Sunday 21st, July 2024
canara news

ಕೇಂದ್ರ ಸರ್ಕಾರದ ವಿರುದ್ಧ ಯುವ ಕಾಂಗ್ರೆಸ್ ಪ್ರತಿಭಟನೆ

Published On : 28 Apr 2017   |  Reported By : Canaranews Network


ಮಂಗಳೂರು: ಕೇಂದ್ರ ಸರ್ಕಾರವು ಆಹಾರ ಸಹಿತ ಎಲ್ಲಾ ರೀತಿಯ ಸಾಮಾಗ್ರಿಗಳ ಬೆಲೆ ಏರಿಕೆಯನ್ನು ನಿಯಂತ್ರಿಸಲು ವಿಫಲವಾಗಿದೆ ಎಂದು ಆರೋಪಸಿ ದ.ಕ.ಜಿಲ್ಲಾ ಯುವ ಕಾಂಗ್ರೆಸ್ ಗುರುವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿತು.

ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಿಥುನ್ ರೈ ಮಾತನಾಡಿ, ಕೇಂದ್ರ ಸರ್ಕಾರ ಜನಪರ ಆಡಳಿತ ನಡೆಸುತ್ತೇವೆ ಎನ್ನುತ್ತಾ ದುರಾಡಳಿತ ನಡೆಸುತ್ತಿದೆ. ಬೆಲೆಗಳ ಏರಿಕೆಯನ್ನು ತಡೆಗಟ್ಟಲು ವಿಫಲವಾಗಿದೆ. ದಿನದಿಂದ ದಿನಕ್ಕೆ ಬೆಲೆಗಳ ಏರಿಕೆಯಾಗುತ್ತಲೇ ಇದೆ. ಅಭಿವೃದ್ಧಿ ವಿಷಯದಲ್ಲೂ ರಾಜಕೀಯ ಮಾಡುತ್ತಿದೆ.

ಎನ್ ಡಿ ಎ ಮಿತ್ರ ಪಕ್ಷಗಳು ಆಡದಲ್ಲಿಲ್ಲದ ರಾಜ್ಯಗಳಿಗೆ ನೀಡುವ ಅನುದಾನ ವಿತರಣೆಯಲ್ಲಿ ತಾರತಮ್ಯ ಎಸಗುತ್ತಿದೆ ಎಂದು ಆಪಾದಿಸಿದರು. ಜನರಿಕ್ ಔಷಧದ ಹೆಸರಿನಲ್ಲಿ ಆ ಔಷಧವನ್ನು ಉತ್ಪನ್ನ ಮಾಡಲು ತನಗೆ ಬೇಕಾದ ಕಂಪೆನಿಗೆ ಪ್ರಧಾನಿ ನರೇಂದ್ರ ಮೋದಿ ಷಡ್ಯಂತರ ನಡೆಸುತ್ತಿದ್ದಾರೆ. ಅದಕ್ಕಾಗಿ ಕಡ್ಡಾಯವಾಗಿ ವೈದ್ಯರು ಜನರಿಕ್ ಔಷಧಿಯ ಚೀಟಿ ನೀಡಲು ಸೂಚನೆ ನೀಡಲಾಗುತ್ತಿದೆ ಎಂದು ಮಿಥುನ್ ರೈ ಹೇಳಿದರು.
More News

ಪ್ರೊ| ಪಿ.ಎಲ್ ಧರ್ಮ ಅವರಿಗೆ ೨೦೨೪ ವರ್ಷದ ಅತ್ಯುತ್ತಮ ಪಬ್ಲಿಕ್ ರಿಲೇಶನ್ ವ್ಯಕ್ತಿ ಗೌರವ
ಪ್ರೊ| ಪಿ.ಎಲ್ ಧರ್ಮ ಅವರಿಗೆ ೨೦೨೪ ವರ್ಷದ ಅತ್ಯುತ್ತಮ ಪಬ್ಲಿಕ್ ರಿಲೇಶನ್ ವ್ಯಕ್ತಿ ಗೌರವ
ಗೋಪಾಲಕೃಷ್ಣ ಪಬ್ಲಿಕ್ ಟ್ರಸ್ಟ್, ಗೋಕುಲ ಆಷಾಢ ಏಕಾದಶಿ ಪರ್ವ ದಿನ ಆಚರಣೆ
ಗೋಪಾಲಕೃಷ್ಣ ಪಬ್ಲಿಕ್ ಟ್ರಸ್ಟ್, ಗೋಕುಲ ಆಷಾಢ ಏಕಾದಶಿ ಪರ್ವ ದಿನ ಆಚರಣೆ
ಐಲೇಸಾ ದಿ ವಾಯ್ಸ್ ಆಫ್ ಓಷನ್(ರಿ) ಸಂಸ್ಥೆಯಿ0ದ ನಂದಾದೀಪ ಸಂದೀಪ ಕಾರ್ಯಕ್ರಮ
ಐಲೇಸಾ ದಿ ವಾಯ್ಸ್ ಆಫ್ ಓಷನ್(ರಿ) ಸಂಸ್ಥೆಯಿ0ದ ನಂದಾದೀಪ ಸಂದೀಪ ಕಾರ್ಯಕ್ರಮ

Comment Here