Thursday 25th, July 2024
canara news

ಕಾಂಗ್ರೆಸ್ ಸೇರಲು ಬಿಜೆಪಿ ನಾಯಕರ ಒಲವು; ಡಾ. ಜಿ.ಪರಮೇಶ್ವರ್

Published On : 03 May 2017   |  Reported By : Canaranews Network

ಮಂಗಳೂರು: ೨೦೧೮ರ ಚುನಾವಣೆಗೆ ಕಾಂಗ್ರೆಸ್ ಪಕ್ಷ ಸಜ್ಜಾಗುತ್ತಿದೆ. ಪಕ್ಷವನ್ನು ಬಲಪಡಿಸಲು ತಾನು ಈ ಪ್ರವಾಸ ಕೈಗೊಂಡಿದ್ದೇನೆ. ಪಕ್ಷದ ಸಾಂಸ್ಥಿಕ ಚುನಾವಣೆಗೆ ವೇಳಾಪಟ್ಟಿ ನಿಗದಿಯಾಗಿದ್ದು, ಈ ಬಾರಿಯ ಎಐಸಿಸಿ ಅಧಿವೇಶನ ಬೆಂಗಳೂರಿನಲ್ಲಿ ನಡೆಯಲಿದೆ. ಬಿಜೆಪಿಯ ಅನೇಕ ನಾಯಕರು ಪಕ್ಷ ಸೇರಲು ಒಲವು ತೋರಿದ್ದು, ಅಂತಹವರ ಪಟ್ಟಿ ಸಿದ್ಧವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ. ಜಿ.ಪರಮೇಶ್ವರ್ ಹೇಳಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕರೋಪಾಡಿ ಜಲೀಲ್, ಕಾರ್ತೀಕ್ ರಾಜ್ ನಿವಾಸಕ್ಕೆ ಭೇಟಿ ನೀಡಿದ್ದೇನೆ.

ಈ ಪ್ರಕರಣಗಳನ್ನು ಕೋಮು ಪ್ರಚೋದನೆಗೆ ಬಳಸಲಾಗಿತ್ತು. ಈ ಹಿನ್ನೆಲೆಯಲ್ಲಿ ತಾನು ಭೇಟಿ ನೀಡಿದ್ದೇನೆ ಎಂದರು. ೧೨೪ ಶಾಸಕರಿಗೆ ಟಿಕೆಟ್ ನೀಡುವ ಚಿಂತನೆ ಇದ್ದು, ಜೆಡಿಎಸ್ ನಿಂದ ಸಾಕಷ್ಟು ಮಂದಿ ಪಕ್ಷಕ್ಕೆ ಸೇರಲಿದ್ದಾರೆ. ಪಕ್ಷದ ನಾಯಕತ್ವ ವಿಚಾರ ಹೈಕಮಾಂಡ್ ನಿರ್ಧಾರಕ್ಕೆ ಬಿಟ್ಟದ್ದಾಗಿದೆ ಎಂದ ಅವರು ಹೇಳಿದರು.

More News

ಪ್ರೊ| ಪಿ.ಎಲ್ ಧರ್ಮ ಅವರಿಗೆ ೨೦೨೪ ವರ್ಷದ ಅತ್ಯುತ್ತಮ ಪಬ್ಲಿಕ್ ರಿಲೇಶನ್ ವ್ಯಕ್ತಿ ಗೌರವ
ಪ್ರೊ| ಪಿ.ಎಲ್ ಧರ್ಮ ಅವರಿಗೆ ೨೦೨೪ ವರ್ಷದ ಅತ್ಯುತ್ತಮ ಪಬ್ಲಿಕ್ ರಿಲೇಶನ್ ವ್ಯಕ್ತಿ ಗೌರವ
ಗೋಪಾಲಕೃಷ್ಣ ಪಬ್ಲಿಕ್ ಟ್ರಸ್ಟ್, ಗೋಕುಲ ಆಷಾಢ ಏಕಾದಶಿ ಪರ್ವ ದಿನ ಆಚರಣೆ
ಗೋಪಾಲಕೃಷ್ಣ ಪಬ್ಲಿಕ್ ಟ್ರಸ್ಟ್, ಗೋಕುಲ ಆಷಾಢ ಏಕಾದಶಿ ಪರ್ವ ದಿನ ಆಚರಣೆ
ಐಲೇಸಾ ದಿ ವಾಯ್ಸ್ ಆಫ್ ಓಷನ್(ರಿ) ಸಂಸ್ಥೆಯಿ0ದ ನಂದಾದೀಪ ಸಂದೀಪ ಕಾರ್ಯಕ್ರಮ
ಐಲೇಸಾ ದಿ ವಾಯ್ಸ್ ಆಫ್ ಓಷನ್(ರಿ) ಸಂಸ್ಥೆಯಿ0ದ ನಂದಾದೀಪ ಸಂದೀಪ ಕಾರ್ಯಕ್ರಮ

Comment Here