Saturday 20th, July 2024
canara news

ಜಿಲ್ಲೆಯ 8 ಸ್ಥಾನಗಳಲ್ಲೂ ಕಾಂಗ್ರೆಸ್ಸನ್ನು ಗೆಲ್ಲಿಸಿ

Published On : 04 May 2017   |  Reported By : Canaranews Network


ಮಂಗಳೂರು: ದ.ಕ. ಜಿಲ್ಲೆಯ ಕಾಂಗ್ರೆಸ್ನಲ್ಲಿ ನಿಷ್ಠಾವಂತ ಕಾರ್ಯಕರ್ತರು ಹೆಚ್ಚಿದ್ದು, ಮುಂದಿನ ಚುನಾವಣೆಯಲ್ಲಿ ಜಿಲ್ಲೆಯ ಎಂಟೂ ಸ್ಥಾನಗಳನ್ನು ಗೆಲ್ಲಿಸುವ ಪ್ರಯತ್ನ ಮಾಡಬೇಕು. ಕಳೆದ ಬಾರಿ ಕೆಪಿಸಿಸಿ ವತಿಯಿಂದ ಮಂಗಳೂರಿನಲ್ಲಿ ನಡೆದ ಇಂದಿರಾಗಾಂಧಿ ಜನ್ಮ ಶತಾಬ್ದ ಸಮಾರಂಭವನ್ನು ಇಲ್ಲಿನ ನಾಯಕರು ಅತ್ಯಂತ ಯಶಸ್ವಿಯಾಗಿ ನಡೆಸಿಕೊಟ್ಟಿದ್ದು, ಈ ಕುರಿತು ಎಐಸಿಸಿ ನಾಯಕರು ಮೆಚ್ಚುಗೆ ವ್ಯಕ್ತಪಡಿಸಿ ಹೆಚ್ಚಿನ ವಿಶ್ವಾಸವಿರಿಸಿದ್ದಾರೆ ಎಂದು ರಾಜ್ಯ ಗೃಹ ಸಚಿವ, ಕೆಪಿಸಿಸಿ ಅಧ್ಯಕ್ಷ ಡಾ|ಜಿ.ಪರಮೇಶ್ವರ್ ಹೇಳಿದರು. ಮಂಗಳೂರಿನ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.

ಕಾಂಗ್ರೆಸ್ ರಾಜ್ಯದ ಎಲ್ಲ 224 ಕ್ಷೇತ್ರಗಳನ್ನೂ ಗೆಲ್ಲುವ ಪ್ರಯತ್ನ ಮಾಡಲಿದ್ದು, ಅದಕ್ಕಾಗಿ ಬೂತ್ ಮಟ್ಟದಿಂದಲೇ ಪಕ್ಷವನ್ನು ಬಲಪಡಿಸುವ ಕಾರ್ಯ ಮಾಡಬೇಕು. ಒಂದು ವೇಳೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಇಲ್ಲಿನ ಶಾಂತಿ-ಸುವ್ಯವಸ್ಥೆ ಹದಗೆಡಲಿದೆ. ನಾವು ಎಲ್ಲರೂ ಒಗ್ಗಟ್ಟಾಗಿ ಪಕ್ಷವನ್ನು ಗೆಲ್ಲಿಸದೇ ಇದ್ದರೆ ಕಾಂಗ್ರೆಸ್ ಯಾವ ಸ್ಥಿತಿಗೆ ತಲುಪ ಬಹುದು ಎಂಬುದನ್ನು ಕಾರ್ಯಕರ್ತರು ಆಲೋಚಿಸಬೇಕು. ಎಐಸಿಸಿ ಅ ಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಕರ್ನಾಟಕದ ಮೇಲೆ ಹೆಚ್ಚಿನ ವಿಶ್ವಾಸವಿರಿಸಿದ್ದಾರೆ. ನಾವು ಅವರ ವಿಶ್ವಾಸವನ್ನು ಉಳಿಸುವ ಪ್ರಯತ್ನ ಮಾಡಬೇಕು ಎಂದರು.

 
More News

ಡ್ರಾಮಾ ಜೂನಿಯರ್ ವಿಜೇತೆಗೆ ವಿಪ್ರ ಸನ್ಮಾನ
ಡ್ರಾಮಾ ಜೂನಿಯರ್ ವಿಜೇತೆಗೆ ವಿಪ್ರ ಸನ್ಮಾನ
 ಬೆಳುವಾಯಿ ಮರಿಯಮ್ ನಿಕೇ ತನ್ ಶಾಲೆಯಲ್ಲಿ ಹೆತ್ತವರಿಗೆ ಮಾಹಿತಿ
ಬೆಳುವಾಯಿ ಮರಿಯಮ್ ನಿಕೇ ತನ್ ಶಾಲೆಯಲ್ಲಿ ಹೆತ್ತವರಿಗೆ ಮಾಹಿತಿ
ಅಂಡಮಾನ್‍ನಲ್ಲಿ ಸಂಭ್ರಮಿಸಲ್ಪಟ್ಟ 19ನೇ ರಾಷ್ಟ್ರೀಯ ಕನ್ನಡ ಸಂಸ್ಕೃತಿ ಸಮ್ಮೇಳನ
ಅಂಡಮಾನ್‍ನಲ್ಲಿ ಸಂಭ್ರಮಿಸಲ್ಪಟ್ಟ 19ನೇ ರಾಷ್ಟ್ರೀಯ ಕನ್ನಡ ಸಂಸ್ಕೃತಿ ಸಮ್ಮೇಳನ

Comment Here