Friday 9th, May 2025
canara news

ಜಲೀಲ್ ಕರೋಪಾಡಿ ಕೊಲೆ ಪ್ರಕರಣ; ಸಿಐಡಿ ತನಿಖೆಗೆ ತಂದೆ ಆಗ್ರಹ

Published On : 10 May 2017   |  Reported By : Canaranews Network


ಮಂಗಳೂರು: ದ.ಕ.ಜಿಲ್ಲೆಯ ವಿಟ್ಲ ಠಾಣಾ ವ್ಯಾಪ್ತಿಯ ಕರೋಪಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಎ. ಅಬ್ದುಲ್ ಜಲೀಲ್ ಕರೋಪಾಡಿ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪ್ರಕರಣದ ತನಿಖೆಯನ್ನು ಸಿಐಡಿ ನಡೆಸಬೇಕು ಎಂದು ಜಲೀಲ್ ಅವರ ತಂದೆ ಎ.ಉಸ್ಮಾನ್ ಕರೋಪಾಡಿ ಆಗ್ರಹಿಸಿದ್ದಾರೆ.

ಮಂಗಳೂರಿನಲ್ಲಿ ಮಂಗಳವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ನನ್ನ ಪುತ್ರನ ಕೊಲೆ ಕಾರಣವಾಗಿರುವ ಮೂಲ ವ್ಯಕ್ತಿ ಹಾಗೂ ಸುತ್ರಧಾರನನ್ನು ಇನ್ನೂ ದಸ್ತಗಿರಿ ಮಾಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಐಜಿಪಿಯವರು ಇತ್ತೀಚೆಗೆ ಪತ್ರಿಕಾಗೋಷ್ಠಿಯ ಸಂದರ್ಭ ದಿನೇಶ್ ಶೆಟ್ಟಿ ಹೆಸರನ್ನು ಹೇಳಿದ್ದರು. ಎಡಿಜಿಪಿ ಅಲೋಕ್ ಕುಮಾರ್ ಕೂಡ ದಿನೇಶ್ ಬಂಧನಕ್ಕೆ ಪೊಲೀಸ್ ವರಿಷ್ಠಾಧಿಕಾರಿಗೆ ಸೂಚನೆ ನೀಡಿರುವುದಾಗಿ ಹೇಳಿದ್ದಾರೆ. ಆದರೆ, ಎಸ್ಪಿಯವರು ಮಾತ್ರ ಆತ ಕೇರಳದಲ್ಲಿ ತಲೆ ಮರೆಸಿಕೊಂಡೀದ್ದಾನೆ ಎಂದು ಸಚಿವರಿಗೆ ಹೇಳಿಕೆ ನೀಡೀದ್ದಾರೆ. ಆದರೆ, ಆತ ಊರಲ್ಲಿಯೇ ಇದ್ದುಕೊಂಡು ಧಾರ್ಮಿಕ ಸಮಾರಂಭಗಳಲ್ಲಿ ಭಾಗವಹಿಸಿಕೊಂಡು ಇದ್ದರೂ ಪೊಲೀಸರು ಮಾತ್ರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here