ತವಿಕತೆ ಪರಿಶೀಲನೆ; ಕುಮಾರಸ್ವಾಮಿ

Published On : 19 Apr 2017   |  Reported By : Canaranews Network


ಮಂಗಳೂರು: ಎತ್ತಿನಹೊಳೆ ಕಾಮಗಾರಿ ಪ್ರದೇಶಕ್ಕೆ ಎ.೧೮ರಂದು ಭೇಟಿ ನೀಡಿ ಅಲ್ಲಿನ ವಾಸ್ತವಾಂಶಗಳ ಪರಿಶೀಲನೆ ನಡೆಸುವುದಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.

ಮಂಗಳೂರಿನಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕಾಡುಮನೆ ಪ್ರದೇಶದಿಂದ ಪರಿಶೀಲನೆ ಆರಂಭಿಸಿ ವಾಸ್ತವತೆಯ ಬಗ್ಗೆ ವಿವರ ಪಡೆಯಲಿದ್ದೇನೆ. ಈ ಸಂದರ್ಭ ಕೋಲಾರ ಭಾಗದ ಪ್ರತಿನಿಧಿಗಳು ಉಪಸ್ಥಿತರಿರುತ್ತಾರೆ ಎಂದು ಹೇಳಿದರು.

ಎತ್ತಿನಹೊಳೆ ಯೋಜನೆಯಿಂದ ಕೋಲಾರ ಭಾಗದ ಜನರಿಗೆ ಕುಡಿಯುವ ನೀರಿಗೆ ಸಂಬಂಧಪಟ್ಟು ಹೆಚ್ಚಿನ ಪ್ರಯೋಜನವಾಗದು. ಇದೊಂದು ದುಡ್ಡು ಹೊಡೆಯುವ ಯೋಜನೆ ಎಂದು ನಾನು ಈ ಹಿಂದೆಯೇ ಹೇಳಿದ್ದೆ. ಆಗ ನನ್ನ ಹೇಳಿಕೆಗೆ ಆಕ್ಷೇಪ ವ್ಯಕ್ತವಾಗಿತ್ತು. ಈಗ ಅಲ್ಲಿ ಕಾಮಗಾರಿಯ ಚಿತ್ರಣ ನೋಡಿದ ಬಳಿಕ ಅವರಿಗೆ ನನ್ನ ಹೇಳಿಕೆ ವಾಸ್ತವಾಂಶಗಳಿಂದ ಕೂಡಿದೆ ಎಂದು ಅರಿವಾಗತೊಡಗಿದೆ ಎಂದು ಹೇಳಿದರು.

 
More News

ನಳಿನ್ ಗೆ ಬಿಜೆಪಿ ಕಾರ್ಯಕರ್ತರೇ ವಿಶ್ರಾಂತಿ ನೀಡಲಿದ್ದಾರೆ: ರಮಾನಾಥ್ ರೈ
ನಳಿನ್ ಗೆ ಬಿಜೆಪಿ ಕಾರ್ಯಕರ್ತರೇ ವಿಶ್ರಾಂತಿ ನೀಡಲಿದ್ದಾರೆ: ರಮಾನಾಥ್ ರೈ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 98 ನಾಮಪತ್ರ ಸಲ್ಲಿಕೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 98 ನಾಮಪತ್ರ ಸಲ್ಲಿಕೆ
ಬಾಲಕಿಗೆ ಲೈಂಗಿಕ ಕಿರುಕುಳ ವ್ಯಕ್ತಿಯ ಬಂಧನ
ಬಾಲಕಿಗೆ ಲೈಂಗಿಕ ಕಿರುಕುಳ ವ್ಯಕ್ತಿಯ ಬಂಧನ

Comment Here