Friday 9th, May 2025
canara news

ಶ್ರವಣಬೆಳಗೊಳ ಮಹಾಮಸ್ತಕಾಭಿಷೇಕ: ಜೈನ ಕಾಶಿ ಮೂಡಬಿದಿರೆಗೆ 1 ಕೋಟಿ

Published On : 29 Apr 2017   |  Reported By : Canaranews Network


ಮಂಗಳೂರು: ಶ್ರವಣಬೆಳಗೊಳದಲ್ಲಿ ನಡೆಯಲಿರುವ ಮಹಾ ಮಸ್ತಕಾಭಿಷೇಕದ ಹಿನ್ನೆಲೆಯಲ್ಲಿ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಜೈನ ಕಾಶಿ ಮೂಡಬಿದಿರೆಯ ಸಾವಿರ ಕಂಬದ ಬಸದಿ ಹಾಗೂ ಜೈನಮಠಕ್ಕೆ ಮೂಲ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ ದ.ಕ. ಜಿಲ್ಲಾಧಿಕಾರಿ ಡಾ| ಜಗದೀಶ್ ಅವರು ವಿವಿಧ ಅಧಿಕಾರಿಗಳೊಂದಿಗೆ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸಾವಿರ ಕಂಬ ಬಸದಿಯ ಪ್ರಾಂಗಣಕ್ಕೆ ಶಿಲಾಹಾಸು, ಆಧುನಿಕ ತಂತ್ರಜ್ಞಾನದ ವಿದ್ಯುದ್ದೀಪ ಅಳವಡಿಕೆ, ಸೋಲಾರ್ ದೀಪ, ಕುಡಿಯುವ ನೀರು, ಶೌಚಾಲಯ, ವಾಹನ ನಿಲುಗಡೆ ಇನ್ನಿತರ ಮೂಲ ಸೌಕರ್ಯಗಳನ್ನು ಒದಗಿಸುವ ಬಗ್ಗೆ ಜಿಲ್ಲಾಧಿಕಾರಿ ಅವರು ಜೈನಮಠದ ಭಟ್ಟಾರಕ ಚಾರುಕೀರ್ತಿ ಸ್ವಾಮೀಜಿ ಮತ್ತು ಶಾಸಕ ಅಭಯಚಂದ್ರ ಜೈನ್ ಜೊತೆ ಚರ್ಚಿಸಿದರು.15 ದಿನಗಳೊಳಗೆ ತನಗೆ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು. ಈ ಎಲ್ಲ ಮೂಲ ಸೌಕರ್ಯಗಳಿಗೆ ಸರಕಾರದಿಂದ 1 ಕೋಟಿ ರೂ. ವೆಚ್ಚದ ಅನುದಾನ ಬಿಡುಗಡೆಗೆ ಪ್ರಯತ್ನಿಸುವುದಾಗಿ ಅವರು ಹೇಳಿದರು.

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here