Monday 29th, April 2024
canara news

ಮಂಗಳೂರು- ಬೆಂಗಳೂರು ಇಂಡಿಗೋ ವಿಮಾನ ಯಾನ ಆರಂಭ

Published On : 02 May 2017   |  Reported By : Canaranews Network


ಮಂಗಳೂರು: ಮಂಗಳೂರು - ಬೆಂಗಳೂರು ಹಾಗೂ ಮಂಗಳೂರು -ಮುಂಬಯಿ ಮಧ್ಯೆ ಅತಿ ಕಡಿಮೆ ಪ್ರಯಾಣ ದರದ ಇಂಡಿಗೊ ವಿಮಾನ ಸೇವೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮೇ 1ರಂದು ಆರಂಭಗೊಂಡಿದೆ.ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಂಡಿಗೋ ವಿಮಾನ ನಂ. 6 ಇ 6724 ಸೋಮವಾರ ಬೆಳಗ್ಗೆ ಬೆಂಗಳೂರಿನಿಂದ ಆಗಮಿಸಿದಾಗ ಅದನ್ನು ಸಾಂಪ್ರಾದಾಯಿಕವಾಗಿ ಸ್ವಾಗತಿಸಲಾಯಿತು. ಬಳಿಕ ಜರಗಿದ ಸರಳ ಸಮಾರಂಭದಲ್ಲಿ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಹಾಗೂ ಸಂಸದ ನಳಿನ್ ಕುಮಾರ್ ಕಟೀಲು ದೀಪ ಬೆಳಗಿಸಿದರು.

ವಿಮಾನ ನಿಲ್ದಾಣ ನಿರ್ದೇಶಕ ಜೆ.ಟಿ. ರಾಧಾಕೃಷ್ಣ ಕೇಕ್ ಕತ್ತರಿಸಿದರು. ಮಾಜಿ ಸಚಿವ, ಶಾಸಕ ಅಭಯಚಂದ್ರ ಜೈನ್, ಶಾಸಕ ಜೆ.ಆರ್. ಲೋಬೋ ಮುಖ್ಯ ಅತಿಥಿಯಾಗಿದ್ದರು. ದ.ಕ. ಜನತೆಗೆ ಪೂರಕ ಸಚಿವ ರಮಾನಾಥ ರೈ ಮತ್ತು ಶಾಸಕ ಜೆ.ಆರ್. ಲೋಬೋ ಮಾತನಾಡಿ, ಕಡಿಮೆ ಪ್ರಯಾಣ ದರದ ಇಂಡಿಗೋ ವಿಮಾನ ಸೇವೆ ಆರಂಭ ಗೊಂಡಿರುವುದರಿಂದ ಅವಿಭಜಿತ ದ.ಕ. ಜಿಲ್ಲೆಯ ಪ್ರಯಾಣಿಕರಿಗೆ ಅನುಕೂಲವಾಗಿದೆ. ಹೆಚ್ಚು ಮಂದಿ ವಿಮಾನ ಪ್ರಯಾಣವನ್ನು ಅವಲಂಬಿಸಲು ಪೂರಕವಾಗಿದೆ ಎಂದರು.ಈ ಸಂದರ್ಭ ಇಂಡಿಗೊ ನಿರ್ವಹಣೆ ಮತ್ತು ಗ್ರಾಹಕ ಸೇವೆ ವಿಭಾಗದ ಸಹಾಯಕ ಉಪಾಧ್ಯಕ್ಷ ಚಾರ್ನೆಲ್ ಡಿ'ಸೋಜಾ, ಮಂಗಳೂರು ಕೇಂದ್ರದ ಮುಖ್ಯಸ್ಥೆ ಅರ್ಚನಾ ಉಪಸ್ಥಿತರಿದ್ದರು. ಮಂಗಳೂರು - ಬೆಂಗಳೂರು ಮಧ್ಯೆ 2 ವಿಮಾನಗಳು ಹಾಗೂ ಮಂಗಳೂರು-ಮುಂಬಯಿ ಮಧ್ಯೆ 1 ವಿಮಾನ ಪ್ರತೀ ದಿನ ಸಂಚರಿಸಲಿದೆ. ಮೇ 15ರಿಂದ ಮಂಗಳೂರು- ಬೆಂಗಳೂರು ಮಧ್ಯೆ ಇನ್ನೊಂದು ವಿಮಾನ ಸೇವೆ ಆರಂಭಗೊಳ್ಳಲಿದೆ. ಮಂಗಳೂರು - ಬೆಂಗಳೂರಿಗೆ ಕನಿಷ್ಠ ದರ 1,499 ರೂ., ಮಂಗಳೂರು- ಮುಂಬಯಿಗೆ 1,799 ರೂ. ಕನಿಷ್ಠ ದರ ನಿಗದಿಪಡಿಸಲಾಗಿದೆ.

 




More News

ಎ.30; ಪಟ್ಲ  ಸತೀಶ್  ಶೆಟ್ಟಿ ಮಂಗಳೂರು ಪ್ರೆಸ್  ಕ್ಲಬ್ ಗೌರವ ಅತಿಥಿ
ಎ.30; ಪಟ್ಲ ಸತೀಶ್ ಶೆಟ್ಟಿ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ

Comment Here