Saturday 27th, July 2024
canara news

ಲೇಡಿಗೋಷನ್ ಆಸ್ಪತ್ರೆ ಕಟ್ಟಡ ಜೂನ್ ಅಂತ್ಯಕ್ಕೆ ಸಿದ್ಧ; ಸಂಸದ ನಳೀನ್

Published On : 26 Apr 2017   |  Reported By : Canaranews Network


ಮಂಗಳೂರು: ಲೇಡಿಗೋಷನ್ ಸರ್ಕಾರಿ ಆಸ್ಪತ್ರೆಯ ಹೊಸ ಕಟ್ಟಡದ ಕಾಮಗಾರಿ ಜೂನ್ ಅಂತ್ಯದೊಳಗೆ ಪೂರ್ಣಗೊಳ್ಳಲಿದ್ದು ಸಾರ್ವಜನಿಕ ಸೇವೆಗೆ ಲಭಿಸಲಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ. ಮಂಗಳವಾರ ಆಸ್ಪತ್ರೆಗೆ ಭೇಟಿ ನೀಡಿ ಕಟ್ಟಡ ಕಾಮಗಾರಿಯ ಪರಿಶೀಲನೆ ನಡೆಸಿ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಅವರು, ೩೧ ಕೋಟಿ ರೂಪಾಯಿ ವೆಚ್ಚದಲ್ಲಿ ಲೇಡಿಗೋಷನ್ ಆಸ್ಪತ್ರೆ ಕಟ್ಟಡದ ಕಾಮಗಾರಿ ಆರಂಭಿಸಲಾಗಿದೆ.

ಎಂಆರ್ ಪಿ ಎಲ್ ತನ್ನ ಕಾರ್ಪೋರೇಟ್ ಸಾಮಾಜಿಕ ಹೊಣೆಗಾರಿಕೆ ನಿಧಿಯಡಿ ೨೧ ಕೋಟಿ ರೂಪಾಯಿ ನೀಡೀದೆ. ೧೦ ಕೋಟಿ ರೂಪಾಯಿ ರಾಷ್ಟ್ರೀಯ ಮಿಷನ್ ಯೋಜನೆಯಡಿ ಒದಗಿಸಲಾಗಿದೆ. ಇನ್ನು, ಹಿಂದಿನ ಗುತ್ತಿಗೆದಾರರಿಂದ ಸಮಸ್ಯೆಯಾಗಿ ಕಟ್ಟಡ ಕಾಮಗಾರಿ ವಿಳಂಬವಾಯಿತು, ಇದೀಗ ಗುತ್ತಿಗೆದಾರರನ್ನು ಬದಲಾಯಿಸಲಾಗಿದ್ದು, ಕಾಮಗಾರಿ ತ್ವರಿತಗತಿಯಲ್ಲಿ ನಡೆದಿದೆ ಎಂದು ಅವರು ಹೇಳಿದರು.

 

 

 




More News

ಪ್ರೊ| ಪಿ.ಎಲ್ ಧರ್ಮ ಅವರಿಗೆ ೨೦೨೪ ವರ್ಷದ ಅತ್ಯುತ್ತಮ ಪಬ್ಲಿಕ್ ರಿಲೇಶನ್ ವ್ಯಕ್ತಿ ಗೌರವ
ಪ್ರೊ| ಪಿ.ಎಲ್ ಧರ್ಮ ಅವರಿಗೆ ೨೦೨೪ ವರ್ಷದ ಅತ್ಯುತ್ತಮ ಪಬ್ಲಿಕ್ ರಿಲೇಶನ್ ವ್ಯಕ್ತಿ ಗೌರವ
ಗೋಪಾಲಕೃಷ್ಣ ಪಬ್ಲಿಕ್ ಟ್ರಸ್ಟ್, ಗೋಕುಲ ಆಷಾಢ ಏಕಾದಶಿ ಪರ್ವ ದಿನ ಆಚರಣೆ
ಗೋಪಾಲಕೃಷ್ಣ ಪಬ್ಲಿಕ್ ಟ್ರಸ್ಟ್, ಗೋಕುಲ ಆಷಾಢ ಏಕಾದಶಿ ಪರ್ವ ದಿನ ಆಚರಣೆ
ಐಲೇಸಾ ದಿ ವಾಯ್ಸ್ ಆಫ್ ಓಷನ್(ರಿ) ಸಂಸ್ಥೆಯಿ0ದ ನಂದಾದೀಪ ಸಂದೀಪ ಕಾರ್ಯಕ್ರಮ
ಐಲೇಸಾ ದಿ ವಾಯ್ಸ್ ಆಫ್ ಓಷನ್(ರಿ) ಸಂಸ್ಥೆಯಿ0ದ ನಂದಾದೀಪ ಸಂದೀಪ ಕಾರ್ಯಕ್ರಮ

Comment Here