Thursday 25th, April 2024
canara news

ಬೈಕ್ಗಳಿಗೆ ನೀರಿನ ಟ್ಯಾಂಕರ್ ಢಿಕ್ಕಿ: ನಾಲ್ವರಿಗೆ ಗಾಯ

Published On : 04 May 2017   |  Reported By : Canaranews Network


ಮಂಗಳೂರು: ತೊಕ್ಕೊಟ್ಟು ಚೆಂಬುಗುಡ್ಡೆ ಬಳಿ ನೀರಿನ ಟ್ಯಾಂಕರ್ ಮೂರು ಬೈಕ್ಗಳಿಗೆ ಢಿಕ್ಕಿ ಹೊಡೆದು ಸರಣಿ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಗಂಭೀರ ಗಾಯಗೊಂಡರೆ, ಇಬ್ಬರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.ಬೈಕ್ ಸವಾರರಾದ ಅನ್ಸಾರ್ ಮತ್ತು ಆನಂದ ಅವರ ಸ್ಥಿತಿ ಗಂಭೀರವಾಗಿ ಗಾಯಧಿಗೊಂಡವರು.

ಹರೀಶ್ ಮತ್ತು ಮುಸ್ತಾಫ ಅವರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.ಬಬ್ಬುಕಟ್ಟೆ ಕಡೆಯಿಂದ ತೊಕ್ಕೊಟ್ಟು ಕಡೆ ನೀರು ಸಾಗಿಸುತ್ತಿದ್ದ ಟ್ಯಾಂಕರ್ ವಾಹನವೊಂದನ್ನು ಓವರ್ಟೇಕ್ ಮಾಡುವ ಭರದಲ್ಲಿ ಎದುರಿನಿಂದ ಬರುತ್ತಿದ್ದ ಮೂರು ಬೈಕ್ಗಳಿಗೆ ಢಿಕ್ಕಿ ಹೊಡೆದಿದ್ದು, ಈ ಸಂದರ್ಭದಲ್ಲಿ ಬೈಕ್ಗಳಲ್ಲಿ ಸಂಚರಿಸುತ್ತಿದ್ದ ನಾಲ್ವರು ಗಾಯಗೊಂಡಿದ್ದು,

ದೇರಳಕಟ್ಟೆಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.ಉಳ್ಳಾಲ ಪೊಲೀಸರು ಅಪಘಾತ ಎಸಗಿದ ಲಾರಿ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

 




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here