ಉಜಿರೆ: ಧರ್ಮಸ್ಥಳದಲ್ಲಿ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಮೂರು ದಿನಗಳಲ್ಲಿ ವಿವಿಧ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ವಾರ್ಷಿಕೋತ್ಸವ ನಡೆಯಿತು.
ತೋರಣ ಮುಹೂರ್ತ, ವಿಮಾನ ಶುದ್ಧಿ, ನಾಂದಿಮಂಗಲ, ಚತುರ್ವಿಶಂತಿ ತೀರ್ಥಂಕರರ ಆರಾಧನೆ, ವಾಸ್ತು ಪೂಜೆ, ನವಗ್ರಹ ಶಾಂತಿ ಹಾಗೂ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿಗೆ 108 ಕಲಶಗಳಿಂದ ಅಭಿಷೇಕ ನಡೆಯಿತು.