Sunday 16th, June 2024
canara news

ಚಾರ್ಮಾಡಿ ಘಾಟಿಯಲ್ಲಿ ಉರುಳಿದ ಬಸ್, 2 ಮಂದಿ ಸಾವು

Published On : 16 May 2017   |  Reported By : Canaranews Network

ಮಂಗಳೂರು: ಚಿಕ್ಕಮಗಳೂರು -ದಕ್ಷಿಣ ಕನ್ನಡ ಜಿಲ್ಲೆ ಗಡಿಭಾಗದ ಚಾರ್ಮಾಡಿ ಘಾಟ್ ನಲ್ಲಿ ಮಂಗಳವಾರ ಮಧ್ಯಾಹ್ನ ಕೇರಳ ನೋಂದಣಿ ಇರುವ ಖಾಸಗಿ ಬಸ್ ಕಂದಕಕ್ಕೆ ಉರುಳಿದೆ. ಈ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಮೂಡಿಗೆರೆ ಕಡೆಯಿಂದ ಚಾರ್ಮಾಡಿ ಮೂಲಕ ಹೋಗುತ್ತಿದ್ದ ಮಿನಿಬಸ್, ಚಾರ್ಮಾಡಿ ಘಾಟಿಯ 5ನೇ ತಿರುವಿನಲ್ಲಿ ಈ ಅಪಘಾತಕ್ಕೀಡಾಯಿತು. ಕೇರಳ ಮೂಲದ KL 16-2617 ನೋಂದಣಿ ಇರುವ ಖಾಸಗಿ ಬಸ್ಸೊಂದು ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದೆ.ಬಸ್ಸಿನಲ್ಲಿ ಸುಮಾರು 40ಕ್ಕೂ ಅಧಿಕ ಪ್ರಯಾಣಿಕರಿದ್ದರು.

ಈ ದುರ್ಘಟನೆಯಿಂದಾಗಿ ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದು, ಅನೇಕರಿಗೆ ಗಾಯಗಳಾಗಿವೆ.ಘಟನಾ ಸ್ಥಳಕ್ಕೆ ಬಣಕಲ್ ಮತ್ತು ಧರ್ಮಸ್ಥಳದ ಪೊಲೀಸರು ಆಗಮಿಸಿದ್ದು, ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದಾರೆ. ಗಾಯಗೊಂಡವರಿಗೆ ಸಮೀಪದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

More News

ಸಂಸದ ಗೋಪಾಲ್ ಸಿ.ಶೆಟ್ಟಿ ಆಯೋಜಿಸಿದ `ಶ್ರೀರಾಮ ಭಂಡಾರ' ಧಾರ್ಮಿಕ ಕಾರ್ಯಕ್ರಮ
ಸಂಸದ ಗೋಪಾಲ್ ಸಿ.ಶೆಟ್ಟಿ ಆಯೋಜಿಸಿದ `ಶ್ರೀರಾಮ ಭಂಡಾರ' ಧಾರ್ಮಿಕ ಕಾರ್ಯಕ್ರಮ
ಭಾರತ್ ಬ್ಯಾಂಕ್ ; ನವೀನ್ ಕುಮಾರ್ ಗುಳಿಬೆಟ್ಟು ವೃತ್ತಿ ನಿವೃತ್ತಿ-ಬೀಳ್ಕೋಡುಗೆ
ಭಾರತ್ ಬ್ಯಾಂಕ್ ; ನವೀನ್ ಕುಮಾರ್ ಗುಳಿಬೆಟ್ಟು ವೃತ್ತಿ ನಿವೃತ್ತಿ-ಬೀಳ್ಕೋಡುಗೆ
ಧರ್ಮಸ್ಥಳದಲ್ಲಿ 52ನೆ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ: 123 ಜೊತೆ ವಧು-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ
ಧರ್ಮಸ್ಥಳದಲ್ಲಿ 52ನೆ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ: 123 ಜೊತೆ ವಧು-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

Comment Here