ಮಂಗಳೂರು: ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಕಲ್ಲಡ್ಕ ಸಮೀಪದ ಬಾಳ್ತಿಲ ಗ್ರಾಮದ ಕೊಡಂಗೆ ಕೋಡಿ ಎಂಬಲ್ಲಿ ಯುವಕನೊಬ್ಬನನ್ನು ಚಿಕ್ಕಪ್ಪನ ಮಗ ಕ್ಷುಲ್ಲಕ ಕಾರಣಕ್ಕೆ ಚೂರಿಯಿಂದ ಇರಿದು ಹತ್ಯೆ ಮಾಡಿದ ಘಟನೆ ಸೋಮವಾರ ತಡರಾತ್ರಿ ನಡೆದಿದೆ. ಹತ್ಯೆಗಿಡಾದ ಯುವಕನನ್ನು ರಂಜಿತ್ (28)ಎಂದು ಗುರುತಿಸಲಾಗಿದ್ದು, ಮೃತರಿಗೆ ಹೆಂಡತಿ ಮತ್ತು ಮೂರು ತಿಂಗಳ ಹೆಣ್ಣು ಮಗು ಇದೆ.
ಸ್ಥಳಕ್ಕೆ ಬಂಟ್ವಾಳ ನಗರ ಠಾಣಾ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿ ತನಿಖೆ ನಡೆಸುತ್ತಿದ್ದಾರೆ.