Friday 26th, April 2024
canara news

ಕಚ್ಚೂರು ಶ್ರೀ ನಾಗೇಶ್ವರ ದೇವಸ್ಥಾನಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಭೇಟಿ

Published On : 22 Apr 2017   |  Reported By : Ronida Mumbai


(ಚಿತ್ರ / ವರದಿ : ರೊನಿಡಾ ಮುಂಬಯಿ)

ಮುಂಬಯಿ, ಎ.21: ಕರ್ನಾಟಕ ರಾಜ್ಯದ ಮೂಲ ಜನಾಂಗದಲ್ಲೊಂದಾದ ಪ್ರತಿಷ್ಠಿತ ಭಂಡಾರಿ ಸಮುದಾಯವು ತನ್ನ ಕಲದೇವರು ಆಗಿಸಿ ಆರಾಧಿಸಿಕೊಂಡು ಬಂದಿರುವ ಸುಮಾರು 9 ಶತಮಾನಗಳ ಇತಿಹಾಸವುಳ್ಳ ಉಡುಪಿ ಜಿಲ್ಲೆಯ ಬ್ರಹ್ಮಾವರ ಸನಿಹದ ಬಾರ್ಕೂರು ಹನೆಹಳ್ಳಿ ಗ್ರಾಮದಲ್ಲಿನ ಕಚ್ಚೂರು ಶ್ರೀ ನಾಗೇಶ್ವರ ದೇವಸ್ಥಾನಕ್ಕೆ ಇಂದಿಲ್ಲಿ ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಭೇಟಿ ನೀಡಿದರು. ಭಂಡಾರಿ ಮಹಾ ಮಂಡಲದ ಸಂಸ್ಥಾಪಕಧ್ಯಕ್ಷ, ಶ್ರೀ ಕಚ್ಚೂರು ಶ್ರೀ ನಾಗೇಶ್ವರ ದೇವಸ್ಥಾನ ಬಾರ್ಕೂರು ಇದರ ಆಡಳಿತ ಮೊಕ್ತೇಸರ ಹಾಗೂ ಕಚ್ಚೂರು ಶ್ರೀ ನಾಗೇಶ್ವರ ಸೇವಾ ಟ್ರಸ್ಟ್ ಬಾರ್ಕೂರು ಅಧ್ಯಕ್ಷ ಕಡಂದಲೆ ಸುರೇಶ್ ಎಸ್.ಭಂಡಾರಿ ಅವರು ಮುಖ್ಯಮಂತ್ರಿ ಅವರಿಗೆ ಪುಷ್ಪಾರ್ಪಣೆಗೈದು ದೇವಸ್ಥಾನಕ್ಕೆ ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ಯುವಜನ ಸೇವೆ, ಕ್ರೀಡೆ ಹಾಗೂ ಮೀನುಗಾರಿಕಾ ಮತ್ತು ಉಡುಪಿ ಜಿಲ್ಲಾ ಉಸ್ತುವರಿ ಸಚಿವ ಪ್ರಮೋದ್ ಮಧ್ವರಾಜ್, ಮಾಜಿ ಸಚಿವ ವಿನಯಕುಮಾರ್ ಸೊರಕೆ, ಭಂಡಾರಿ ಮಹಾ ಮಂಡಲ ಅಧ್ಯಕ್ಷ ಸದಾಶಿವ ಭಂಡಾರಿ ಸಕಲೇಶಪುರ, ಮಹಾ ಮಂಡಲದ ಗೌರವ ಪ್ರಧಾನ ಕಾರ್ಯದರ್ಶಿ ಮತ್ತು ಸವಿತಾ ಮಾರ್ಗದರ್ಶಿ ಮಾಸಿಕದ ಸಂಪಾದಕ ಸೋಮಶೇಖರ ಎಂ.ಭಂಡಾರಿ, ಬಂಟರ ಸಂಘ ಮುಂಬಯಿ ಇದರ ಮುಖವಾಣಿ ಬಂಟರವಾಣಿ ಮಾಸಿಕದ ಕಾರ್ಯಾಧ್ಯಕ್ಷ ಶಾಂತರಾಮ ಬಿ.ಶೆಟ್ಟಿ, ಭಂಡಾರಿ ಮಹಾ ಮಂಡಲದ ಉಪಾಧ್ಯಕ್ಷೆ ಅಮಿತಾ ಗಿರೀಶ್ ಭಂಡಾರಿ ಮತ್ತಿತರ ಗಣ್ಯರು ಉಪಸ್ಥಿತರಿದ್ದರು. ಖಾಸಾಗಿ ಕಾರ್ಯಕ್ರಮಕ್ಕೆ ಆಗಮಿಸಿದ ಮುಖ್ಯಮಂತ್ರಿಗಳು ದೇವಸ್ಥಾನದಲ್ಲಿ ಮಧ್ಯಾಹ್ನದ ಊಟವನ್ನು ಸವಿದರು.

 




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here