Thursday 8th, May 2025
canara news

ಖುರೇಷಿ ಭೇಟಿಯಾಗಲು ಕುಟುಂಬಸ್ಥರಿಗೆ ಅವಕಾಶ ನೀಡಿದ ಕೋರ್ಟ್

Published On : 27 Apr 2017   |  Reported By : Canaranews Network


ಮಂಗಳೂರು: ಕೊಲೆ ಯತ್ನ ಪ್ರಕರಣದ ಆರೋಪಿ ಅಹ್ಮದ್ ಖುರೇಷಿಯನ್ನು ಭೇಟಿಯಾಗಲು ಅವರ ಕುಟುಂಬಸ್ಥರು ಸಹಿತ ಯಾರಿಗೂ ಪೊಲೀಸರು ಅವಕಾಶ ನೀಡುತ್ತಿಲ್ಲ. ಆತನ ಕುಟುಂಬದವರಿಗಾದರೂ ಭೇಟಿಯಾಗಲು ಅವಕಾಶ ನೀಡಬೇಕೆಂದು ಖುರೇಷಿ ಪರವಾಗಿ ನ್ಯಾಯವಾದಿ ದಿನೇಶ್ ಹೆಗ್ಡೆ ಉಳೇಪಾಡಿ ಸೋಮವಾರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.

ಅರ್ಜಿಯನ್ನು ಪರಿಶೀಲನೆಗೆ ಪಡೆದುಕೊಂಡ ಮಂಗಳೂರು 2ನೇ ಜೆಎಂಎಫ್ಸಿ ನ್ಯಾಯಾಲಯವು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಹ್ಮದ್ ಖುರೇಷಿಯೊಂದಿಗೆ ಮಾತನಾಡಲು ಆತನ ಕುಟುಂಬಕ್ಕೆ ಅವಕಾಶ ನೀಡಬೇಕೆಂದು ಜೈಲು ಅಧಿಕಾರಿಗೆ ಮಂಗಳವಾರ ನಿರ್ದೇಶನ ನೀಡಿದೆ.

ಅಹ್ಮದ್ ಖುರೇಶಿ ಕಿಡ್ನಿ ವಿಫಲಗೊಂಡು ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಮೇಲೆ ಪೊಲೀಸ್ ದೌರ್ಜನ್ಯ ನಡೆದಿದೆ ಎನ್ನಲಾಗುತ್ತಿದೆ. ಈ ಪ್ರಕರಣವನ್ನು ಇತ್ತೀಚೆಗೆ ಸಿಐಡಿ ಹಸ್ತಾಂತರಿಸಲಾಗಿದ್ದು, ಸಿಐಡಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here