Thursday 8th, May 2025
canara news

ಸಿಎಂ ಹಗಲುಗನಸು ಕಾಣುತ್ತಿದ್ದಾರೆ: ಅನಂತ ಕುಮಾರ್

Published On : 24 Apr 2017   |  Reported By : Canaranews Network


ಮಂಗಳೂರು: ಕರ್ನಾಟಕದಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನ ಸಭೆ ಚುನಾವಣೆಯಲ್ಲಿ ಬಿಜೆಪಿಗೇ ಗೆಲುವು ಸಿಗಲಿದೆ. ಆದರೆ, ಸಿಎಂ ಸಿದ್ದರಾಮಯ್ಯ ಅವರು, ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೆ ಬರಲಿದೆ ಎಂಬ ಹಗಲುಗನಸು ಕಾಣುತ್ತಿದ್ದಾರೆ ಎಂದು ಕೇಂದ್ರ ಸಚಿವ ಅನಂತ ಕುಮಾರ್ ಟೀಕಿಸಿದ್ದಾರೆ.ಮಂಗಳೂರಿನ ವಿಕಾಸ್ ಕಾಲೇಜಿನಲ್ಲಿ ನವೀಕೃತ ಪಿಸಿಯೋಥೆರಪಿ ಲ್ಯಾಬ್ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು,ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.ಕಾಂಗ್ರೆಸ್ ಪಕ್ಷದ ನಾಯಕರಲ್ಲಿ ಭಿನ್ನಮತವಿದೆ.

ಕಾಂಗ್ರೆಸ್ ನ ಜನಾರ್ದನ ಪೂಜಾರಿ ಪ್ರಶ್ನೆಗೆ ಕಾಂಗ್ರೆಸ್ ನಲ್ಲಿ ಉತ್ತರವಿಲ್ಲ. ಯಾರು ನಿಜವಾದ ಜಾತ್ಯಾತೀತರು, ಯಾರು ಢೋಂಗಿ ಜಾತ್ಯಾತೀತರು ಎಂಬುದು ಜನರಿಗೆ ಗೊತ್ತಿದೆ ಎಂದರು.ಇತ್ತೀಚೆಗೆ ಬಂದ ಪಂಚ ರಾಜ್ಯಗಳ ಚುನಾವಣಾ ಫಲಿತಾಂಶಗಳ ಬಗ್ಗೆ ಮಾತನಾಡಿದ ಅವರು, ಅದು ಬಿಜೆಪಿ ಪರವಾಗಿ ಸಿಕ್ಕ ಜನಾದೇಶ. ಮೋದಿ ಅವರ ಕಾರ್ಯಕ್ಕೆ ಸಿಕ್ಕ ಜನಾದೇಶ ಎಂದು ಬಣ್ಣಿಸಿದರು. ಈಗಾಗಲೇ ೧೭ ರಾಜ್ಯದಲ್ಲಿ ಬಿಜೆಪಿ ಅಧಿಕಾರವಿದೆ. ಎಲ್ಲರಿಗೂ ಮೋದಿ ಮಾಡೆಲ್ ಆಡಳಿತ ಬೇಕಾಗಿದೆ ಎಂದರು.

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here