Tuesday 23rd, April 2024
canara news

ಖುರೇಷಿ ಮೇಲಿನ ದೌರ್ಜನ್ಯ ವಿರೋಧಿಸಿ ಪ್ರತಿಭಟನೆ

Published On : 19 Apr 2017   |  Reported By : Canaranews Network


ಮಂಗಳೂರು : ಖುರೇಷಿ ಮೇಲೆ ಪೊಲೀಸರು ನಡೆಸಿದ ದೌರ್ಜನ್ಯವನ್ನು ಖಂಡಿಸಿ ಎ.28ರಂದು ಮಂಗಳೂರಿನ ನೆಹರೂ ಮೈದಾನದಲ್ಲಿ 'ಮಂಗಳೂರು ಚಲೋ' ಕಾರ್ಯಕ್ರಮ ನಡೆಯಲಿದ್ದು , 60 ಸಂಘಟನೆಗಳ ಸುಮಾರು 25 ಸಾವಿರ ಮಂದಿ ಇದರಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಯುನೈಟೆಡ್ ಮುಸ್ಲಿಂ ಫ್ರಂಟ್ನ ಮುಖಂಡರು ತಿಳಿಸಿದ್ದಾರೆ .

ಖುರೇಷಿ ಮೇಲೆ ಪೊಲೀಸರು ನಡೆಸಿದ ದೌರ್ಜನ್ಯವನ್ನು ಖಂಡಿಸಿ ಮುಸ್ಲಿಮ್ ಸಂಘಟನೆಗಳು ಎ.4ರಿಂದ ಹೋರಾಟ ನಡೆಸುತ್ತಿದ್ದರೂ ಮುಸ್ಲಿಮ್ ಸಮುದಾಯವನ್ನು ಪ್ರತಿನಿಧಿಸುವ ಜನಪ್ರತಿನಿಧಿಗಳಿಂದ ಯಾವುದೇ ನ್ಯಾಯ ಸಿಕ್ಕಿಲ್ಲ ಎಂದು ಯುನೈಟೆಡ್ ಮುಸ್ಲಿಂ ಫ್ರಂಟ್ನ ಮುಖಂಡರು ಆರೋಪಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಯುನೈಟೆಡ್ ಮುಸ್ಲಿಂ ಫ್ರಂಟ್ನ ಸಂಚಾಲಕ ಹಾಗೂ ಮಾಜಿ ಮೇಯರ್ ಕೆ.ಅಶ್ರಫ್ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ 'ಜಸ್ಟೀಸ್ ಫಾರ್ ಖುರೈಷಿ' ಯುನೈಟೆಡ್ ಮುಸ್ಲಿಂ ಫ್ರಂಟ್ನ ಸಂಚಾಲಕ ಹಾಗೂ ಮಾಜಿ ಮೇಯರ್ ಕೆ.ಅಶ್ರಫ್, ''ಜಿಲ್ಲೆಯಲ್ಲಿ ನಾಲ್ಕು ಲಕ್ಷ ಮುಸ್ಲಿಮ್ ಮತದಾರರಿದ್ದಾರೆ. ಇವರ ಮತಗಳನ್ನು ಪಡೆದು ಈವತ್ತು ಅಧಿಕಾರ ಚಲಾಯಿಸುತ್ತಿರುವ ಮುಸ್ಲಿಮ್ ಸಮುದಾಯದ ಜನಪ್ರತಿನಿಧಿಗಳು ಸಮುದಾಯದ ಮೇಲಾಗುವ ದೌರ್ಜನ್ಯದ ಬಗ್ಗೆ ಸೊಲ್ಲೆತ್ತುತ್ತಿಲ್ಲ'' ಎಂದು ಆರೋಪಿಸಿದರು.

 




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here